ಬೆಂಗಳೂರು: ಕರ್ನಾಟಕದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಇಂದು ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಜುಲೈ 19 ಸೋಮವಾರದಂದು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಬೆಳಗ್ಗೆ 10.30ರಿಂದ 1.30ರ ತನಕ ಹಾಗೂ ಭಾಷಾ ವಿಷಯಗಳ ಪರೀಕ್ಷೆ 22ರಂದು ಗುರುವಾರ ಬೆಳಗ್ಗೆ 10.30ರಿಂದ 1.30ರ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಘೋಷಿಸಿದ್ದಾರೆ.
ಇದೇ ವೇಳೆ, ಶಾಲೆಗಳ ಆರಂಭದ ಬಗ್ಗೆ ಮಾತನಾಡಿರುವ ಸಚಿವ ಸುರೇಶ್ ಕುಮಾರ್ ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಸದ್ಯಕ್ಕೆ ಇನ್ನೂ ತೀರ್ಮಾನಿಸಿಲ್ಲ ಎಂದಿದ್ದಾರೆ.
ಶಾಲೆ ಆರಂಭ ಸಂಬಂಧ ಟಾಸ್ಕ್ ಫೋರ್ಸ್ ರಚಿಸುತ್ತೇವೆ: ಶಾಲೆಗಳ ಆರಂಭ ಆಗಬೇಕು ಎಂಬುದರ ಬಗ್ಗೆ ರಾಜ್ಯಾದ್ಯಂತ ಭಾರೀ ಚರ್ಚೆಗಳಿವೆ. ಕೋವಿಡ್ 3ನೆಯ ಅಲೆಯ ಬಗ್ಗೆಯೂ ಆತಂಕವಿದೆ. ಈ ಹಿನ್ನೆಲೆಯಲ್ಲಿ ಎಲ್ಲ ತಜ್ಞರೊಂದಿಗೆ ಚರ್ಚಿಸಿ, ತೀರ್ಮಾನ ತೆಗೆದುಕೊಳ್ಳಲಾಗುವುದು. ಶಾಲೆ ಆರಂಭ ಸಂಬಂಧ ಸುದೀರ್ಘ ಚರ್ಚೆ ಮಾಡಿದ್ದೇವೆ. ಡಾ. ದೇವಿಶೆಟ್ಟಿ ಸಮಿತಿ ಕೂಡ ವರದಿಯನ್ನು ನೀಡಿದೆ. ‘ವಿದ್ಯಾಗಮ 2’ ಜಾರಿ ಮಾಡುವಂತೆ ಸಲಹೆ ನೀಡಿದ್ದಾರೆ. ಶಾಲೆ ಆರಂಭ ಸಂಬಂಧ ಆರೋಗ್ಯ ಇಲಾಖೆ ಜತೆ ಚರ್ಚೆ ನಡೆದಿದೆ. ಇನ್ನೆರಡು ದಿನದಲ್ಲಿ ವಿಸ್ತೃತ ಚರ್ಚೆ ಮಾಡಲಾಗುವುದು. ಶಾಲೆ ಆರಂಭ ಸಂಬಂಧ ಟಾಸ್ಕ್ ಫೋರ್ಸ್ ರಚಿಸುತ್ತೇವೆ. ಶಾಲೆ ಆರಂಭ ಸಂಬಂಧ ಸಲಹೆಯನ್ನು ನೀಡುತ್ತದೆ. ವಿಷಯ ಪರಿಣಿತರು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು. ಮಕ್ಕಳ ತಜ್ಞರು ಈ ಟಾಸ್ಕ್ ಫೋರ್ಸ್‌ನಲ್ಲಿ ಇರುತ್ತಾರೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿ್ದ್ದಾರೆ.
ಜುಲೈ 1ರಿಂದು ಚಂದನವಾಹಿನಿಯಲ್ಲಿ ಪಾಠಗಳನ್ನು ಆರಂಭ ಮಾಡುತ್ತಿದ್ದೇವೆ. ಕನ್ನಡ, ಆಂಗ್ಲ ಮಾಧ್ಯಮದಲ್ಲಿ ಪಾಠಗಳು ನಡೆಯುತ್ತೆ. ದೀಕ್ಷಾ ಪೋರ್ಟಲ್‌ನಲ್ಲಿ ಪಾಠಗಳ ವಿಡಿಯೋ ಲಭ್ಯವಿದೆ. ದೀಕ್ಷಾ ಪೋರ್ಟಲ್‌ನಲ್ಲಿ ಎಲ್ಲ ಪಾಠಗಳು ಲಭ್ಯವಿದೆ. ಪೋರ್ಟಲ್‌ನಲ್ಲಿ 22 ಸಾವಿರ ಇ ಕಂಟೆಂಟ್ ಲಭ್ಯವಿದೆ. ಚಿಕ್ಕ ಮಕ್ಕಳಿಗಾಗಿ ಮಕ್ಕಳ ವಾಹಿನಿ ಆರಂಭಿಸಿದ್ದೇವೆ. ಈ ಬಗ್ಗೆ ಯೂಟ್ಯೂಬ್‌ನಲ್ಲಿ ವಿಡಿಯೋಗಳು ಇವೆ ಎಂದೂ ಸುದ್ದಿಗೋಷ್ಠಿಯಲ್ಲಿ ಸಚಿವರು ವಿವರವಾಗಿ ತಿಳಿಸಿದರು.
ಮೊದಲು, ಒಂದು ತಿಂಗಳು ‘ಸೇತು ಬಂಧ’ ಕೋರ್ಸ್ ಆರಂಭವಾಗಲಿದೆ. ಕಳೆದ ವರ್ಷ ವಿದ್ಯಾರ್ಥಿಗಳು ಪಾಠಗಳನ್ನು ಕಲಿತಿಲ್ಲ. ಹೀಗಾಗಿ ಬ್ರಿಡ್ಜ್ ಕೋರ್ಸ್ ಆರಂಭ ಮಾಡುತ್ತಿದ್ದೇವೆ. ವಾರ್ಷಿಕ ಪರೀಕ್ಷೆ ಬಿಟ್ಟು, ನಿರಂತರ ಮೌಲ್ಯಾಂಕ ಬಗ್ಗೆ ಚರ್ಚೆ ನಡೆದಿದೆ. CBSE ಮಾದರಿಯಲ್ಲಿ ನಿರಂತರ ಮೌಲ್ಯಾಂಕ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.
(when school re open in karnataka education minister s Suresh Kumar in PC )