Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಈಗ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ?

ಒಂದು ಕಡೆ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಕೋರ್ಟ್‌ಗೆ ಹಾಜರಾಗುವ ಸಾಧ್ಯತೆಯಿದೆ. ಇನ್ನೊಂದು ಕಡೆ ಚುನಾವಣಾ ಪ್ರಚಾರದಲ್ಲಿ ರಮೇಶ್ ಜಾರಹೊಳಿ ಪ್ರಚಾರಕ್ಕೆ ಭಾಗಿಯಾಗದೇ ಎಲ್ಲಿದ್ದಾರೆ ಎಂಬುದೇ ಪ್ರಶ್ನೆಯಾಗಿದೆ.

ರಮೇಶ್ ಜಾರಕಿಹೊಳಿ ಈಗ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ?
ರಮೇಶ್​ ಜಾರಕಿಹೊಳಿ
Follow us
shruti hegde
|

Updated on:Mar 30, 2021 | 1:28 PM

ಬೆಳಗಾವಿ: ಒಂದು ಕಡೆ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಕೋರ್ಟ್‌ಗೆ ಹಾಜರಾಗುವ ಸಾಧ್ಯತೆಯಿದೆ. ಇನ್ನೊಂದು ಕಡೆ ಚುನಾವಣಾ ಪ್ರಚಾರದಲ್ಲಿ ರಮೇಶ್ ಜಾರಹೊಳಿ ಪ್ರಚಾರಕ್ಕೆ ಭಾಗಿಯಾಗಬೇಕಿತ್ತು. ಈ ನಡುವೆ ರಮೇಶ್​ ಜಾರಕಿಹೊಳಿ ಅವರಿಗೆ ಟೆನ್ಶನ್ ಶುರುವಾದಂತಿದೆ.

ನಿನ್ನೆ ತಡರಾತ್ರಿ ಗೋಕಾಕ್ ನಿವಾಸಕ್ಕೆ ಆಗಮಿಸಿರುವ ರಮೇಶ್ ಜಾರಕಿಹೊಳಿ‌ ಮನೆಯಿಂದ ಹೊರಬಂದಿಲ್ಲ. ಬೆಳಗಾವಿ ಚುನಾವಣೆ ಪ್ರಚಾರಕ್ಕೂ ಬಾರದೇ ರಮೇಶ್ ಜಾರಕಿಹೊಳಿ ಮನೆಯಲ್ಲೇ ಕುಳಿತಿದ್ದಾರೆ.

ಯುವತಿಯನ್ನು ನ್ಯಾಯಾಲಯಕ್ಕೆ ಹಾಜರು ಮಾಡುತ್ತೇವೆ; ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಬೆಂಗಳೂರಿನಲ್ಲಿ ಇದ್ದಾಳೆ. ಅರ್ಧ ಗಂಟೆ ಅಥವಾ ಒಂದು ಗಂಟೆ, ಇಲ್ಲವೇ ಎರಡು ಗಂಟೆಗಳಲ್ಲಿ ಯುವತಿಯನ್ನು ನ್ಯಾಯಾಲಯಕ್ಕೆ ಹಾಜರು ಮಾಡುತ್ತೇವೆ ಎಂದು ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಹೇಳಿದ್ದಾರೆ. ಮೊದಲು ಸಿಆರ್‌ಪಿಸಿ 164 ಪ್ರಕಾರ ಕೋರ್ಟ್​ನಲ್ಲಿ ಹೇಳಿಕೆ ದಾಖಲು ಮಾಡುತ್ತೇವೆ ಎಂದು ನ್ಯಾಯಾಧೀಶರು ಆದೇಶಿಸಿದ ಬೆನ್ನಲ್ಲೇ ವಕೀಲ ಜಗದೀಶ್ ಈ ಹೇಳಿಕೆ ನೀಡಿದ್ದಾರೆ.

ನ್ಯಾಯಾಲಯ ಯಾವಾಗ ಹೇಳುತ್ತೋ ಆವಾಗ ಯುವತಿಯನ್ನು ಕರೆದುಕೊಂಡು ಬರುತ್ತೇವೆ. ನ್ಯಾಯಾಲಯ ಕರೆತನ್ನಿ ಅಂದ್ರೆ ಕರೆದುಕೊಂಡು ಬರ್ತೀನಿ. ಸೆಕ್ಯೂರಿಟಿ ಸಿದ್ದತೆಯಾದ ತಕ್ಷಣ ಅನುಮತಿ ಕೊಡಬಹುದು. ಯುವತಿ ಇರೋ ಜಾಗದಲ್ಲಿ ಈಗಾಗಲೇ ಭದ್ರತೆ ಒದಗಿಸಲಾಗಿದೆ. ನ್ಯಾಯಾಲಯ ಅನುಮತಿ ಕೊಟ್ಟ ತಕ್ಷಣ ಕರೆದುಕೊಂಡು ಬರ್ತೀನಿ. ಕಳೆದ 28 ದಿನಗಳಿಂದ ಆಕೆ ಒತ್ತಡದಲ್ಲಿದ್ದರು. ಅವರ ಆರೋಗ್ಯ ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ. ಸಂತ್ರಸ್ತೆ ಕೋರ್ಟ್​ನಿಂದ ನಾಲ್ಕು ಕಿಮೀ ದೂರದಲ್ಲಿದ್ದಾಳೆ. ಐದು ಕಾರಿನಲ್ಲಿ ಯುವತಿಯ ಜತೆ ವಕೀಲರ ತಂಡ ಆಗಮಿಸುತ್ತಿದೆ ಎಂಬ ಮಾಹಿತಿಗಳೂ ದೊರೆತಿವೆ.

ಇದನ್ನೂ ಓದಿ: ಮೊದಲು ಕೋರ್ಟ್​ನಲ್ಲಿ ಸಿಡಿ ಯುವತಿಯ ಹೇಳಿಕೆ ದಾಖಲಿಸಲು ಜಡ್ಜ್ ಆದೇಶ

ಕೋರ್ಟ್​ಗೆ ಸಿಡಿ ಲೇಡಿ ಹಾಜರ್​ ಸಾಧ್ಯತೆ! ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ

Published On - 1:09 pm, Tue, 30 March 21

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ