ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ನಿರ್ಧಾರ: ಮಧು ಬಂಗಾರಪ್ಪ
ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ನಿರ್ಧರಿಸಲಾಗಿದೆ. ವಾರಕ್ಕೆ 2 ಮೊಟ್ಟೆ ಕೊಡುವ ಬಗ್ಗೆ ಮುಖ್ಯಮಂತ್ರಿಗೆ ಮನವಿ ಮಾಡಿಕೊಂಡಿದ್ದೆ. ಸಿಎಂ ಒಪ್ಪಿಗೆ ನೀಡಿ ವಾರಕ್ಕೆ 2 ಮೊಟ್ಟೆ ನೀಡಲು ಅನುಮೋದಿಸಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.
ಬೆಂಗಳೂರು: ಶಾಲೆಗಳಲ್ಲಿ (School) ವಾರಕ್ಕೆ 2 ಮೊಟ್ಟೆ ನೀಡಲು ನಿರ್ಧರಿಸಲಾಗಿದೆ. ವಾರಕ್ಕೆ 2 ಮೊಟ್ಟೆ (Egg) ಕೊಡುವ ಬಗ್ಗೆ ಮುಖ್ಯಮಂತ್ರಿ (Chief Minister) ಅವರಿಗೆ ಮನವಿ ಮಾಡಿಕೊಂಡಿದ್ದೆ. ಸಿಎಂ ಸಿದ್ದರಾಮಯ್ಯ ಅಚರು ಒಪ್ಪಿಗೆ ನೀಡಿ ವಾರಕ್ಕೆ 2 ಮೊಟ್ಟೆ ನೀಡಲು ಅನುಮೋದಿಸಿದ್ದಾರೆ. ಎಸ್ಡಿಎಮ್ಸಿ (SDMC) ಅವರಿಗೆ ಎಲ್ಲಾ ಅಧಿಕಾರ ಕೊಟ್ಟಿದ್ದೇವೆ. ಶ್ಯೂ ವಿಚಾರ ಕೂಡ ಅವರಿಗೆ ಅಧಿಕಾರ ಕೊಟ್ಟಿದ್ದೇವೆ. 280 ಕೋಟಿ ಈ ಮೊಟ್ಟೆ ಕೊಡಲು ಸದ್ಯ ಯೋಜನೆ ಮಾಡಿಕೊಂಡಿದ್ದೇವೆ. ವಾರ್ಷಿಕವಾಗಿ 84 ದಿನ ಮಕ್ಕಳಿಗೆ ಕೊಡಲಾಗುತ್ತದೆ. ಮೊಟ್ಟೆ ತಿನ್ನದೇ ಇರುವವರು ಚಿಕ್ಕಿ ಬಾಳೆ ಹಣ್ಣು ಕೊಡುವ ವ್ಯವಸ್ಥೆ ಮಾಡಲಾಗಿದೆ. ಕ್ವಾಲಿಟಿ ಚೆನ್ನಾಗಿಲ್ಲ ಅಂದರೇ ಎಸ್ಡಿಎಮ್ಸಿ ಅವರೇ ಜವಾಬ್ದಾರಿ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.
ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹಿಂದಿನ ಸರ್ಕಾರ ವಾರದಲ್ಲಿ ಒಂದೇ ಮೊಟ್ಟೆ ಕೊಡ್ತಿತ್ತು. ಮೊಟ್ಟೆ, ಚಿಕ್ಕಿ ಬಾಳೆ ಹಣ್ಣು ಕೊಡೊವುದರಿಂದ ಮಾರ್ಜಿನಲ್ ಹೆಲ್ಪ್ ಆಗಿದೆ ಅಷ್ಟೇ. ಶಿಕ್ಷಣ ವ್ಯವಸ್ಥೆಯಲ್ಲಿ ಇರುವ ಸಮಸ್ಯೆ ಮಾನ್ಯ ಮುಖ್ಯಮಂತ್ರಿಗಳಿಗೆ ಗೊತ್ತು. ಹೀಗಾಗಿ ನಾನು ಅವರ ಬಳಿ ಮನವಿ ಮಾಡಿದೆ ಎಂದರು.
ನಾನು ಅಧಿಕಾರಕ್ಕೆ ಬಂದಾಗ ನನ್ನ ಕ್ಷೇತ್ರದಲ್ಲಿ 52 ಶಾಲೆಯಲ್ಲಿ ಶಿಕ್ಷಕರೇ ಇರಲಿಲ್ಲ. ಎಷ್ಟೋ ಪೋಷಕರು ಖಾಸಗಿ ಶಾಲೆಗೆ ಮಕ್ಕಳನ್ನ ಸೇರಿಸುತ್ತಾರೆ. ನಾವು ಮುಂದಿನ ಎಂಟು ತಿಂಗಳ ಒಳಗೆ ಕೆಲವೊಂದಿಷ್ಟು ಪ್ಲಾನ್ ಮಾಡಿಕೊಂಡಿದ್ದೇವೆ. ಈ ವ್ಯವಸ್ಥೆ ಯಾವ ತರ ನಡೆಯುತ್ತೆ ಅನ್ನೋದನ್ನ ನಾನು ಕೂಡ ಈಗ ತಿಳಿದು ಕೊಳ್ಳುತ್ತಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ: ಪಿಯುಸಿ ತರಗತಿಗಳಿಗೆ ಹೊಸ ಅಂಕ ಮಾದರಿ ಜಾರಿ ಮಾಡಿದ ರಾಜ್ಯ ಸರ್ಕಾರ
ಪಠ್ಯ ಪುಸ್ತಕದಲ್ಲಿ ಧಾರ್ಮಿಕತೆ ಹಾಗೂ ರಾಜಕೀಯ ಇರಬಾರದು. ಪಠ್ಯದಲ್ಲಿನ ಐಡಿಯಾಲಜಿ ಎಲ್ಲವನ್ನೂ ನಾವು ತೆಗೆದು ಹಾಕಿದ್ದೇವೆ. ಮುಂದಿನ ವರ್ಷವೂ ನಾವು ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ. ಪಠ್ಯದಲ್ಲಿ ಅನೇಕ ಬದಲಾವಣೆ ಮಾಡುತ್ತೇವೆ. ಶುಲ್ಕ ನಿಯಂತ್ರಣ ಕಾಯ್ದೆ ಬಗ್ಗೆ ಚರ್ಚೆ ಮಾಡಲಾಗುವುದು. ಕೇಸ್ ಕೋರ್ಟ್ನಲ್ಲಿದೆ, ಇನ್ನೂ ಯಾವುದೇ ದೂರು ಬಂದಿಲ್ಲ ಎಂದು ತಿಳಿಸಿದ್ದಾರೆ.
ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಬೇಕಿದೆ. ಪಠ್ಯ ಪುಸ್ತಕ ಪರಿಷ್ಕೃಣೆ ತುಂಬಾ ಮಾಡಬೇಕಿದೆ. ಸದ್ಯ ನಾವು ಕೆಲವು ಮಾತ್ರ ಪರಿಷ್ಕರಣೆ ಮಾಡಬೇಕಿದೆ. ಮುಂದಿನ ವರ್ಷದಿಂದ ಪಿಯು ಪರೀಕ್ಷಾ ಮಾದರಿಯಲ್ಲಿಯೂ ಬದಲಾವಣೆ ಮಾಡುತ್ತೇವೆ. 20 ಆಂತರಿಕ ಅಂಕ ನೀಡಲು ಆದೇಶ ನೀಡಿದ್ದೇವೆ ಎಂದು ಮಾಹಿತಿ ನೀಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:09 pm, Tue, 11 July 23