ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ಆರಂಭ: ಸೋಮವಾರ ಬೆಳಿಗ್ಗೆ 5ರವರೆಗೆ ನಿರ್ಬಂಧ

ಶುಕ್ರವಾರ ರಾತ್ರಿ 7 ಗಂಟೆಗೆ ಆರಂಭವಾಗಿರುವ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅನಗತ್ಯ ಸಂಚಾರಕ್ಕೆ ಅವಕಾಶ ಇರುವುದಿಲ್ಲ.

ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ಆರಂಭ: ಸೋಮವಾರ ಬೆಳಿಗ್ಗೆ 5ರವರೆಗೆ ನಿರ್ಬಂಧ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 18, 2021 | 9:05 PM

ಬೆಂಗಳೂರು: ಕೊರೊನಾ ಸೋಂಕಿನ 2ನೇ ಅಲೆ ನಿಯಂತ್ರಣಕ್ಕೆಂದು ರಾಜ್ಯ ಸರ್ಕಾರದ ಸೂಚನೆ ಮೇರೆ ರಾಜ್ಯವ್ಯಾಪಿ ವೀಕೆಂಡ್ ಕರ್ಫ್ಯೂ ಆರಂಭವಾಗಿದೆ. ಶುಕ್ರವಾರ ರಾತ್ರಿ 7 ಗಂಟೆಗೆ ಆರಂಭವಾಗಿರುವ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅನಗತ್ಯ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯವಸ್ತುಗಳ ಖರೀದಿಗೆ ಅವಕಾಶವಿದೆ.

ಲಾಕ್​ಡೌನ್ ತೆರವುಗೊಂಡ ಜಿಲ್ಲೆಗಳಲ್ಲಿ ಯಾವ ಅಂಗಡಿ ತೆರೆಯಬಹುದು? ಅನ್‌ಲಾಕ್‌ ಗೈಡ್‌ಲೈನ್ಸ್‌ನಲ್ಲಿ ಸಿವಿಲ್ ಕೆಲಸಗಳಿಗೆ ಮಾತ್ರ ದುರಸ್ತಿಗೆ ಅನುಮತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಉಳಿದ ಯಾವುದೇ ದುರಸ್ತಿ ಕೆಲಸಗಳಿಗೆ ಅವಕಾಶ ಇಲ್ಲ. ಅಂಗಡಿಗಳ ಪೈಕಿ ಸಿಮೆಂಟ್ ಮತ್ತು ಸ್ಟೀಲ್ ಅಂಗಡಿಗಳು ಮಾತ್ರ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ತೆರೆಯಬಹುದು ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ಈ ಮೂಲಕ ಜೂನ್ 10ರಂದು ಘೋಷಿಸಿದ್ದ ಮೊದಲ ಹಂತದ ಅನ್​ಲಾಕ್ ನಿಯಮಗಳಲ್ಲಿನ ಗೊಂದಲಕ್ಕೆ ಸರ್ಕಾರವು ಜೂನ್ 12ರಂದು ತೆರೆ ಎಳೆದಿತ್ತು.

ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್​ಡೌನ್ ಮುಂದುವರೆಯಲಿದೆ. ಈ ಜಿಲ್ಲೆಗಳಲ್ಲಿ ಈಗ ಅನುಷ್ಠಾನದಲ್ಲಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರತಿದಿನ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ಕೊವಿಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ಮೊನ್ನೆ (ಜೂನ್ 10) ತಿಳಿಸಿದ್ದಾರೆ.

ಎಲ್ಲ ಕಾರ್ಖಾನೆ ಶೇ 50 ಸಿಬ್ಬಂದಿ ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶವಿದೆ. ಗಾರ್ಮೆಂಟ್ಸ್​ ಶೇ 30 ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಮದ್ಯ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗುವುದು. ಬಾರ್ ಮತ್ತು ರೆಸ್ಟೋರೆಂಟ್​, ವೈನ್​ ಸ್ಟೋರ್, ಎಂಎಸ್​ಐಎಲ್​ಗಳಲ್ಲಿ ಮಧ್ಯಾಹ್ನ 2ರವರೆಗೆ ಪಾರ್ಸೆಲ್​ ಅವಕಾಶವಿದೆ ಎಂದು ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಏಳರಿಂದ ಸೋಮವಾರ ಬೆಳಗ್ಗೆ ಆರರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಅಲ್ಲದೇ ನೈಟ್​ ಕರ್ಫ್ಯೂ ಸಹ ಜಾರಿಯಲ್ಲಿರಲಿದೆ ಎಂದು ಹೇಳಿದ್ದಾರೆ.

(Weekend Curfew in Karnataka upto monday morning guideline details)

ಇದನ್ನೂ ಓದಿ: Weekend- Night Curfew: ಲಾಕ್​ಡೌನ್ ಇರಲಿ ಇಲ್ಲದಿರಲಿ..ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಇದ್ದೇ ಇದೆ

ಇದನ್ನೂ ಓದಿ: Bengaluru Unlock: ಬೆಂಗಳೂರಿಗೆ ಬರುವವರಿಗೆ ಕೊವಿಡ್​ ಟೆಸ್ಟ್​ ಕಡ್ಡಾಯ; ನಗರ ಪ್ರವೇಶಿಸುವ ಮೊದಲೇ ಪರೀಕ್ಷೆಗೆ ವ್ಯವಸ್ಥೆ ಮಾಡಲು ಬಿಬಿಎಂಪಿ ಆದೇಶ

Published On - 9:04 pm, Fri, 18 June 21

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ