ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಕೊಡಗು, ಹಾಸನ, ತುಮಕೂರು, ವಿಜಯನಗರ, ಚಾಮರಾಜನಗರ, ಯಾದಗಿರಿ, ವಿಜಯಪುರ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಭಾರಿ ಮಳೆಯಾಗಲಿದೆ.
ಅಂಕೋಲಾ, ಕುಮಟಾ, ಕದ್ರಾ, ಗೇರುಸೊಪ್ಪ, ಹೊನ್ನಾವರ, ಕೋಟ, ಶಿರಾಲಿ, ಪುತ್ತೂರು, ಕೊಲ್ಲೂರು, ಕಾರವಾರ, ಮುಲ್ಕಿ, ಮಂಕಿ, ಕಮ್ಮರಡಿ, ಸುಳ್ಯ, ಸಿದ್ದಾಪುರ, ಉಪ್ಪಿನಂಗಡಿ, ಬೆಳ್ತಂಗಡಿ, ಮಾಣಿ, ಕ್ಯಾಸಲ್ರಾಕ್, ನಾಪೊಕ್ಲು, ಉಡುಪಿ, ಲಿಂಗನಮಕ್ಕಿ, ಮಂಗಳೂರು, ಸಿದ್ದಾಪುರ, ಮೂರ್ನಾಡುವಿನಲ್ಲಿ ಭಾರಿ ಮಳೆಯಾಗಿದೆ.
ಮಾಗಡಿ, ಕಳಸ, ಜೇವರ್ಗಿ, ತ್ಯಾಗರ್ತಿ, ಜೋಯಿಡಾ, ಬಾಳೆಹೊನ್ನೂರು, ಸೋಮವಾರಪೇಟೆ, ಯಲ್ಲಾಪುರ, ಮುದ್ದೇಬಿಹಾಳ, ಲೋಂಡಾ, ಹೊಸಕೋಟೆ, ಹಾರಂಗಿ, ಹೆಸರಘಟ್ಟ, ಸೈದಾಪುರ, ಗುಬ್ಬಿ, ಕುಣಿಗಲ್, ಹುಂಚದಕಟ್ಟೆ, ಕಿರವತ್ತಿ, ಹಳಿಯಾಳ, ದೇವರಹಿಪ್ಪರಗಿ, ಮಹಾಲಿಂಗಪುರ, ಶಾಹಪುರ, ರಾಯಲ್ಪಾಡು, ಮಧುಗಿರಿ, ಹಾಸನ, ಹೊಸದುರ್ಗ, ಹೊನ್ನಾಳಿ, ಅಜ್ಜಂಪುರ, ಚಿಕ್ಕಬಳ್ಳಾಪುರ, ಅರಕಲಗೂಡಿನಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 30.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Karnataka Rains: ಇಂದಿನಿಂದ ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ಮಳೆ ಜೋರು, ಆರೆಂಜ್ ಅಲರ್ಟ್
ಹೊನ್ನಾವರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೀದರ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ. 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ