Weather Today: ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ; ದೆಹಲಿ, ಚೆನ್ನೈನಲ್ಲಿ ಭಾರೀ ಮಳೆ

Weather Today: ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ; ದೆಹಲಿ, ಚೆನ್ನೈನಲ್ಲಿ ಭಾರೀ ಮಳೆ
ಮಳೆಯ ಚಿತ್ರ

Weather Forecast Today: ಇಂದು ದೆಹಲಿ, ಚೆನ್ನೈ, ಜಮ್ಮು ಮತ್ತು ಕಾಶ್ಮೀರ, ಲಡಾಖ್​ನಲ್ಲಿ ಭಾರೀ ಮಳೆಯಾಗಲಿದೆ. ಹಿಮಾಚಲ ಪ್ರದೇಶದಲ್ಲಿ ಹಿಮ ಮತ್ತು ಗುಡುಗು ಸಹಿತ ಮಳೆಯಾಗಲಿದೆ.

TV9kannada Web Team

| Edited By: Sushma Chakre

Jan 09, 2022 | 6:03 AM

Karnataka Rain: ಕರ್ನಾಟಕದಲ್ಲಿ ಕಳೆದೊಂದು ತಿಂಗಳಿನಿಂದ ಚಳಿ ಹೆಚ್ಚಾಗಿತ್ತು. ಇದೀಗ 2-3 ದಿನಗಳಿಂದ ರಾಜ್ಯಾದ್ಯಂತ ಶೀತಗಾಳಿ ಕೊಂಚ ಕಡಿಮೆಯಾಗುತ್ತಿದೆ. ಈಗೊಂದು 2 ವಾರಗಳಿಂದ ರಾಜ್ಯಾದ್ಯಂತ ಮಳೆ ಸಂಪೂರ್ಣವಾಗಿ ಕಡಿಮೆಯಾಗಿತ್ತು. ಆದರೆ, ಇಂದಿನಿಂದ ಕೆಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರುವ ಸಾಧ್ಯತೆಯಿದೆ. ಪಕ್ಕದ ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳು ಸೇರಿದಂತೆ ದೆಹಲಿ, ಜಮ್ಮು ಕಾಶ್ಮೀರದಲ್ಲೂ ಮಳೆ ಹೆಚ್ಚಾಗಿದೆ. ಹಾಗೇ, ಕೊವಿಡ್ ಕೇಸುಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಅನಾರೋಗ್ಯಪೀಡಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ.

ಇಂದು (ಭಾನುವಾರ) ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಹಿಮ ಬೀಳುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶದ ಮೇಲೆ ವ್ಯಾಪಕವಾದ ಮಳೆ, ಹಿಮ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಉತ್ತರಾಖಂಡದಲ್ಲಿ ಸಾಕಷ್ಟು ವ್ಯಾಪಕವಾದ ಮಳೆ, ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಆದರೆ, ಪಶ್ಚಿಮ ಉತ್ತರ ಪ್ರದೇಶ ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ಉತ್ತರ ಪ್ರದೇಶ, ಹರಿಯಾಣ, ದೆಹಲಿ, ಪಶ್ಚಿಮ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಒಳಭಾಗದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ.

ಒಡಿಶಾ, ಜಾರ್ಖಂಡ್, ಬಿಹಾರ, ಪಂಜಾಬ್, ಪೂರ್ವ ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ, ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೇವಲ ಪ್ರತ್ಯೇಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದ್ದರೆ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ಪ್ರತ್ಯೇಕ ಮಳೆ, ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇಂದಿನಿಂದ ಜನವರಿ 9ರವರೆಗೂ ಪಂಜಾಬ್ ಮತ್ತು ಹರಿಯಾಣದ ಉತ್ತರ ಭಾಗಗಳು ಮತ್ತು ದೆಹಲಿಯಲ್ಲಿ ಆಲಿಕಲ್ಲು ಮಳೆ ಬೀಳಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಾಯವ್ಯ ಬಯಲು ಪ್ರದೇಶಗಳಲ್ಲಿ ಜನವರಿ 9ರವರೆಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ನಂತರ ಮಳೆಯ ಪರಿಸ್ಥಿತಿಗಳು ಕಡಿಮೆಯಾಗುವ ಸಾಧ್ಯತೆಯಿದೆ.

ಭಾರತದ ಮಧ್ಯ ಭಾಗವು ಜನವರಿ 8ರಿಂದ 12ರ ನಡುವೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜ. 9ರಂದು ಹಿಮಾಚಲ ಪ್ರದೇಶದಲ್ಲಿ ಮತ್ತು ಉತ್ತರಾಖಂಡದ ಮೇಲೆ ಇಂದು ಮತ್ತು ಜನವರಿ 9ರಂದು ಭಾರೀ ಮಳೆ ಅಥವಾ ಹಿಮಪಾತವಾಗಲಿದೆ. ಹವಾಮಾನ ಇಲಾಖೆಯು ಪಂಜಾಬ್ ಮತ್ತು ಹರಿಯಾಣ, ಚಂಡೀಗಢದಲ್ಲಿ ಇಂದು ಮತ್ತು ಒಡಿಶಾದಲ್ಲಿ 12ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಿದರ್ಭ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ತೆಲಂಗಾಣ ಜನವರಿ 10 ಮತ್ತು 11 ರಂದು ಮಳೆಯಾಗಲಿದೆ. ದೆಹಲಿಯಲ್ಲಿ ಜನವರಿ 9ರವರೆಗೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುಜರಾತಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಹಿಮಾಲಯ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ವ್ಯಾಪಕ ಮಳೆ ಅಥವಾ ಹಿಮ ಮತ್ತು ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇದೆ. ಹಾಗೇ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Dams Water Level: ಮಳೆ ಕಡಿಮೆಯಾಗಿರುವುದರಿಂದ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟು?

Karnataka Weather Today: ಕರ್ನಾಟಕದಲ್ಲಿ ತಗ್ಗಿದ ಚಳಿ; ದೆಹಲಿಯಲ್ಲಿ ಮಳೆಯಿಂದ ಹಳದಿ ಅಲರ್ಟ್ ಘೋಷಣೆ

Follow us on

Related Stories

Most Read Stories

Click on your DTH Provider to Add TV9 Kannada