AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಡಿ ಎಂದರೇನು, ಜಮೀನಿನ ಪೋಡಿ ಹೇಗೆ ಮಾಡಿಸಬೇಕು? ಇಲ್ಲಿದೆ ವಿವರ

ರೈತರು ಮತ್ತು ಜಮೀನಿನ ಮಾಲೀಕರು ಪೋಡಿ ಎಂಬ ಪದವನ್ನು ಆಗಾಗ ಬಳಸುತ್ತಿರುತ್ತಾರೆ. ಈ ಪೋಡಿ ಎಂದರೇನು? ಜಮೀನಿನ ಪೋಡಿ ಹೇಗೆ ಮಾಡಿಸಬೇಕು? ಪೋಡಿಯಿಂದಾಗುವ ಉಪಯೋಗಗಳೇನು? ಪೋಡಿ ಮಾಡಿಸುವುದರಿಂದ ಏನೆಲ್ಲ ಸೌಲಭ್ಯಗಳು ದೊರೆಯುತ್ತವೆ? ಪೋಡಿ ಮಾಡಿಸಲು ಯಾವೆಲ್ಲ ದಾಖಲೆಗಳು ಬೇಕು? ಎಂಬುವುದರ ಮಾಹಿತಿ ಇಲ್ಲಿದೆ.

ಪೋಡಿ ಎಂದರೇನು, ಜಮೀನಿನ ಪೋಡಿ ಹೇಗೆ ಮಾಡಿಸಬೇಕು? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Jan 11, 2025 | 9:11 AM

ಹಳ್ಳಿಗಳಲ್ಲಿ ರೈತರು ಅಥವಾ ಜಮೀನು ಮಾಲೀಕರು ಆಗಾಗ “ಪೋಡಿ” ಮಾಡಿಸಬೇಕು ಎಂಬ ಪದವನ್ನು ಬಳಕೆ ಮಾಡುತ್ತಿರುತ್ತಾರೆ. ಹಾಗಿದ್ದರೆ, ಈ ಪೋಡಿ ಎಂದರೇನು? ಜಮೀನಿನ ಪೋಡಿ ಹೇಗೆ ಮಾಡಿಸಬೇಕು? ಪೋಡಿಯಿಂದಾಗುವ ಉಪಯೋಗಗಳೇನು? ಎಂಬುವುದರ ಮಾಹಿತಿ ಇಲ್ಲಿ ವಿವರಿಸಲಾಗಿದೆ.

ಪೋಡಿ ಎಂದರೆ ಜಮೀನಿನ ದುರಸ್ತಿ ಭಾಗ ಮಾಡುವುದು ಎಂದರ್ಥ. ಉದಾ: ಒಂದು ಸರ್ವೆನಂಬರ್​ನಲ್ಲಿ​ ಎರಡಕ್ಕಿಂತ ಹೆಚ್ಚು ಜನರ ಹೆಸರಿದ್ದರೆ ಅದನ್ನು ಪ್ರತ್ಯೇಕವಾಗಿ ಹೆಸರು ಮಾಡುವುದಕ್ಕೆ ಪೋಡಿ ಎನ್ನುವರು.

ಪೋಡಿಯಲ್ಲಿ ನಾಲ್ಕು ವಿಧಗಳಿವೆ

  • ದರ್ಖಾಸ ಪೋಡಿ
  • ಅಲಿನೇಷನ್​ ಪೋಡಿ
  • ಮ್ಯೂಟೇಷನ್​ ಪೋಡಿ
  • ತತ್ಕಾಲ ಪೋಡಿ

ಪೋಡಿ ಏಕೆ ಮಾಡಿಸಬೇಕು?

ಒಂದು ಸರ್ವೆ ನಂಬರ್​ನಲ್ಲಿ ಹಲವಾರು ಹಿಸ್ಸಾ ಸಂಖ್ಯೆಗಳಿರುತ್ತವೆ. ಆದರೆ, ಭೂ ಮಾಲಿಕತ್ವದ ಹೆಸರು ಒಂದೇ ಪಹಣಿಯಲ್ಲಿರುತ್ತದೆ. ಇದರಿಂದಾಗಿ ರೈತರಿಗೆ ಸಾಕಷ್ಟು ಸಮಸ್ಯೆಯಾಗುತ್ತದೆ. ಮತ್ತು ಸರ್ಕಾರದ ಸೌಲಭ್ಯಗಳು ಕೂಡ ದೊರೆಯುವುದಿಲ್ಲ. ಹೀಗಾಗಿ, ಜಮೀನಿನ ಮಾಲೀಕರು ಪೂಡಿ ಮಾಡಿಸಿಕೊಳ್ಳುವುದು ಅತ್ಯವಶ್ಯಕವಾಗಿದೆ. ಜಮೀನನ್ನು ಕಾಯ್ದೆ ಪ್ರಕಾರ ವಿಭಜನೆ ಮಾಡಿ ಪ್ರತ್ಯೇಕ ಹಿಸ್ಸಾ ಸಂಖ್ಯೆ ಹಾಗೂ ತಾತ್ಕಾಲಿಕ ಪೋಡಿ ನಂಬರ್​ ನೀಡಲಾಗುತ್ತದೆ. ಆಗ, ಪೋಡಿ ಮಾಡಲಾಗಿರುವ ಭೂಮಿಗೆ ಆದಾಯ ದಾಖಲೆಗಳನ್ನು ತಯಾರು ಮಡಿ ಏಕ ಮಾಲೀಕತ್ವದ ಪಹಣಿ ದೊರೆಯುತ್ತದೆ.

ಉದಾಹರಣೆ: ಒಂದು ಸರ್ವೆನಂಬರ್​​ನಲ್ಲಿ ಐದು ಹಿಸ್ಸಾಗಳಿವೆ. ಆದರೆ, ಪ್ರತ್ಯೇಕ ಪಹಣಿ ಇರುವುದಿಲ್ಲ. ಐದು ಹಿಸ್ಸಾ ಸಂಖ್ಯೆಗಳು ಅಥವಾ ಮಾಲೀಕರ ಹೆಸರುಗಳು ಮತ್ತು ಜಮೀನಿನ ವಿವರ ಒಂದೇ ಪಹಣಿಯಲ್ಲಿರುತ್ತದೆ. ಈ ಸಂದರ್ಭದಲ್ಲಿ ಸರ್ವೆ ನಂಬರ್​ನಲ್ಲಿರುವ ಹೆಸರು ಪ್ರತ್ಯೇಕವಾಗಿ ಬರಬೇಕೆಂದರೆ ತಾತ್ಕಾಲಿಕ ಪೋಡಿ ಮಾಡಿಸಬೇಕು.

ಪೋಡಿ ಮಾಡಲಿಸಲು ಬೇಕಾಗುವ ದಾಖಲೆಗಳು

ಜಮೀನು ಮಾಲೀಕನ ಆಧಾರ ಕಾರ್ಡ್​ ಹಾಗೂ ಪಹಣಿ ಕಡ್ಡಾಯವಾಗಿ ಬೇಕು. ಇನ್ನೂ ಹೆಚ್ಚಿನ ದಾಖಲಾತಿಗಳ ಮಾಹಿತಿಗಾಗಿ ತಹಸೀಲ್ದಾರ ಕಚೇರಿ ಅಥವಾ ನಾಡಕಚೇರಿಗೆ ಸಂಪರ್ಕಿಸಿ. ಪೋಡಿ ಮಾಡಿಸಲು ನಾಡ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಪೋಡಿಯಲ್ಲಿ ಹೆಸರು ಬದಲಾವಣೆಯಾಗುವುದಿಲ್ಲ. ಕೇವಲ ಗಡಿ ರೇಖೆ ಮಾತ್ರ ಗುರುತು ಮಾಡಲಾಗುತ್ತದೆ.

ಪೋಡಿ ಮಾಡುವುದರಿಂದ ಆಗುವ ಪ್ರಯೋಜನೆಗಳು

ಏಕ ಮಾಲಿಕತ್ವವಿದ್ದರೆ ಕಿಸಾನ್ ಕ್ರೇಡಟ್ ಕಾರ್ಡ್, ಬೆಳೆ ಸಾಲ ಸಿಗುತ್ತದೆ. ಭೂಮಿ ಮಾಲೀಕತ್ವ ಖಾತ್ರಿ ಪಡೆದುಕೊಳ್ಳಬಹುದು. ಒತ್ತುವರಿಯಾಗುವುದಿಲ್ಲ. ಬೆಳೆ ವಿಮೆ ಮಾಡಿಸಲು ಸುಲಭವಾಗುತ್ತದೆ. ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳು ಪಡೆಯಲು ಅನುಕೂಲವಾಗುತ್ತದೆ. ಕರ್ನಾಟಕದಲ್ಲಿ ಕೃಷಿ ಭೂಮಿ ಖರೀದಿ ಹಾಗೂ ಮಾರಾಟ ಮಾಡಲು ಪೋಡಿ ಮಾಡುವುದು ಕಡ್ಡಯವಾಗಿದೆ. ಪೋಡಿ ಮಾಡಿಸುವುದರಿಂದ ಒಂದು ಆರ್​ಟಿಸಿ ಒಂದು ನಕ್ಷೆ ದೊರೆಯುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:09 am, Sat, 11 January 25