Karnataka Rain: ಕರಾವಳಿ ಕರ್ನಾಟಕ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

|

Updated on: Oct 20, 2023 | 8:10 AM

Weather Update: ಮುಂದಿನ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡುಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆ,ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ,ಕಲಬುರ್ಗಿ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ಮಂಡ್ಯ, ಬಳ್ಳಾರಿ, ವಿಜಯನಗರ, ತುಮಕೂರು,ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರೆ ಹೆಚ್ಚಾಗುವ ಸಾಧ್ಯತೆ ಇದೆ.

Karnataka Rain: ಕರಾವಳಿ ಕರ್ನಾಟಕ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ಮಳೆ
Follow us on

ದೆಹಲಿ ಅಕ್ಟೋಬರ್ 20: ಕೆಲವು ದಿನಗಳಿಂದ ದಕ್ಷಿಣ, ಮಧ್ಯ ಮತ್ತು ವಾಯುವ್ಯ ಭಾರತದ ಹಲವಾರು ಪ್ರದೇಶಗಳಲ್ಲಿ ಮಳೆಯಾಗಿದ್ದು (Rain) ಇದು ತಾಪಮಾನವನ್ನು ಕಡಿಮೆ ಮಾಡಿದೆ. ವಿಶೇಷವಾಗಿ ದೆಹಲಿ ಮತ್ತು ಪಂಜಾಬ್ ಮತ್ತು ಹರ್ಯಾಣದ ಕೆಲವು ಪ್ರದೇಶಗಳಲ್ಲಿ ಈಗ ಉಷ್ಣತೆ ಕಡಿಮೆ ಆಗಿದೆ. ಭಾರತದ ಹವಾಮಾನ ಇಲಾಖೆ (IMD) ಪ್ರಕಾರ ಮುಂದಿನ ಕೆಲವು ದಿನಗಳಲ್ಲಿ ದೇಶದ ವಾಯುವ್ಯ ಭಾಗವು ಒಣ ಹವಾಮಾನವನ್ನು ಅನುಭವಿಸುತ್ತದೆ ಎಂದು ಹೇಳಿದೆ. ಅದೇ ವೇಳೆ ದಕ್ಷಿಣದ ರಾಜ್ಯಗಳಾದ ಕೇರಳ (Kerala) ಮತ್ತು ತಮಿಳುನಾಡಿನಲ್ಲಿ  ಮಳೆ ಕಾಣಬಹುದು.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯ ಮುನ್ಸೂಚನೆ ಇದೆ. ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದಲ್ಲಿಯೂ ಇದೇ ರೀತಿಯ ವಾತಾವರಣ ಇರಲಿದೆ.

ಉಪ-ಹಿಮಾಲಯದ ಪಶ್ಚಿಮ ಬಂಗಾಳ, ಸಿಕ್ಕಿಂ, ಕೊಂಕಣ, ಗೋವಾ, ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಿಂಚು,ಮಳೆಯಾಗುವ ಸಾಧ್ಯತೆಯಿದೆ. ದೇಶದ ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನ ಇರಲಿದೆ.

ಪ್ರಸ್ತುತ ಆಗ್ನೇಯ ಮತ್ತು ನೆರೆಯ ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಮೇಲಿರುವ ಕಡಿಮೆ ಒತ್ತಡದ ಪ್ರದೇಶವು ಪೂರ್ವ ಮಧ್ಯ ಮತ್ತು ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ ಉತ್ತಮವಾಗಿ ಗುರುತಿಸಲ್ಪಟ್ಟ ಕಡಿಮೆ-ಒತ್ತಡದ ಪ್ರದೇಶವಾಗಿ ಬಲಗೊಳ್ಳಲಿದೆ. ಇದು ಬಹುಶಃ ಅಕ್ಟೋಬರ್ 21 ರ ವೇಳೆಗೆ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಒತ್ತಡವಾಗಿ ತೀವ್ರಗೊಳ್ಳುತ್ತದೆ.

ಅಕ್ಟೋಬರ್ 20 ರ ಸುಮಾರಿಗೆ, ಬಂಗಾಳಕೊಲ್ಲಿಯ ಕೇಂದ್ರ ಪ್ರದೇಶಗಳಲ್ಲಿ ಮತ್ತೊಂದು ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಮುನ್ಸೂಚನೆ ಇದೆ. ದೇಶದ ಉಳಿದ ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಕಾಣುವುದಿಲ್ಲ.

ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿಯಲ್ಲಿ ಅ.25ರವರೆಗೂ ಮಳೆ, ಈ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ನಿರ್ಮಾಣವಾಗಿರುವ ಕಡಿಮೆ ಒತ್ತಡದ ವಾತಾವರಣದ ಪರಿಣಾಮವಾಗಿ ಒಡಿಶಾದಲ್ಲಿ ಮೋಡ ಇರಲಿದ್ದು ಇಲ್ಲಿ ಅಕ್ಟೋಬರ್ 23 ಮತ್ತು 24 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಪ್ರಾದೇಶಿಕ ಹವಾಮಾನ ಕೇಂದ್ರದ ನಿರ್ದೇಶಕ, ಹೆಚ್ ಆರ್ ಬಿಸ್ವಾಸ್, ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುತ್ತದೆ ಎಂದು ಹೇಳಿದ್ದಾರೆ. ಅಕ್ಟೋಬರ್ 23 ಮತ್ತು 24 ರಂದು ಒಡಿಶಾದ ಹಲವಾರು ಕರಾವಳಿ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ ಎಂದು ಅವರು ಹೇಳಿದ್ದಾರೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಮಳೆ

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡುಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆ,ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ,ಕಲಬುರ್ಗಿ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ಮಂಡ್ಯ, ಬಳ್ಳಾರಿ, ವಿಜಯನಗರ, ತುಮಕೂರು,ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರೆ ಹೆಚ್ಚಾಗುವ ಸಾಧ್ಯತೆ ಇದೆ.

ಅಕ್ಟೋಬರ್ 21 ಬೆಳಗ್ಗೆ ವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಭಾಗಶಃ ಮೋಡ ಕವಿದ ವಾತಾವರಣ, ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಶಿಯಸ್ ಇರುವ ಸಾಧ್ಯತೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ