ಕರ್ನಾಟಕದಲ್ಲಿ ಮೊದಲ ಬಾರಿಗೆ ವೈಟ್ ಫಂಗಸ್ ಪತ್ತೆ? ಆರೋಗ್ಯ ಅಧಿಕಾರಿಗಳಿಂದ ಸ್ಪಷ್ಟನೆ ಬಾಕಿ

ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ 6 ವೈಟ್ ಫಂಗಸ್‌ ಕೇಸ್ ಪತ್ತೆಯಾಗಿರುವ ಬಗ್ಗೆ ರಾಯಚೂರಿನ ಖಾಸಗಿ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿರುವುದಾಗಿ ಟಿವಿ9ಗೆ ರಾಯಚೂರು ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಹೇಳಿಕೆ ನೀಡಿದ್ದಾರೆ.

ಕರ್ನಾಟಕದಲ್ಲಿ ಮೊದಲ ಬಾರಿಗೆ ವೈಟ್ ಫಂಗಸ್ ಪತ್ತೆ? ಆರೋಗ್ಯ ಅಧಿಕಾರಿಗಳಿಂದ ಸ್ಪಷ್ಟನೆ ಬಾಕಿ
ವೈಟ್​ ಫಂಗಸ್
Follow us
TV9 Web
| Updated By: ganapathi bhat

Updated on:Aug 21, 2021 | 10:03 AM

ರಾಯಚೂರು: ರಾಜ್ಯದಲ್ಲಿ ಮೊದಲ ಬಾರಿಗೆ ವೈಟ್ ಫಂಗಸ್ ಪ್ರಕರಣ ಪತ್ತೆಯಾಗಿದೆ. ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ 6 ಪ್ರಕರಣಗಳು ಪತ್ತೆಯಾಗಿದೆ. ಖಾಸಗಿ ಆಸ್ಪತ್ರೆಯೊಂದರಲ್ಲೇ 6 ಜನರಲ್ಲಿ ವೈಟ್ ಫಂಗಸ್‌ ಕಾಣಿಸಿಕೊಂಡಿದೆ. ಕೊವಿಡ್‌ನಿಂದ ಗುಣಮುಖರಾದ 6 ಜನರಲ್ಲಿ ವೈಟ್ ಫಂಗಸ್‌ ಕಾಣಿಸಿದೆ. ರಾಯಚೂರಿನ ಖಾಸಗಿ ಆಸ್ಪತ್ರೆ ವೈದ್ಯ ಮಂಜುನಾಥ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ವೈಟ್ ಫಂಗಸ್‌ನಿಂದ ಸೋಂಕಿತರು ಆತಂಕಪಡಬೇಕಾಗಿಲ್ಲ. 14 ದಿನ ಔಷಧ ನೀಡಿದ್ರೆ ಸೋಂಕಿತರು ಗುಣಮುಖರಾಗ್ತಾರೆ. ಅನ್ನನಾಳಕ್ಕೆ ತೊಂದರೆ ನೀಡುವ ಈ ಸೋಂಕು ಜೀವ ಮಾರಕವಲ್ಲ. ವೈಟ್ ಫಂಗಸ್ ರಕ್ತಕ್ಕೆ ಸೇರಿದ್ರೆ ಮಾತ್ರ ಪ್ರಾಣಕ್ಕೆ ಅಪಾಯ. 100 ಜನರಿಗೆ ಸ್ಟಿರಾಯ್ಡ್‌ ನೀಡಿದ್ರೆ ಒಬ್ಬರಲ್ಲಿ ವೈಟ್ ಫಂಗಸ್ ಕಾಣಿಸಿಕೊಳ್ಳಬಹುದು. ವೈಟ್ ಫಂಗಸ್‌ ಸೋಂಕಿಗೆ ಜನರು ಹೆದರುವ ಅಗತ್ಯವಿಲ್ಲ ಎಂದು ರಾಯಚೂರಿನ ಖಾಸಗಿ ಆಸ್ಪತ್ರೆ ವೈದ್ಯ ಗ್ಯಾಸ್ಟ್ರೋ, ಲಿವರ್ ಹಾಗು ಎಂಡೋಸ್ಕೋಪಿ ತಜ್ಞ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ 6 ವೈಟ್ ಫಂಗಸ್‌ ಕೇಸ್ ಪತ್ತೆಯಾಗಿರುವ ಬಗ್ಗೆ ರಾಯಚೂರಿನ ಖಾಸಗಿ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿರುವುದಾಗಿ ಟಿವಿ9ಗೆ ರಾಯಚೂರು ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಹೇಳಿಕೆ ನೀಡಿದ್ದಾರೆ. ವೈಟ್ ಫಂಗಸ್‌ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಸೂಚಿಸಿದ್ದೇನೆ. ಸಂಜೆಯೊಳಗೆ ಈ ಬಗ್ಗೆ ಡಿಹೆಚ್ಒ ಮಾಹಿತಿ ನೀಡುತ್ತಾರೆ. ಆ ಬಳಿಕ ಅಧಿಕೃತವಾಗಿ ಸ್ಪಷ್ಟನೆ ನೀಡುತ್ತೇವೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಹೇಳಿದ್ದಾರೆ.

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ 78 ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 78 ಬ್ಲ್ಯಾಕ್ ಫಂಗಸ್​ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಮಾಹಿತಿ ನೀಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ 77 ಹಾಗೂ ಹೊರ ರಾಜ್ಯದ ಒಬ್ಬರಿಗೆ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಧಾರವಾಡ ಜಿಲ್ಲೆಯ18 ಜನರು, ಬೆಳಗಾವಿ ಜಿಲ್ಲೆಯ 16 ಮಂದಿ, ಬಾಗಲಕೋಟೆ 16, ಗದಗ 5, ಕೊಪ್ಪಳ 5, ರಾಯಚೂರು 4, ಹಾವೇರಿ 4, ವಿಜಯಪುರ 4, ಬಳ್ಳಾರಿ 2, ಉತ್ತರ ಕನ್ನಡದ 1, ತುಮಕೂರು, ಚಿತ್ರದುರ್ಗ ಜಿಲ್ಲೆಯ ತಲಾ ಒಬ್ಬರಿಗೆ ಕಪ್ಪು ಶಿಲೀಂಧ್ರ ಪತ್ತೆಯಾಗಿದೆ.

ಕಪ್ಪು ಶಿಲೀಂಧ್ರ ಸೋಂಕಿತರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ.

ಯಾದಗಿರಿ: ಇಬ್ಬರಿಗೆ ಬ್ಲ್ಯಾಕ್ ಫಂಗಸ್ ಶಂಕೆ  ಯಾದಗಿರಿ ಜಿಲ್ಲೆಯಲ್ಲಿ ಇಬ್ಬರಿಗೆ ಬ್ಲ್ಯಾಕ್​ ಫಂಗಸ್​ ಶಂಕೆ ವ್ಯಕ್ತವಾಗಿದೆ. ಬ್ಲ್ಯಾಕ್​ ಫಂಗಸ್ ಸೋಂಕು ಶಂಕೆ ಹಿನ್ನೆಲೆ ಸೋಂಕಿತರನ್ನು ಹುಬ್ಬಳ್ಳಿಗೆ ಸ್ಥಳಾಂತರಿಸಲಾಗಿದೆ. ಶಂಕಿತರನ್ನು ಅಧಿಕಾರಿಗಳು ಹುಬ್ಬಳ್ಳಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಶಂಕಿತರ ಲ್ಯಾಬ್​​ ವರದಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ. ಈ ಬಗ್ಗೆ ಟಿವಿ9ಗೆ ಯಾದಗಿರಿ ಡಿಹೆಚ್​ಒ ಇಂದುಮತಿ ಕಾಮಶೆಟ್ಟಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Steroids in Covid: ಸ್ಟಿರಾಯ್ಡ್ ಎಂದರೇನು? ಕೊರೊನಾ ಸೋಂಕು ಚಿಕಿತ್ಸೆಯಲ್ಲಿ ಈ ಔಷಧವನ್ನು ಹೇಗೆ ಬಳಸಲಾಗುತ್ತದೆ?

Corona Vaccine: ಕೊರೊನಾ ಲಸಿಕೆಯನ್ನು ಕೈಗೆ ಏಕೆ ನೀಡಲಾಗುತ್ತದೆ? ಸೊಂಟಕ್ಕೆ ಏಕಿಲ್ಲ? ಇಲ್ಲಿದೆ ಸಂಪೂರ್ಣ ವಿವರ

Published On - 5:51 pm, Sat, 22 May 21