Karnataka Budget 2024 Date: ಕರ್ನಾಟಕ ಬಜೆಟ್​ ಯಾವಾಗ, ಸಮಯ? ಗಾತ್ರ ಎಷ್ಟು? ಲೈವ್ ವೀಕ್ಷಿಸುವುದು ಹೇಗೆ?

Karnataka Budget 2024-25 Live Streaming: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್‌ 2024 ಮಂಡನೆಗೆ ಅಣಿಯಾಗುತ್ತಿದ್ಧಾರೆ. ಬೆಂಗಳೂರಿನಲ್ಲಿ ವಿವಿಧ ವಲಯಗಳ ಪ್ರಮುಖರೊಂದಿಗೆ ಚರ್ಚಿಸಿ ಅವರ ಬೇಡಿಕೆಗಳ ಪಟ್ಟಿಯನ್ನು ಸ್ವೀಕರಿಸುತ್ತಿದ್ದಾರೆ. ಸಾಮಾಜಿಕ ವಲಯ, ಕೃಷಿಕರು, ಮಹಿಳೆಯರು, ಉದ್ಯಮ ವಲಯ ಬೇಡಿಕೆಗಳನ್ನು ಸಲ್ಲಿಸಿವೆ. ಇನ್ನು ಪ್ರಮುಖವಾಗಿ ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಬಜೆಟ್​ ಮಂಡನೆಯಾಗುತ್ತಿರುವುದು ಮಹತ್ವ ಪಡೆದುಕೊಂಡಿದೆ. ಇನ್ನು ಬಜೆಟ್​ ಯಾವಾಗ ಸಮಯಕ್ಕೆ ಮಂಡನೆಯಾಗಲಿದೆ? ಎಲ್ಲಿ ಲೈವ್ ವೀಕ್ಷಣೆ ಮಾಡಬಹುದು ಎನ್ನುವ ವಿವರ ಈ ಕೆಳಗಿನಂತಿದೆ.

Karnataka Budget 2024 Date: ಕರ್ನಾಟಕ ಬಜೆಟ್​ ಯಾವಾಗ, ಸಮಯ? ಗಾತ್ರ ಎಷ್ಟು? ಲೈವ್ ವೀಕ್ಷಿಸುವುದು ಹೇಗೆ?
ವಿಧಾನಸೌಧ
Follow us
ರಮೇಶ್ ಬಿ. ಜವಳಗೇರಾ
| Updated By: Digi Tech Desk

Updated on:Feb 16, 2024 | 9:27 AM

ಬೆಂಗಳೂರು, (ಫೆಬ್ರವರಿ 14): ಈಗಾಗಲೇ ಕರ್ನಾಟಕದ 2024-25ನೇ ಸಾಲಿನ ಬಜೆಟ್​ (Karnataka Budget) ಅಧಿವೇಶನ ಪ್ರಾರಂಭವಾಗಿದ್ದು, ಮೊದಲ ದಿನ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih) ಅವರು ಫೆಬ್ರವರಿ 16ರಂದು 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಲೋಕಸಭೆ ಚುನಾವಣೆಗೆ ಹೊತ್ತಲ್ಲೇ ಬಜೆಟ್ ಮಂಡನೆ ಮಾಡುತ್ತಿರುವುದರಿಂದ ಮಹತ್ವದ ಘೋಷಣೆಗಳು ಮಾಡುವ ನಿರೀಕ್ಷೆಗಳಿವೆ.

ಬಜೆಟ್​ ಯಾವಾಗ? ಯಾವ ಸಮಯಕ್ಕೆ?

ಫೆ.16ರ ಬೆಳಗ್ಗೆ 10.15ಕ್ಕೆ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್​ ನೇರಪ್ರಸಾರವನ್ನು ಟಿವಿ9 ವಾಹಿನಿ ಹಾಗೂ ಟಿವಿ9 ಡಿಜಿಟಲ್​ನಲ್ಲಿ ನೋಡಬಹುದಾಗಿದೆ. ಬಜೆಟ್​​ ಮಂಡನಗೂ ಮುನ್ನ ಸಿದ್ದರಾಮಯ್ಯ ಅವರು ವಿಶೇಷ ಸಂಪುಟ ಸಭೆ ನಡೆಸಲಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ 15ನೇ ಬಾರಿಯ ಬಜೆಟ್ ಮಂಡಣೆ ಇದಾಗಿರಲಿದ್ದು ಕರ್ನಾಟಕದ ಮಟ್ಟಿಗೆ ಇದೊಂದು ಹೊಸ ದಾಖಲೆಯಾಗಿದೆ.

ಇದನ್ನೂ ಓದಿ: Chalo Delhi: ಬಜೆಟ್ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ: ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಈ ಬಾರಿ ಎಷ್ಟು ಗಾತ್ರದ ಬಜೆಟ್?

ಈ ಬಾರಿ ರಾಜ್ಯದ ಬಜೆಟ್ ಗಾತ್ರ 3.80 ಲಕ್ಷ ಕೋಟಿ ರೂ.ಗೆ ಏರಿಕೆಯಾಗಲಿದೆ. ಈವರೆಗೂ ರಾಜ್ಯದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ. ದಾಟಿರಲಿಲ್ಲ. ಆದ್ರೆ. ಈ ಬಾರಿ ಸುಮಾರು 50 ಸಾವಿರ ಕೋಟಿ ರೂ.ಹೆಚ್ಚಳವಾಗಲಿದೆ. ಇದರೊಂದಿಗೆ ಈ ಬಾರಿ ಬಜೆಟ್​ ಗಾತ್ರ 3.80 ಲಕ್ಷ ಕೋಟಿ ರೂ.ತಲುಪಲಿದೆ.

ಸಿದ್ದರಾಮಯ್ಯ ಅವರು ಮಂಡಿಸಿದ ಮೊದಲ ಆಯವ್ಯಯದ ಗಾತ್ರ 12,616 ಕೋಟಿ ಆಗಿದ್ದರೆ 13 ನೇ ಆಯವ್ಯಯದ ಗಾತ್ರ 2,09,181 ಕೋಟಿ ಆಗಿತ್ತು. 14 ನೇ ಆಯವ್ಯಯದ ಗಾತ್ರ 3,35,000 ಕೋಟಿ‌ ಆಗಬಹುದು ಎಂದು ಸ್ವತಃ ಮುಖ್ಯಮಂತ್ರಿಗಳೇ ಅಂದಾಜಿಸಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ.

ಗ್ಯಾರಂಟಿಗಳೇ ದೊಡ್ಡ ಹೊರೆ

ಈ ಬಾರಿ ದೊಡ್ಡ ಸವಾಲಾಗಿರುವುದು ಪಂಚ ಗ್ಯಾರಂಟಿ (Congress Guarntee) ಹೊರೆ ಹಾಗೂ ಬರದ ಬರೆ. ಇತ್ತ ಪ್ರಸಕ್ತ ವರ್ಷದಲ್ಲಿ ರಾಜಸ್ವ ಸಂಗ್ರಹ ನಿಗದಿತ ಗುರಿ ತಲುಪದೇ ಇರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಅದರಲ್ಲೂ 2024-25ನೇ ಸಾಲಿನ ಬಜೆಟ್​ನಲ್ಲಿ ಪಂಚ ಗ್ಯಾರಂಟಿ ವೆಚ್ಚದ ಮಧ್ಯೆ ಅಭಿವೃದ್ಧಿಗೆ ವೇಗ ಕೊಡುವ ಸಮತೋಲಿತ ಬಜೆಟ್ ಕೊಡುವ ಅನಿವಾರ್ಯತೆ ಇದೆ. ಈ ಬಾರಿ ಅಲ್ಪ ಪ್ರಮಾಣದ ಆದಾಯ ಬಜೆಟ್ ಮಂಡಿಸುವ ಸಾಧ್ಯತೆಗಳಿವೆ. ರಾಜಸ್ವ ಗುರಿ ಹೆಚ್ಚಿಸಿ, ಉಳಿದಂತೆ ಸಾಲದ ಮೊರೆ ಹೋಗುವ ಲೆಕ್ಕಾಚಾರದಲ್ಲಿ ಸಿದ್ದರಾಮಯ್ಯ ಇದ್ದಾರೆ.

ಸಿದ್ದರಾಮಯ್ಯಗೆ ಈ ಬಾರಿಯ ಬಜೆಟ್ ಮಂಡನೆ ವೇಳೆ ದೊಡ್ಡ ಸವಾಲಾಗಿರುವುದು ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸುವುದು.‌ 2023-24 ಸಾಲಿನಲ್ಲಿ ಪಂಚ ಗ್ಯಾರಂಟಿಗಳಿಗೆ 38,000 ಕೋಟಿ ರೂ. ಅನುದಾನ ಬೇಕಾಗಿದ್ದರೆ, 2024-25 ಸಾಲಿನಲ್ಲಿ ಪಂಚ ಗ್ಯಾರಂಟಿಗಳಿಗಾಗಿ ಸಮಾರು 58,000 ಕೋಟಿ ರೂ. ಅನುದಾನ ಮೀಸಲಿಡುವ ಅನಿವಾರ್ಯತೆ ಇದೆ. ಇಷ್ಟೊಂದು ದೊಡ್ಡ ಪ್ರಮಾಣದ ಹಣ ಹೊಂದಿಸುವುದೇ ದೊಡ್ಡ ಸವಾಲಾಗಿದೆ. ಒಂದೆಡೆ ಸೀಮಿತ ಆದಾಯ ಮೂಲ, ಇನ್ನೊಂದೆಡೆ ತೆರಿಗೆ ಸಂಗ್ರಹ ಗುರಿ ಮುಟ್ಟದೇ ಇರುವುದು ದೊಡ್ಡ ಸಂಕಷ್ಟ ತಂದೊಡ್ಡಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಈ ಬಾರಿ ಪಂಚ ಗ್ಯಾರಂಟಿಗಾಗಿ ಬೇಕಾಗಿರುವ ವಾರ್ಷಿಕ 58,000 ಕೋಟಿ ರೂ.‌ ಹಣ ಹೊಂದಿಸಲು ನಾನಾ ಲೆಕ್ಕಾಚಾರಗಳನ್ನು ಹಾಕಬೇಕಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 7:01 pm, Wed, 14 February 24

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ