ಅಂಬರೀಶ್ ಕಾಂಗ್ರೆಸ್ ಪಕ್ಷಕ್ಕೆ ಏನು ಅನ್ಯಾಯ ಮಾಡಿದ್ದರು? ಡಿಕೆ ಶಿವಕುಮಾರ್​ಗೆ ಸಂಸದೆ ಸುಮಲತಾ ಪ್ರಶ್ನೆ

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಭೇಟಿ ನಂತರ ಜೆ.ಪಿ.ನಗರದ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದೆ ಸುಮಲತಾ, ವಿಷ, ವೈರಿ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿಕೆ ನನಗೆ ಆಶ್ಚರ್ಯ ಮೂಡಿಸಿದೆ. ಈಗ ಈ ವಿಷಯ ಮಾತನಾಡಿದ್ದು ಯಾಕೆ. ಅಂಬರೀಶ್ ಕಾಂಗ್ರೆಸ್ ಪಕ್ಷಕ್ಕೆ ಏನು ಅನ್ಯಾಯ ಮಾಡಿದ್ದರು ಎಂದು ಪ್ರಶ್ನೆ ಮಾಡಿದ್ದಾರೆ.

ಅಂಬರೀಶ್ ಕಾಂಗ್ರೆಸ್ ಪಕ್ಷಕ್ಕೆ ಏನು ಅನ್ಯಾಯ ಮಾಡಿದ್ದರು? ಡಿಕೆ ಶಿವಕುಮಾರ್​ಗೆ ಸಂಸದೆ ಸುಮಲತಾ ಪ್ರಶ್ನೆ
ಡಿ.ಕೆ.ಶಿವಕುಮಾರ್, ಅಂಬರೀಶ್, ಸುಮಲತಾ
Updated By: ಗಂಗಾಧರ​ ಬ. ಸಾಬೋಜಿ

Updated on: Mar 31, 2024 | 7:40 PM

ಬೆಂಗಳೂರು, ಮಾರ್ಚ್​​ 31: ಅಂಬರೀಶ್ ಕಾಂಗ್ರೆಸ್ ಪಕ್ಷಕ್ಕೆ ಏನು ಅನ್ಯಾಯ ಮಾಡಿದ್ದರು? ಕಾಂಗ್ರೆಸ್​ನಲ್ಲಿ ನಮ್ಮ ಕುಟುಂಬ 25 ವರ್ಷ ಸೇವೆ ಸಲ್ಲಿಸಿದೆ. ಈ 5 ವರ್ಷದಲ್ಲಿ ಕಾಂಗ್ರೆಸ್ ನಾಯಕರಿಗೆ ಅದು ನೆನಪಾಗಲಿಲ್ವಾ ಎಂದು ಡಿಸಿಎಂ ಡಿಕೆ ಶಿವಕುಮಾರ್​ಗೆ ಸಂಸದೆ ಸುಮಲತಾ (Sumalatha) ಪ್ರಶ್ನೆ ಮಾಡಿದ್ದಾರೆ. ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಭೇಟಿ ನಂತರ ಜೆ.ಪಿ.ನಗರದ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಷ, ವೈರಿ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿಕೆ ನನಗೆ ಆಶ್ಚರ್ಯ ಮೂಡಿಸಿದೆ. ಈಗ ಈ ವಿಷಯ ಮಾತನಾಡಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್​​ನ ಯಾರ‍್ಯಾರು ಸಂಪರ್ಕ ಮಾಡಿದ್ದಾರೆ, ಮಾಡುತ್ತಿದ್ದಾರೆ. ಈ ಬಗ್ಗೆ ನಿಮ್ಮ ಊಹೆಗೆ ಬಿಡುತ್ತೇನೆ ಎಂದು ಹೇಳಿದ್ದಾರೆ.

2019ಕ್ಕೂ ಮುಂಚೆ ನನಗೆ ಯಾವುದೇ ರಾಜಕೀಯ ಅನುಭವ ಇರಲಿಲ್ಲ. ರಾಜಕೀಯ ಚದುರಂಗದ ಆಟ ಅನ್ನೋದು ಅರಿವಾಗಿದೆ. ಮಂಡ್ಯದ ಜನರ ಅಭಿಪ್ರಾಯ ಕೇಳಿ ಮುಂದಿನ ನಿರ್ಧಾರ ಕೈಗೊಳ್ಳುವೆ. ನನ್ನ ಮಾತಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದಿದ್ದಾರೆ.

ಡಿಕೆ ಶಿವಕುಮಾರ್​ ಹೇಳಿಕೆಗೆ ಹೆಚ್​ಡಿ ಕುಮಾರಸ್ವಾಮಿ ತಿರುಗೇಟು

ಮಂಡ್ಯ ಸಂಸದೆ ಸುಮಲತಾ ಭೇಟಿ ನಂತರ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಮಾತನಾಡಿದ್ದು, ಡಿಕೆ ಶಿವಕುಮಾರ್​ ನನಗೆ ವೈರಿಯಲ್ಲ. ಅವರು ನನ್ನ ದೊಡ್ಡ ಹಿತೈಷಿ. ಐದು ವರ್ಷ ಸರ್ಕಾರ ಸಂಪೂರ್ಣ ನಡೆಸಲಿ, 39 ಶಾಸಕರಿರುವ ಪಕ್ಷಕ್ಕೆ ಸಿಎಂ ಸ್ಥಾನ ನೀಡಿದ್ದೆವು ಅಂತ ಪದೇ ಪದೇ ಹೇಳುತ್ತಿದ್ದಾರೆ.

ಇದನ್ನೂ ಓದಿ: ಮಂಡ್ಯ ಕ್ಷೇತ್ರದಲ್ಲಿ ಬೆಂಬಲ ನೀಡುವಂತೆ ಸುಮಲತಾಗೆ ಮನವಿ ಮಾಡಿದ ಕುಮಾರಸ್ವಾಮಿ

ಐದು ವರ್ಷ ನಾಮಕಾವಸ್ತೆಯಾಗಿ ಅಧಿಕಾರ ಕೊಟ್ಟರು. ಒಂದು ದಿನವೂ ಅಧಿಕಾರ ನೆಮ್ಮದಿಯಾಗಿ ನಡೆಸಲು ಬಿಡಲಿಲ್ಲ. ಅದಕ್ಕೆ ಸಮ್ಮಿಶ್ರ ಸರ್ಕಾರ ಹೋಗಿದ್ದು, ನನ್ನಿಂದ ಸರ್ಕಾರ ಹೋಗಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಡಿಕೆ ಶಿವಕುಮಾರ್ ಹೇಳಿದ್ದೇನು?

ನನಗೆ ಮಂಡ್ಯ ರಾಜಕಾರಣ ನೋಡಿ ಅಸೂಯೆ ಆಗುತ್ತಿದೆ. ಹೆಚ್​ಡಿ ಕುಮಾರಸ್ವಾಮಿ ಆಡಿದ ಮಾತು, ನಡೆದುಕೊಂಡು ರೀತಿ ನೋಡಿದರೆ ಈಗ ಎಲ್ಲರ ಮನೆಗೆ ಹೋಗುತ್ತೇನೆ ಎಂದು ಹೊರಟಿದ್ದಾರೆ. ಸುಮಲತಾ ವೈರಿ ಅಲ್ಲ ಎಂದು ಹೆಚ್​ಡಿಕೆ ಹೇಳಿಕೆ ವಿಚಾರವಾಗಿ ಮಾತನಾಡಿದ್ದು, ಹಾಗಾದರೆ ನಾನು ವೈರಿನಾ, ಯಾರ ಬೆನ್ನಿಗೆ ಚೂರಿ ಹಾಕಿದ್ದೆ. ಅಮೃತ ಕೊಟ್ಟವನಿಗೆ ಬೆನ್ನಿಗೆ ಚೂರಿನಾ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಅಧಿಕಾರದ ಅಹಂನ್ನು ಇಳಿಸುತ್ತೇನೆ: ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಹೆಚ್​ಡಿ ದೇವೇಗೌಡ

38 ಸ್ಥಾನ ಗೆದ್ದವರನ್ನು ಸಿಎಂ ಮಾಡಿದ್ದೆವು ಅದು ವಿಷನಾ? ನಾನು ಏನು ಮಾಡಿದ್ದೇನೆಂದು JDS ಕಾರ್ಯಕರ್ತರಿಗೆ ಗೊತ್ತಿದೆ ಎಂದು ಕುಮಾರಸ್ವಾಮಿ ಹೇಳಿಕೆಗೆ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.