Karnataka Weather: ಕರ್ನಾಟಕದ 19ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 28ರವರೆಗೆ ಮಳೆ
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಡಿಸೆಂಬರ್ 28ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. ಇದಲ್ಲದೇ ಮುಂದಿನ 5 ದಿನಗಳ ರಾಜ್ಯದಾದ್ಯಂತ ಒಣ ಹವೆಯಿರುವ ಸಾಧ್ಯತೆಯಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಹಲವೆಡೆ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.28ರವರೆಗೂ ಮಳೆಯಾಗಲಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ.
ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆ ಇದೆ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುತ್ತಿದ್ದು, ತಮಿಳುನಾಡು, ಆಂಧ್ರಪ್ರದೇಶದ ಜತೆ ಕರ್ನಾಟಕದಲ್ಲೂ ಮಳೆಯಾಗಲಿದೆ ಎನ್ನುವ ಎಚ್ಚರಿಕೆ ನೀಡಲಾಗಿದೆ. ದಾವಣಗೆರೆಯಲ್ಲಿ 16.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ.
ಡಿಸೆಂಬರ್ 28 ರಿಂದ 29 ರವರೆಗೆ ಒಳನಾಡಿನ ಕೆಲವು ಸ್ಥಳಗಳಲ್ಲಿ ಮೋಡಕವಿದ ವಾತಾವರಣವಿರಲಿದೆ. ಡಿಸೆಂಬರ್ 25 ರ ಬೆಳಗಿನವರೆಗಿನ ಬೆಂಗಳೂರಿನ ಹವಾಮಾನ ಮುನ್ಸೂಚನೆಯು ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಎಚ್ಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಈ ವಾರಾಂತ್ಯ ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ
ಹೊನ್ನಾವರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ