Weather Today: ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಹವಾಮಾನ ಇಲಾಖೆ ವರದಿ
Karnataka Weather:ರಾಜ್ಯದ ಉತ್ತರ ಒಳನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲೂ ನಾಳೆ ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ನೆರೆಯ ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಭಾರಿ ಗಾಳಿಯೊಂದಿಗೆ ಮೊಂಟಾ ಚಂಡಮಾರುತ ಅಪ್ಪಳಿಸುತ್ತಿದೆ. ಮೀನುಗಾರಿಕೆಗೂ ನಿಷೇಧ ಹೇರಿದ ಸ್ಥಳೀಯ ಅಧಿಕಾರಿಗಳು, ಎಚ್ಚರವಹಿಸುವಂತೆ ಆಂಧ್ರದ ಕರಾವಳಿ ಪ್ರದೇಶದ ಜನರಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು, ಅಕ್ಟೋಬರ್ 26: ಕರ್ನಾಟದಲ್ಲಿ ಇಂದು ಕೆಲವೆಡೆ ಭಾರಿ ಮಳೆಯಾಗುವ (Weather Forecast) ಸಾಧ್ಯತೆಯಿದೆ. ಹವಾಮಾನ ಇಲಾಖೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡು, ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ?
ಉತ್ತರ ಒಳನಾಡು ಪ್ರದೇಶಗಳಾದ ಹಾವೇರಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗುಲ್ಬರ್ಗ, ಬೀದರ್, ಯಾದಗಿರಿ ಈ ಜಿಲ್ಲೆಗಳು ಸೇರಿದಂತೆ ಉತ್ತರ ಕನ್ನಡದಲ್ಲಿ 30-40 ಕೀಮೀ ಗಾಳಿಯ ವೇಗದೊಂದಿಗೆ ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಸೂಚಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇರಲಿದೆ ಎಂದು ಹವಾಮಾನ ಇಲಾಖೆ ಘೊಷಿಸಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯಾಗಲಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲೂ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಲ್ಲಿಯೂ ಮಳೆ
ಬೆಂಗಳೂರಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಶೇ. 55 ರಷ್ಟು ಮಳೆಯಾಗುವ ಸಾಧ್ಯತೆ ಮತ್ತು ಶೇ. 33 ರಷ್ಟು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೋಡ ಕವಿದ ವಾತಾವರಣವಿರಲಿದೆ. ನಗರದ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನೆರೆ ರಾಜ್ಯಗಳಲ್ಲಿ ಹೆಚ್ಚಿದ ವರುಣಾರ್ಭಟ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಮುಂದುವರೆದಿದ್ದು, ಭಾರಿ ಗಾಳಿಯೊಂದಿಗೆ ಮೊಂಟಾ ಚಂಡಮಾರುತ ಅಪ್ಪಳಿಸುತ್ತಿದೆ. ಆಂಧ್ರ, ತೆಲಂಗಾಣ, ಒಡಿಶಾ, ತಮಿಳುನಾಡಿನಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಮೊಂಟಾ ಚಂಡಮಾರುತದ ಎಫೆಕ್ಟ್ನಿಂದಾಗಿ 2 ದಿನ ಭಾರಿ ಮಳೆ ಸಾಧ್ಯಯಿದ್ದು, ಅ.28ರಂದು ಮೊಂಟಾ ಚಂಡಮಾರುತ ಆಂಧ್ರಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ. ಮೊಂಟಾ ಚಂಡಮಾರುತ 90 ಕಿ.ಮೀ.ನಿಂದ 110 ಕಿ.ಮೀ.ವೇಗದ ಗಾಳಿಯೊಂದಿಗೆ ಆಂಧ್ರಪ್ರದೇಶ ತೀರದತ್ತ ಸಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ NDRF, SDRF, ರಕ್ಷಣಾ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಸಮುದ್ರ ತೀರಕ್ಕೆ ಯಾರೂ ತೆರಳದಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಮೀನುಗಾರಿಕೆಗೂ ನಿಷೇಧ ಹೇರಿದ ಸ್ಥಳೀಯ ಅಧಿಕಾರಿಗಳು, ಎಚ್ಚರವಹಿಸುವಂತೆ ಆಂಧ್ರದ ಕರಾವಳಿ ಪ್ರದೇಶದ ಜನರಿಗೆ ಸೂಚನೆ ನೀಡಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.




