ಹೆಚ್​ಡಿಕೆ ಆರೋಗ್ಯದ ಬಗ್ಗೆ ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು? ಇಲ್ಲಿದೆ ವಿವರ

| Updated By: ಗಣಪತಿ ಶರ್ಮ

Updated on: Aug 31, 2023 | 2:49 PM

HD Kumaraswamy health updates; ಕುಮಾರಸ್ವಾಮಿ ಅವರ ತಾಯಿ ಚೆನ್ನಮ್ಮ ಆಪೋಲೊ ಆಸ್ಪತ್ರೆಗೆ ಆಗಮನಿಸಿ ಮಗನ ಆರೋಗ್ಯ ವಿಚಾರಿಸಿದರು. ಚೆನ್ನಮ್ಮ ಅವರು ಕುಮಾರಸ್ವಾಮಿ ಗುಣಮುಖರಾಗಲು ಪೂಜೆ ಮಾಡಿಸಿ ಆಸ್ಪತ್ರೆಗೆ ಪ್ರಸಾದ ತೆಗೆದುಕೊಂಡು ಬಂದಿದ್ದರು. ಅನಾರೋಗ್ಯದ ಕಾರಣ ಕುಮಾರಸ್ವಾಮಿ ಅವರನ್ನು ಬುಧವಾರ ಬೆಳಿಗ್ಗೆ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹೆಚ್​ಡಿಕೆ ಆರೋಗ್ಯದ ಬಗ್ಗೆ ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು? ಇಲ್ಲಿದೆ ವಿವರ
ನಿಖಿಲ್ ಕುಮಾರಸ್ವಾಮಿ & ಹೆಚ್​ಡಿ ಕುಮಾರಸ್ವಾಮಿ (ಸಂಗ್ರಹ ಚಿತ್ರ)
Follow us on

ಬೆಂಗಳೂರು, ಆಗಸ್ಟ್ 31: ಅನಾರೋಗ್ಯದಿಂದ ಬೆಂಗಳೂರಿನ ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ಸದ್ಯ ಚೇತರಿಸಿಕೊಂಡಿದ್ದು, ವಾರ್ಡ್​​​ಗೆ ಶಿಫ್ಟ್ ಆಗಿದ್ದಾರೆ. ಈ ಮಧ್ಯ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಶೀಘ್ರದಲ್ಲೇ ತಂದೆಯವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಅವರು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆ ವಾರ್ಡ್​ಗೆ ಶಿಫ್ಟ್​ ಮಾಡಲಾಗಿದೆ ಎಂದು ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಹೆಲ್ತ್​ ಅಪೋಲೊ ಆಸ್ಪತ್ರೆಯ ವೈದ್ಯರು ಹೆಲ್ತ್ ಬುಲೆಟಿನ್​ನಲ್ಲಿ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ನಿಖಿಲ್ ಅವರು ಟ್ವೀಟ್ ಮಾಡಿದ್ದಾರೆ.

‘ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಂದೆಯವರು ಈಗ ಉತ್ತಮವಾಗಿ ಚೇತರಿಸಿಕೊಂಡಿದ್ದಾರೆ. ಅವರನ್ನು ಈಗ ವಾರ್ಡ್​​​ಗೆ ಸ್ಥಳಾಂತರ ಮಾಡಲಾಗಿದ್ದು, ಶೀಘ್ರವೇ ಮನೆಗೆ ಮರಳಲಿದ್ದಾರೆ. ಕೆಲ ದಿನ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ. ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು, ಅಭಿಮಾನಿಗಳು ಯಾರು ಕೂಡ ಆತಂಕ ಪಡಬೇಕಿಲ್ಲ. ತಂದೆಯವರು ಕ್ಷೇಮವಾಗಿದ್ದು, ಕೆಲ ದಿನಗಳಲ್ಲಿಯೇ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಟ್ವೀಟ್​​ನಲ್ಲಿ ನಿಖಿಲ್ ಉಲ್ಲೇಖಿಸಿದ್ದಾರೆ.

‘ತಂದೆಯವರ ಆರೋಗ್ಯ ಚೇತರಿಕೆಗಾಗಿ ಪ್ರೀತಿ, ವಾತ್ಸಲ್ಯದಿಂದ ಪ್ರಾರ್ಥನೆ ಮಾಡಿದ ಎಲ್ಲ ಕಾರ್ಯಕರ್ತ ಬಂಧುಗಳು, ನಾಡಿನ ಜನರಿಗೆ ನನ್ನ ವಂದನೆಗಳು. ಹಾಗೆಯೇ, ತಂದೆಯವರ ಆರೋಗ್ಯ ವಿಚಾರಿಸಿದ ವಿವಿಧ ಮಠಗಳ ಪೂಜ್ಯ ಸ್ವಾಮೀಜಿಗಳವರಿಗೆ ಹಾಗೂ ಕ್ಷೇಮ ವಿಚಾರಿಸಿದ ಹಲವಾರು ಪಕ್ಷಗಳ ಹಿರಿಯ ನಾಯಕರಿಗೆ ನನ್ನ ತುಂಬು ಹೃದಯದ ಕೃತಜ್ಞತೆಗಳು’ ಎಂದು ನಿಖಿಲ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ‘ರಾಜಕಾರಣದಿಂದ ಒಂದು ಹೆಜ್ಜೆ ಹೊರಗೆ ಇಟ್ಟಿದ್ದೇನೆ ಎಂಬ ಭಾವನೆ ಯಾರಿಗೂ ಬೇಡ’: ನಿಖಿಲ್​ ಕುಮಾರ್​ ಸ್ಪಷ್ಟನೆ

ಈ ಮಧ್ಯೆ, ಕುಮಾರಸ್ವಾಮಿ ಅವರ ತಾಯಿ ಚೆನ್ನಮ್ಮ ಆಪೋಲೊ ಆಸ್ಪತ್ರೆಗೆ ಆಗಮನಿಸಿ ಮಗನ ಆರೋಗ್ಯ ವಿಚಾರಿಸಿದರು. ಚೆನ್ನಮ್ಮ ಅವರು ಕುಮಾರಸ್ವಾಮಿ ಗುಣಮುಖರಾಗಲು ಪೂಜೆ ಮಾಡಿಸಿ ಆಸ್ಪತ್ರೆಗೆ ಪ್ರಸಾದ ತೆಗೆದುಕೊಂಡು ಬಂದಿದ್ದರು.

ಅನಾರೋಗ್ಯದ ಕಾರಣ ಕುಮಾರಸ್ವಾಮಿ ಅವರನ್ನು ಬುಧವಾರ ಬೆಳಿಗ್ಗೆ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ