ಬಿಎಸ್​​ವೈ ವಿರುದ್ಧ ಪ್ರಾಸಿಕ್ಯೂಷನ್​ ಕೊಡಿಸಿದ್ದು ಯಾರು? ಈಗ ಸಿದ್ದರಾಮಯ್ಯ ಭಯಗೊಂಡಿದ್ದಾರೆ: ಶೋಭಾ ಕಿಡಿ

ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನೋಟಿಸ್​ ಹಿಂಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟದಲ್ಲಿ ಇಂದು ನಿರ್ಣಯ ಕೈಗೊಳ್ಳಲಾಗಿದೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯಪಾಲರ ನೊಟೀಸ್​ಗೆ ಸಿಎಂ ಸಿದ್ದರಾಮಯ್ಯ ಭಯಗೊಂಡಿದ್ದಾರೆ. ಯಡಿಯೂರಪ್ಪ ವಿರುದ್ದ ಪ್ರಾಸಿಕ್ಯೂಷನ್​ಗೆ ಕೊಡಿಸಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ.

ಬಿಎಸ್​​ವೈ ವಿರುದ್ಧ ಪ್ರಾಸಿಕ್ಯೂಷನ್​ ಕೊಡಿಸಿದ್ದು ಯಾರು? ಈಗ ಸಿದ್ದರಾಮಯ್ಯ ಭಯಗೊಂಡಿದ್ದಾರೆ: ಶೋಭಾ ಕಿಡಿ
ಬಿಎಸ್​​ವೈ ವಿರುದ್ಧ ಪ್ರಾಸಿಕ್ಯೂಷನ್​ ಕೊಡಿಸಿದ್ದು ಯಾರು? ಈಗ ಸಿದ್ದರಾಮಯ್ಯ ಭಯಗೊಂಡಿದ್ದಾರೆ: ಶೋಭಾ ಕಿಡಿ
Edited By:

Updated on: Aug 01, 2024 | 4:03 PM

ಬೆಂಗಳೂರು/ದೆಹಲಿ, ಆಗಸ್ಟ್​ 01: ಬಿಎಸ್​ ಯಡಿಯೂರಪ್ಪ (Yediyurappa) ವಿರುದ್ದ ಪ್ರಾಸಿಕ್ಯೂಷನ್​ಗೆ ಕೊಡಿಸಿದ್ದು ಯಾರು? ರಾಜ್ಯಪಾಲರ ನೊಟೀಸ್​​ಗೆ ಸಿಎಂ ಸಿದ್ದರಾಮಯ್ಯ (Siddaramaiah) ಭಯಗೊಂಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೆ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಂದ ಯಡಿಯೂರಪ್ಪಗೆ ನೊಟೀಸ್ ಕೊಡಿಸಿತ್ತು. ಆದ್ದರಿಂದ ಅವರು ಸಾಕಷ್ಟು ಅನುಭವಿಸಿದ್ದರು ಎಂದು ಹೇಳಿದ್ದಾರೆ.

ಇಂದು ಸಂಪುಟ ಸಭೆಯಲ್ಲಿ ಗವರ್ನರ್ ವಿರುದ್ಧ ನಿರ್ಣಯ ತೆಗೆದುಕೊಂಡಿದ್ದಾರೆ. ಕಾನೂನಿನ ವಿರುದ್ಧ, ಸಂವಿಧಾನದ ವಿರುದ್ದ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅಪರಾಧಿ ಸ್ಥಾನದಲ್ಲಿದ್ದಾರೆ

ನೀವು ತಪ್ಪು ಮಾಡಿಲ್ಲ ಅಂದರೆ ಯಾಕೆ ಹೆದರುತ್ತಿದ್ದೀರಿ. ನೀವು ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ. ನಿರಪರಾಧಿ ಎಂದಾದರೆ ಮತ್ತೆ ಅಧಿಕಾರಕ್ಕೆ ಹಿಡಿಯಿರಿ. ಆದರೆ ರಾಜ್ಯಪಾಲರ ನೊಟೀಸ್​ಗೆ ನೀವು ಉತ್ತರಿಸಬೇಕು. ಸಿದ್ದರಾಮಯ್ಯ ಅಪರಾಧಿ ಸ್ಥಾನದಲ್ಲಿದ್ದಾರೆ, ರಾಜೀನಾಮೆ ನೀಡಬೇಕು. ರಾಜ್ಯಪಾಲರ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟ ಮುಡಾ ಹಗರಣ: ಮತ್ತೆ ವರದಿ ಕೇಳಿದ ರಾಜ್ಯಪಾಲ

ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲಾಗಿರುವುದಿರಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಮತ್ತೊಮ್ಮೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿನ್ನೆ ವರದಿ ಕೇಳಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಮುಂಚೆ ಕೂಡ ರಾಜ್ಯಪಾಲರಿಗೆ ಹಗರಣದ ವರದಿ ನೀಡಲಾಗಿತ್ತು.

ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಲು ರಾಜ್ಯಪಾಲರಿಗೆ ಅಧಿಕಾರ ಇದ್ಯಾ? ಕಾನೂನು ಏನು ಹೇಳುತ್ತೆ?

ಇನ್ನು ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನೋಟಿಸ್​ ಹಿಂಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟದಲ್ಲಿ ಇಂದು ನಿರ್ಣಯ ಕೈಗೊಳ್ಳಲಾಗಿದೆ. ಜೊತೆಗೆ ಕಾನೂನು ಹೋರಾಟ ನಡೆಸಲು ಸಹ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಬಿಜೆಪಿ ಪಾದಯಾತ್ರೆ ಮಾಡೇ ಮಾಡುತ್ತೇವೆ

ವಾಲ್ಮೀಕಿ, ಮುಡಾ ಹಗರಣ ಖಂಡಿಸಿ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಪಾದಯಾತ್ರೆ ಮಾಡೇ ಮಾಡುತ್ತೇವೆ. ಜನರನ್ನು ಬರದೆ ಇರಲು ತಡೆಯಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಒಬ್ಬರಿರಬಹುದು ಅಥವಾ ಇಬ್ಬರಿರಬಹುದು ಪಾದಯಾತ್ರೆ ಮಾಡುತ್ತೇವೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us