AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​; ಹವಾಮಾನ ಇಲಾಖೆ ಮುನ್ಸೂಚನೆ

Karnataka Weather Today: ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, 20ಕ್ಕೂ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಕರಾವಳಿ ಭಾಗದಲ್ಲಿ ಗಾಳಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನಲೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದ್ದು, ಬೆಂಗಳೂರಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Weather Today: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​; ಹವಾಮಾನ ಇಲಾಖೆ ಮುನ್ಸೂಚನೆ
ಕರಾವಳಿಯಲ್ಲಿ ಹೆಚ್ಚಿದ ವರುಣಾರ್ಭಟ
ಭಾವನಾ ಹೆಗಡೆ
|

Updated on:Oct 19, 2025 | 7:53 AM

Share

ಬೆಂಗಳೂರು, ಅಕ್ಟೋಬರ್​ 19: ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ (Weather Forecast) ಸಾಧ್ಯತೆಯಿದೆ. ಹವಾಮಾನ ಇಲಾಖೆ ಸುಮಾರು 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.ಕರಾವಳಿಯಲ್ಲಿ ವರುಣಾರ್ಭಟ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ?

ಕರಾವಳಿ ಪ್ರದೇಶದ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಗುಡುಗಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ವೈಪರೀತ್ಯದ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ದಕ್ಷಿಣ ಒಳನಾಡು ಪ್ರದೇಶದ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗಂಟೆಗೆ 30-40 ಕಿ.ಮೀ ಬಿರುಗಾಳಿಯೊಂದಿಗೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಸೇರಿದಂತೆ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳಾದ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 14-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್​ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:52 am, Sun, 19 October 25

Follow Us
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ