Weather Today: ಕರ್ನಾಟಕದಲ್ಲಿ ಹಿಂಗಾರಿನ ಅಬ್ಬರ; ನಾಳೆಯಿಂದ ವ್ಯಾಪಕ ಮಳೆ

Karnataka Rain Updates: ಕೆಲವು ರಾಜ್ಯಗಳಲ್ಲಿ ಅ. 21ರಿಂದಲೇ ಹಿಂಗಾರು ಮಳೆಯ ಪ್ರವೇಶವಾಗಿದೆ. ಇದರೊಂದಿಗೆ ಹಮೂನ್ ಚಂಡಮಾರುತ ಹಾಗೂ ತೇಜ್ ಚಂಡಮಾರುತವೂ ಎದ್ದಿರುವುದರಿಂದ ಮಳೆಯ ಅಬ್ಬರ ಇನ್ನಷ್ಟು ಹೆಚ್ಚಾಗಲಿದೆ.

Weather Today: ಕರ್ನಾಟಕದಲ್ಲಿ ಹಿಂಗಾರಿನ ಅಬ್ಬರ; ನಾಳೆಯಿಂದ ವ್ಯಾಪಕ ಮಳೆ
ಮಳೆImage Credit source: iStock
Follow us
ಸುಷ್ಮಾ ಚಕ್ರೆ
|

Updated on: Oct 28, 2023 | 6:37 AM

ಬೆಂಗಳೂರು: ದಕ್ಷಿಣ ಭಾರತದಲ್ಲಿ ಹಿಂಗಾರು ಮಳೆ ಮತ್ತು ಚಂಡಮಾರುತ ಅಬ್ಬರದಿಂದ ಮತ್ತೊಮ್ಮೆ ಮಳೆ ಹೆಚ್ಚಾಗಿದೆ. ನಾಳೆಯಿಂದ (ಅ. 29) ತಮಿಳುನಾಡು, ಕೇರಳ, ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದಲ್ಲಿ ಅಕ್ಟೋಬರ್ 29ರಿಂದ ನ. 1ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಕೆಲವು ರಾಜ್ಯಗಳಲ್ಲಿ ಅ. 21ರಿಂದಲೇ ಹಿಂಗಾರು ಮಳೆಯ ಪ್ರವೇಶವಾಗಿದೆ. ಇದರೊಂದಿಗೆ ಹಮೂನ್ ಚಂಡಮಾರುತ ಹಾಗೂ ತೇಜ್ ಚಂಡಮಾರುತವೂ ಎದ್ದಿರುವುದರಿಂದ ಮಳೆಯ ಅಬ್ಬರ ಇನ್ನಷ್ಟು ಹೆಚ್ಚಾಗಲಿದೆ. ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: ತಮಿಳುನಾಡಿನ 12 ಜಿಲ್ಲೆಗಳಲ್ಲಿ ಅ. 29ರಿಂದ ಈಶಾನ್ಯ ಮಾನ್ಸೂನ್ ಅಬ್ಬರ

ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳ ರಾಜ್ಯಗಳಲ್ಲೂ ಭಾನುವಾರದಿಂದ ಮಳೆ ತೀವ್ರಗೊಳ್ಳಲಿದೆ. ಕೇರಳದಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗುವ ಮುನ್ಸೂಚನೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಕೋಝಿಕ್ಕೋಡ್, ವಯನಾಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಅಕ್ಟೋಬರ್‌ 30ರವರೆಗೆ ಪಥನಾಂತಿಟ್ಟ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್ ಮತ್ತು ವಯನಾಡು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಮುಂದುವರಿಯಲಿದೆ.

ಇದನ್ನೂ ಓದಿ: Karnataka Rains: ಕರ್ನಾಟಕದಲ್ಲಿ ಭಾನುವಾರದಿಂದ ಮಳೆ ಹೆಚ್ಚಳ; ಕರಾವಳಿಯಲ್ಲಿ ಹಳದಿ ಅಲರ್ಟ್

ಹಾಗೇ, ಇಂದು ಕೇರಳದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಅರುಣಾಚಲ ಪ್ರದೇಶ, ತಮಿಳುನಾಡು, ಆಂಧ್ರಪ್ರದೇಶ, ಅಂಡಮಾನ್-ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ