AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಇಂದು ಹಗುರ ಮಳೆ ಸಾಧ್ಯತೆ

Rain Updates: ಇಂದು ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ ಮತ್ತು ಛತ್ತೀಸ್‌ಗಢದಲ್ಲಿ ಶೀತ ಗಾಳಿ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

Weather Today: ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಇಂದು ಹಗುರ ಮಳೆ ಸಾಧ್ಯತೆ
ಮಳೆ
TV9 Web
| Edited By: |

Updated on: Jan 28, 2022 | 6:09 AM

Share

ಬೆಂಗಳೂರು: ಕರ್ನಾಟಕದ (Karnataka Rain) ಬಯಲು ಸೀಮೆಯ ಕೆಲವು ಜಿಲ್ಲೆಗಳಲ್ಲಿ ಇನ್ನೂ ಹಗುರ ಮಳೆಯಾಗುತ್ತಿದೆ. ಗುರುವಾರ ಕೋಲಾರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಅಕಾಲಿಕವಾಗಿ ತುಂತುರು ಮಳೆಯಾಗಿತ್ತು. ಕೋಲಾರ, ಮಾಲೂರು, ಬಂಗಾರಪೇಟೆ ತಾಲೂಕಿನಲ್ಲಿ ತುಂತುರು ಮಳೆಯಾದರೆ, ಮುಳಬಾಗಲು, ಶ್ರೀನಿವಾಸಪುರ, ಕೆಜಿಎಫ್ ತಾಲೂಕಿನಲ್ಲಿ ಮೋಡ ಕವಿದ ವಾತಾವರಣವಿತ್ತು. ಹಾಗೇ, ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಮೈಸೂರಿನಲ್ಲಿ ಹಗುರ ಮಳೆಯಾಗಿತ್ತು.

ಇಂದು ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ ಮತ್ತು ಛತ್ತೀಸ್‌ಗಢದಲ್ಲಿ ಶೀತ ಗಾಳಿ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಇಂದು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಇಂದು (ಶುಕ್ರವಾರ) ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಮುಂದಿನ 4 ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಲಘು ಮಳೆಯಾಗುತ್ತದೆ. ಈಶಾನ್ಯ ಭಾರತದಲ್ಲಿ ಇಂದು ಚದುರಿದ ಮಧ್ಯಮ ಮಳೆಯಾಗಲಿದೆ. ನಂತರ ಒಣ ಹವಾಮಾನ ಇರುತ್ತದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ. ಮುಂದಿನ 2 ದಿನಗಳ ಕಾಲ ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮೆ, ಕೇರಳ, ಮಾಹೆಯಲ್ಲಿ ಮಳೆಯಾಗಲಿದೆ. ಮುಂದಿನ 4 ದಿನಗಳಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್​ನಲ್ಲಿ ಮಳೆಯಾಗಲಿದೆ. ಜನವರಿ 29ರಿಂದ ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ ರಾಜ್ಯದಲ್ಲಿ ಇಂದು ಮಳೆಯಾಗಲಿದ್ದು, ಜನವರಿ 30ರಿಂದ ಮಳೆ ಕಡಿಮೆಯಾಗುತ್ತದೆ.

ಇಂದು ವಿದರ್ಭ, ಮಧ್ಯ ಮಹಾರಾಷ್ಟ್ರ, ಮರಾಠವಾಡ ಮತ್ತು ಗುಜರಾತ್ ರಾಜ್ಯದಲ್ಲಿ ಶೀತ ಅಲೆಯ ನಿರ್ಮಾಣವಾಗಲಿದೆ. ಮುಂದಿನ 2-3 ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ ಮತ್ತು ಛತ್ತೀಸ್‌ಗಢದಾದ್ಯಂತ ಮಳೆಯಾಗಲಿದೆ.

ಇದನ್ನೂ ಓದಿ: Weather Today: ಕರ್ನಾಟಕದಲ್ಲಿ ತಗ್ಗಿದ ಮಳೆ; ಪಂಜಾಬ್, ರಾಜಸ್ಥಾನ, ದೆಹಲಿಯಲ್ಲಿ ಆರೆಂಜ್​ ಅಲರ್ಟ್ ಘೋಷಣೆ

Bengaluru Rain: ಹೊಸವರ್ಷ ಆಚರಣೆಗೆ ವರುಣನ ಅಡ್ಡಿ; ಗಾಯದ ಮೇಲೆ ಬರೆ ಎಳೆದ ಮಳೆರಾಯ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ