ಪೊಲೀಸ್ ತಪಾಸಣೆ ವೇಳೆ ಗೂಡ್ಸ್ ಗಾಡಿ ಡಿಕ್ಕಿ; ತಾಯಿಯ ಎದುರೇ ಯುವಕನ ಸಾವು: ಪೊಲೀಸ್ ಚೆಕ್ ಪಾಯಿಂಟ್ ಧ್ವಂಸ
uppinangady police station: ಸವಾರ ಹ್ಯಾರಿಸ್ ತಮ್ಮ ತಾಯಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಡೆದಿದ್ದಾರೆ. ಈ ವೇಳೆ ದಾಖಲಾತಿ ತೆಗೆದುಕೊಂಡು ರಸ್ತೆ ದಾಟುವ ವೇಳೆ ಟಾಟಾ ಏಸ್ ಗೂಡ್ಸ್ ವಾಹನ ಡಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವಗೀಡಾಗಿದ್ದಾನೆ.
ಮಂಗಳೂರು: ಪೊಲೀಸರ ವಾಹನ ತಪಾಸಣೆ ವೇಳೆ ಗೂಡ್ಸ್ ಗಾಡಿ ಡಿಕ್ಕಿಯಾಗಿ ಯುವಕ ಮೃತಪಟ್ಟ ಹಿನ್ನೆಲೆ ಆಕ್ರೋಶಗೊಂಡ ಸ್ಥಳೀಯರು ಪೊಲೀಸ್ ಚೆಕ್ ಪಾಯಿಂಟ್ ಒಂದನ್ನು ಧ್ವಂಸಗೊಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿಯ ಆತೂರು ಬಳಿ ಘಟನೆ ನಡೆದಿದೆ. ಮೃತ ಸವಾರನನ್ನು ಆತೂರು ಬೈಲು ನಿವಾಸಿ ಹ್ಯಾರಿಸ್ (33) ಎಂದು ಗುರುತಿಸಲಾಗಿದೆ.
ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಸವಾರ ಹ್ಯಾರಿಸ್ ತಮ್ಮ ತಾಯಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಡೆದಿದ್ದಾರೆ. ಈ ವೇಳೆ ದಾಖಲಾತಿ ತೆಗೆದುಕೊಂಡು ರಸ್ತೆ ದಾಟುವ ವೇಳೆ ಟಾಟಾ ಏಸ್ ಗೂಡ್ಸ್ ವಾಹನ ಡಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವಗೀಡಾಗಿದ್ದಾನೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
(while Police checking vehicles youth killed in road accident in uppinangady police station limits)
Gujarat Road Accident: ಗುಜರಾತ್ ಭೀಕರ ಅಪಘಾತ; ಮಕ್ಕಳು ಸೇರಿ ಒಂದೇ ಕುಟುಂಬದ 10 ಮಂದಿ ದುರ್ಮರಣ