Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekend- Night Curfew: ಲಾಕ್​ಡೌನ್ ಇರಲಿ ಇಲ್ಲದಿರಲಿ..ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಇದ್ದೇ ಇದೆ

Karnataka Unlock: ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು,  ಅಗತ್ಯ ವಸ್ತುಗಳ ಖರೀದಿಗೆ ಇದ್ದ ಸಮಯ ವಿಸ್ತರಣೆ ಮಾಡಲಾಗಿದೆ. ಮಧ್ಯಾಹ್ನ 2ರವರೆಗೆ ಬೀದಿ ಬದಿ ವ್ಯಾಪಾರಕ್ಕೆ ಸಹ ಅವಕಾಶ ನೀಡಲಾಗಿದೆ. 

Weekend- Night Curfew: ಲಾಕ್​ಡೌನ್ ಇರಲಿ ಇಲ್ಲದಿರಲಿ..ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಇದ್ದೇ ಇದೆ
ಕೊರೊನಾ ಕರ್ಫ್ಯೂ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: guruganesh bhat

Updated on: Jun 10, 2021 | 9:22 PM

ಬೆಂಗಳೂರು: ಸೋಮವಾರದಿಂದ (ಜೂನ್ 14) ಕೆಲವು ಜಿಲ್ಲೆಗಳು ಅನ್​ಲಾಕ್ ಆದರೂ, ಪ್ರತಿ ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ಇಡೀರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಇರುತ್ತದೆ. ಜತೆಗೆ ಇಡೀ ರಾಜ್ಯದಲ್ಲಿ ಪ್ರತಿದಿನ ಸಂಜೆ 5ರಿಂದ ಬೆಳಗ್ಗೆಯವರೆಗೆ ಕೊವಿಡ್ ಕರ್ಫ್ಯೂ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು,  ಅಗತ್ಯ ವಸ್ತುಗಳ ಖರೀದಿಗೆ ಇದ್ದ ಸಮಯ ವಿಸ್ತರಣೆ ಮಾಡಲಾಗಿದೆ. ಮಧ್ಯಾಹ್ನ 2ರವರೆಗೆ ಬೀದಿ ಬದಿ ವ್ಯಾಪಾರಕ್ಕೆ ಸಹ ಅವಕಾಶ ನೀಡಲಾಗಿದೆ.

ಲಾಕ್​ಡೌನ್ ರೂಲ್ಸ್ ಜಾರಿಯಲ್ಲಿದ್ದರೂ ಕೆಲವು ವಲಯಕ್ಕೆ ಜೂನ್ 14ರಿಂದ ಅನ್ವಯವಾಗುವಂತೆ  ರಿಲೀಫ್ ನೀಡಲಾಗಿದೆ. ಅವುಗಳ ವಿವರ ಇಂತಿದೆ:

1). ಅಗತ್ಯ ವಸ್ತು ಖರೀದಿಗೆ ಮ.2ರವರೆಗೂ ಅವಕಾಶ 2).  ಬೀದಿ ಬದಿ ವ್ಯಾಪಾರಕ್ಕೆ ಮ.2 ರವರೆಗೂ ಪರ್ಮಿಷನ್ 3 ). ಶೇ.50ರಷ್ಟು ಸಿಬ್ಬಂದಿ ಬಳಸಿ ಎಲ್ಲ ಕಾರ್ಖಾನೆ ಓಪನ್ 4 ). ಶೇ.30ರಷ್ಟು ಸಿಬ್ಬಂದಿ ಬಳಸಿ ಗಾರ್ಮೆಂಟ್ಸ್ ಓಪನ್ 5 ). ಎಲ್ಲ ರೀತಿಯ ನಿರ್ಮಾಣ ಚಟುವಟಿಕೆ ಆರಂಭಕ್ಕೆ ಅಸ್ತು 6). ನಿರ್ಮಾಣ ಸಂಬಂಧ ಅಂಗಡಿ ಓಪನ್​ಗೆ ಗ್ರೀನ್​ ಸಿಗ್ನಲ್ 7 ). ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 10 ಗಂಟೆವರೆಗೂ ಪಾರ್ಕ್ ಓಪನ್ 8 ). ಆಟೋ, ಟ್ಯಾಕ್ಸಿಯಲ್ಲಿ ಇಬ್ಬರಿಗೆ ಮಾತ್ರ ಸಂಚಾರಕ್ಕೆ ಸಮ್ಮತಿ 9 ). ಮದ್ಯ ಪಾರ್ಸೆಲ್​ಗೆ ಮಧ್ಯಾಹ್ನ 2ರವರೆಗೆ ಅವಕಾಶ 10 ) ಶೇ.50 ರಷ್ಟು ಸಿಬ್ಬಂದಿ ಬಳಸಿ ಕೆಲ ಸರ್ಕಾರಿ ಕಚೇರಿಗಳು ಓಪನ್

ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್​ಡೌನ್ ಮುಂದುವರೆಯಲಿದೆ. ಈ ಜಿಲ್ಲೆಗಳಲ್ಲಿ ಈಗ ಅನುಷ್ಠಾನದಲ್ಲಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರತಿದಿನ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ಕೊವಿಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಸೋಮವಾರದಿಂದ ( ಜೂನ್ 14) ಲಾಕ್​ಡೌನ್ ಸಡಿಲಿಕೆಯಾದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಠಿಣ ನಿರ್ಬಂಧ ಇದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದರು. ಜತೆಗೆ ಬೆಂಗಳೂರು ನಗರದಲ್ಲಿ ಮೆಟ್ರೋ ಸಂಚಾರಕ್ಕೂ ಅವಕಾಶವಿಲ್ಲ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Unlock: 11 ಜಿಲ್ಲೆಗಳಲ್ಲಿ ಮಾತ್ರ ಲಾಕ್​ಡೌನ್ ವಿಸ್ತರಣೆ; ಇನ್ನುಳಿದ ಜಿಲ್ಲೆಗಳು 14ರಿಂದ ಅನ್​ಲಾಕ್: ಸಿಎಂ ಯಡಿಯೂರಪ್ಪ ಘೋಷಣೆ

Explainer: ದೇಶದಲ್ಲಿ ಕೊವಿಡ್ ಸಾವಿನ ಸಂಖ್ಯೆ ಏಕಾಏಕಿ ಏರಲು ಕಾರಣವೇನು? (Weekend Curfew and Night Curfew will be continew in Karnataka in all districts says CM Yediyurappa)

ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು
ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
‘ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳಬೇಡಿ’; ಅನಿಲ್ ಕುಂಬ್ಳೆ ಮಾತು
‘ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳಬೇಡಿ’; ಅನಿಲ್ ಕುಂಬ್ಳೆ ಮಾತು
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ