AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ರಾಜ್ಯದ 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​; ಕರವಾಳಿ, ಮಲೆನಾಡಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Weather Tomorrow: ಮುಂದಿನ 10 ದಿನಗಳ ಕಾಲ ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆ ಇದ್ದು, ಉತ್ತರ ಒಳನಾಡು ಭಾಗದಲ್ಲೂ ವರುಣ ತಂಪೆರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Weather Today: ರಾಜ್ಯದ 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​; ಕರವಾಳಿ, ಮಲೆನಾಡಲ್ಲಿ ಭಾರೀ ಮಳೆ ಮುನ್ಸೂಚನೆ
ರಾಜ್ಯದಾದ್ಯಂತ ಭಾರೀ ಮಳೆ, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​
ಭಾವನಾ ಹೆಗಡೆ
|

Updated on: Oct 22, 2025 | 7:39 AM

Share

ಬೆಂಗಳೂರು, ಅಕ್ಟೋಬರ್​ 22: ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ (Weather Forecast) ಸಾಧ್ಯತೆಯಿದೆ. ಹವಾಮಾನ ಇಲಾಖೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.ಕರಾವಳಿಯಲ್ಲಿ ವರುಣಾರ್ಭಟ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ?

ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್​ ಅಲರ್ಟ್​ ಇರಲಿದೆ ಎಂದು ಹವಾಮಾನ ಇಲಾಖೆ ಘೊಷಿಸಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವಣರಣ ಅಥವಾ ತುಂತುರು ಮಳೆಯ ನಿರೀಕ್ಷೆ ಇದೆ.

ಕರಾವಳಿಯಲ್ಲಿ ವರುಣಾರ್ಭಟ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಮಳೆ ಜೊತೆ ಗಾಳಿಯ ವೇಗ ಗಂಟೆಗೆ 35-45 ಕಿ.ಮೀ. ಇರುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. . ಉತ್ತರ ಕನ್ನಡ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಲ್ಲಿ ಗಾಳಿ ಮಳೆ

ರಾಜಧಾನಿ ಬೆಂಗಳೂರಲ್ಲಿ ನಾಳೆ ಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಶೇಕಡಾ 86ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 11-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾವಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us