ಸ್ಥಾನಮಾನಕ್ಕಾಗಿ ಆಸೆಪಟ್ಟವನಲ್ಲ: BY ವಿಜಯೇಂದ್ರ

ಬೆಂಗಳೂರು: ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ್ಯರಾಗಿ ನಿನ್ನೆ ನೇಮಕಗೊಂಡ ಬಿ ವೈ ವಿಜಯೇಂದ್ರ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಗೆ ಭೇಟಿ ನೀಡಿ ಕೆಲ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಸುದ್ದಿಗಾರರೊದಿಗೆ ಮಾತನಾಡಿದ ವಿಜಯೇಂದ್ರ, “ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಾನ್ಯ ಜೆಪಿ ನಡ್ಡಾ ಜೀ ಅವರು ನನ್ನನ್ನು ರಾಜ್ಯ ಬಿಜೆಪಿಗೆ ಉಪಾಧ್ಯಕ್ಷನಾಗಿ ಆರಿಸಿರುವುದು ಅತೀವ ಸಂತಸವನ್ನುಂಟು ಮಾಡಿದೆ, ನನಗೆ ಜವಾಬ್ದಾರಿ ವಹಿಸಿರುವ ಅವರಿಗೂ, ಪಕ್ಷದ ರಾಷ್ಟೀಯ ಮತ್ತು ರಾಜ್ಯ ನಾಯಕರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ,” […]

ಸ್ಥಾನಮಾನಕ್ಕಾಗಿ ಆಸೆಪಟ್ಟವನಲ್ಲ: BY ವಿಜಯೇಂದ್ರ
ಸಾಧು ಶ್ರೀನಾಥ್​

Updated on: Aug 01, 2020 | 4:49 PM

ಬೆಂಗಳೂರು: ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ್ಯರಾಗಿ ನಿನ್ನೆ ನೇಮಕಗೊಂಡ ಬಿ ವೈ ವಿಜಯೇಂದ್ರ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಗೆ ಭೇಟಿ ನೀಡಿ ಕೆಲ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು.

ನಂತರ ಸುದ್ದಿಗಾರರೊದಿಗೆ ಮಾತನಾಡಿದ ವಿಜಯೇಂದ್ರ, “ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಾನ್ಯ ಜೆಪಿ ನಡ್ಡಾ ಜೀ ಅವರು ನನ್ನನ್ನು ರಾಜ್ಯ ಬಿಜೆಪಿಗೆ ಉಪಾಧ್ಯಕ್ಷನಾಗಿ ಆರಿಸಿರುವುದು ಅತೀವ ಸಂತಸವನ್ನುಂಟು ಮಾಡಿದೆ, ನನಗೆ ಜವಾಬ್ದಾರಿ ವಹಿಸಿರುವ ಅವರಿಗೂ, ಪಕ್ಷದ ರಾಷ್ಟೀಯ ಮತ್ತು ರಾಜ್ಯ ನಾಯಕರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ,” ಎಂದರು

“ನಾನು ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತ, ಸ್ಥಾನಮಾನಕ್ಕಾಗಿ ಯಾವತ್ತೂ ಆಸೆ ಇಟ್ಟುಕೊಂಡವನಲ್ಲ, ಪಕ್ಷ ಏನೇ ಜವಾಬ್ದಾರಿ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ,” ಎಂದು ವಿಜಯೇಂದ್ರ ಹೇಳಿದರು,

ಪಕ್ಷದ ಸಂಘಟನೆಗೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆಂದ ಬಿವೈವಿ, ಸಂಪುಟ ವಿಸ್ತರಣೆ ಬಗ್ಗೆ ತನಗೇನೂ ಗೊತ್ತಿಲ್ಲ ಎಂದರು.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us