ಆಸ್ಪತ್ರೆಯಿಂದ ಕುಮಾರಸ್ವಾಮಿ ಡಿಸ್ಚಾರ್ಜ್ ಯಾವಾಗ? ಅಪ್ಡೇಟ್ ನೀಡಿದ ಪುತ್ರ ನಿಖಿಲ್

ರಾಮನಗರ ಜಿಲ್ಲೆಯ ಚನ್ನಪಟ್ಟಣದ ರೆಸಾರ್ಟ್​​ನಲ್ಲಿ ನಡೆಯುತ್ತಿದ್ದ ಜೆಡಿಎಸ್​ ಕಾರ್ಯಕರ್ತರ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರಸ್ವಾಮಿ, ಹೆಚ್​ಡಿ ಕುಮಾರಸ್ವಾಮಿಗೆ ನಿನ್ನೆ ಹೃದಯ ಶಸ್ತ್ರ ಚಿಕಿತ್ಸೆ ನಡೆದಿದೆ. ರಾಜ್ಯದ ಜನರ ಆಶೀರ್ವಾದರಿಂದ ಕುಮಾರಸ್ವಾಮಿ ಅವರು ಗುಣಮುಖರಾಗಿದ್ದಾರೆ. ಭಾನುವಾರ ಡಿಸ್ಚಾರ್ಜ್ ಆಗುತ್ತಾರೆ ಎಂದಿದ್ದಾರೆ.

ಆಸ್ಪತ್ರೆಯಿಂದ ಕುಮಾರಸ್ವಾಮಿ ಡಿಸ್ಚಾರ್ಜ್ ಯಾವಾಗ? ಅಪ್ಡೇಟ್ ನೀಡಿದ ಪುತ್ರ ನಿಖಿಲ್
ಕುಮಾರಸ್ವಾಮಿ, ನಿಖಿಲ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Mar 22, 2024 | 8:43 PM

ರಾಮನಗರ, ಮಾರ್ಚ್​ 22: ಮಾಚಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಗೆ ನಿನ್ನೆ ಹೃದಯ ಶಸ್ತ್ರ ಚಿಕಿತ್ಸೆ ನಡೆದಿದೆ. ಡಾ.ಮಂಜುನಾಥ, ವೈದ್ಯ ಸಾಯಿ ಸತೀಶ್ ನೇತೃತ್ವದಲ್ಲಿ ಮೂರುವರೆ ಗಂಟೆ ಕಾಲ ನಡೆದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ರಾಜ್ಯದ ಜನರ ಆಶೀರ್ವಾದರಿಂದ ಕುಮಾರಸ್ವಾಮಿ ಅವರು ಗುಣಮುಖರಾಗಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲೆಯ ಚನ್ನಪಟ್ಟಣದ ರೆಸಾರ್ಟ್​​ನಲ್ಲಿ ನಡೆಯುತ್ತಿದ್ದ ಜೆಡಿಎಸ್​ ಕಾರ್ಯಕರ್ತರ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾನುವಾರ ಆಸ್ಪತ್ರೆಯಿಂದ ಕುಮಾರಸ್ವಾಮಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಅವರು ಆಸ್ಪತ್ರೆಯಿಂದ ಬಂದ ನಂತರ ಡಾ.ಮಂಜುನಾಥ ನಾಮಪತ್ರ ಸಲ್ಲಿಕೆ ದಿನಾಂಕದ ಬಗ್ಗೆ ನಿಗದಿ ಆಗಲಿದೆ. ಮುಂದಿನ ತಿಂಗಳು ಅಂದರೆ ಏಪ್ರಿಲ್​ 1ರೊಳಗೆ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಕುಮಾರಸ್ವಾಮಿ ಅವರು ಭಾಗಿಯಾಗುತ್ತಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿಗೆ ಹೃದಯ ಶಸ್ತ್ರ ಚಿಕಿತ್ಸೆ: ತಂದೆ ಆರೋಗ್ಯದ ಬಗ್ಗೆ ಪುತ್ರ ನಿಖಿಲ್​ ಹೇಳಿದ್ದಿಷ್ಟು

ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದ ಕುಮಾರಸ್ವಾಮಿ ಇತ್ತೀಚೆಗೆ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದ್ದರು. ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲಿ ತಂದೆ ಹೆಚ್​ಡಿ ದೇವೇಗೌಡ ಹಾಗೂ ತಾಯಿ ಚೆನ್ನಮ್ಮ ಅವರಿಂದ ಆಶೀರ್ವಾದ ಪಡೆದ ಕುಮಾರಸ್ವಾಮಿ ನಂತರ ವಿಮಾನ ನಿಲ್ದಾಣಕ್ಕೆ ತೆರಳಿದ್ದರು.

ಬಳಿಕ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದ ಈ ಕುರಿತಾಗಿ ನಿಖಿಲ್​ ಕುಮಾರಸ್ವಾಮಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಮಾ.21 ರಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು ಎಂದು ಮಾಹಿತಿ ನೀಡಿದ್ದರು.

ಇದನ್ನೂ ಓದಿ: Lok Sabha Elections: ಕೊನೇ ಕ್ಷಣದಲ್ಲಿ ಮಂಡ್ಯದಲ್ಲಿ ಕಣಕ್ಕಿಳಿಯಲು ಕುಮಾರಸ್ವಾಮಿ ನಿರ್ಧಾರ; ಇದರ ಹಿಂದಿದೆ ಹಲವು ಲೆಕ್ಕಾಚಾರ!

ಅಭಿಮಾನಿಗಳು, ಹಿತೈಷಿಗಳು, ಜಾತ್ಯತೀತ ಜನತಾದಳ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ ತಂದೆಯವರು ಆರೋಗ್ಯವಾಗಿದ್ದಾರೆ. ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹರಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇವೆ ಎಂದು ಬರೆದುಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:36 pm, Fri, 22 March 24

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ