ಪ್ರವೀದ್ ಸೂದ್ ಈಗ ಸಿಬಿಐ ಮುಖ್ಯಸ್ಥ: ಈ ನಾಲ್ವರಲ್ಲಿ ಯಾರಾಗಲಿದ್ದಾರೆ ಕರ್ನಾಟಕದ ಪೊಲೀಸ್ ಮಹಾ ನಿರ್ದೇಶಕ?

ಕರ್ನಾಟಕ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾಗುವ ಸ್ಥಾನಕ್ಕೆ ನಾಲ್ವರು ಹಿರಿಯ ಐಪಿಎಸ್‌ ಅಧಿಕಾರಿಗಳು ರೇಸ್‌ನಲ್ಲಿದ್ದಾರೆ. ಯಾರ್ಯಾರು ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಪ್ರವೀದ್ ಸೂದ್ ಈಗ ಸಿಬಿಐ ಮುಖ್ಯಸ್ಥ: ಈ ನಾಲ್ವರಲ್ಲಿ ಯಾರಾಗಲಿದ್ದಾರೆ ಕರ್ನಾಟಕದ ಪೊಲೀಸ್ ಮಹಾ ನಿರ್ದೇಶಕ?
ಪ್ರವೀಣ್‌ ಸೂದ್‌, ಅಲೋಕ್ ಮೋಹನ್
Follow us
ರಮೇಶ್ ಬಿ. ಜವಳಗೇರಾ
|

Updated on: May 15, 2023 | 12:34 PM

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ (Praveen Sood) ಅವರನ್ನು ಸಿಬಿಐನ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಹಾಲಿ ಸಿಬಿಐ(CBI) ನಿರ್ದೇಶಕರಾಗಿರುವ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಅಧಿಕಾರಾವಧಿ ಇದೇ ಮೇ. 25 ರಂದು ಮುಗಿಯಲಿದೆ. ಈ ಹಿನ್ನೆಲೆಯಲ್ಲಿ 1986ನೇ ಬ್ಯಾಚ್‌ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಸಿಬಿಐ ಮುಖ್ಯಸ್ಥರನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿರುವ ಪ್ರವೀಣ್ ಸೂದ್ ಅವರ ಅಧಿಕಾರಾವಧಿ ಇನ್ನೂ ಒಂದು ವರ್ಷ ಇತ್ತು. ಈಗ ಅವರು ಸಿಬಿಐ ಮುಖ್ಯಸ್ಥರಾಗಿ ನೇಮಕಗೊಂಡಿದ್ದು, ರಾಜ್ಯಕ್ಕೆ ಹೊಸ ಪೊಲೀಸ್ ಮಹಾ ನಿರ್ದೇಶಕರ(Karnataka’s Director General of Police (DGP) ನೇಮಕವಾಗಬೇಕಿದೆ. ಹಾಗಾದ್ರೆ, ಹೊಸ ಪೊಲೀಸ್ ಮಹಾ ನಿರ್ದೇಶಕರ ಸ್ಥಾನಕ್ಕೆ ನಾಲ್ವರು ಹಿರಿಯ ಐಪಿಎಸ್‌ ಅಧಿಕಾರಿಗಳು ರೇಸ್‌ನಲ್ಲಿದ್ದಾರೆ. ಯಾರ್ಯಾರು? ಇಲ್ಲಿದೆ ವಿವರ.

ಇದನ್ನೂ ಓದಿ: Praveen Sood: ಸಿಬಿಐನ ನೂತನ ಸಾರಥಿ ಪ್ರವೀಣ್ ಸೂದ್ ಯಾರು? ಡಿಕೆ ಶಿವಕುಮಾರ್​ ಕಿರಿಕ್ ಏನು?

ಕರ್ನಾಟಕ ಡಿಜಿ-ಐಜಿ ಹುದ್ದೆಗೆ ನಾಲ್ವರು ಹಿರಿಯ ಐಪಿಎಸ್‌ ಅಧಿಕಾರಿಗಳು ರೇಸ್‌ನಲ್ಲಿದ್ದಾರೆ. ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ. ಅಲೋಕ್‌ ಮೋಹನ್‌, ತರಬೇತಿ ವಿಭಾಗದ ಡಿಜಿಪಿ ಡಾ.ಪಿ. ರವೀಂದ್ರನಾಥ್‌, ನೇಮಕಾತಿ ವಿಭಾಗದ ಡಿಜಿಪಿ ಕಮಲ್‌ಪಂತ್‌, ನಗರ ಪೊಲೀಸ್‌ ಆಯುಕ್ತ ಸಿ.ಎಚ್‌. ಪ್ರತಾಪ್‌ರೆಡ್ಡಿ ಹೆಸರು ಕೇಳಿಬಂದಿವೆ. ಪ್ರವೀಣ್‌ ಸೂದ್‌ ಮೇ 25ರೊಳಗೆ ಸಿಬಿಐ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ನಡುವಣ ಅವಧಿಯಲ್ಲಿಯೇ ನೂತನ ಸರಕಾರ ಸೂದ್‌ ಅವರ ಸ್ಥಾನಕ್ಕೆ ಮತ್ತೊಬ್ಬ ಅಧಿಕಾರಿಯನ್ನು ನೇಮಕಗೊಳಿಸಬೇಕಿದೆ. ಹೀಗಾಗಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಯಾರನ್ನು ನೇಮಕ ಮಾಡುತ್ತೆ ಎನ್ನುವುದು ಸದ್ಯದ ಕುತೂಹಲ.

ಮುಂಚೂಣಿಯಲ್ಲಿರು ಡಾ. ಅಲೋಕ್‌ ಮೋಹನ್‌ ಹಿನ್ನೆಲೆ

ಸೇವಾ ಜೇಷ್ಠತೆ ಆಧಾರದಲ್ಲಿ ಡಾ. ಅಲೋಕ್‌ ಮೋಹನ್‌ ಅವರನ್ನೇ ಸರಕಾರ ಡಿಜಿ-ಐಜಿ ಹುದ್ದೆಗೆ ಪರಿಗಣಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಅವರ ನಂತರದ ಸ್ಥಾನದಲ್ಲಿ ರವೀಂದ್ರನಾಥ್‌, ಕಮಲ್‌ಪಂತ್‌, ಪ್ರತಾಪ್‌ರೆಡ್ಡಿ ಇದ್ದಾರೆ. ನಾಲ್ವರು ಅಧಿಕಾರಿಗಳ ಸೇವಾ ಜೇಷ್ಠತೆ, ಕಾರ್ಯವೈಖರಿ, ಸೇವಾ ಅನುಭವ ಆಧರಿಸಿ ಒಬ್ಬರ ಹೆಸರನ್ನು ನೂತನ ಸರ್ಕಾರ ಫೈನಲ್ ಮಾಡಲಿದೆ. ಇನ್ನು ಪ್ರಬಲವಾಗಿ ಕೇಳಿ ಬರುತ್ತಿರುವ ಡಾ. ಅಲೋಕ್‌ ಮೋಹನ್‌ ಯಾರು? ಅವರ ಹಿನ್ನೆಲೆ ಏನು ಎನ್ನುವುದನ್ನು ನೋಡುವುದಾದರೆ, ಬಿಹಾರ ಮೂಲದ ಡಾ. ಅಲೋಕ್‌ ಮೋಹನ್‌, 1987ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ ಐಪಿಎಸ್‌ ಅಧಿಕಾರಿ. 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿರುವ ಅವರು, ಹಾಲಿ ಅಗ್ನಿಶಾಮಕದಳ ಹಾಗೂ ತುರ್ತು ಸೇವೆಗಳ ಡಿಜಿಪಿಯಾಗಿದ್ದಾರೆ. ಈ ಹಿಂದೆ ಕಾರಾಗೃಹ ಇಲಾಖೆ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಸೇವಾ ಜೇಷ್ಠತೆ ಆಧಾರದಲ್ಲಿ ಡಿಜಿ-ಐಜಿ ಹುದ್ದೆಯ ಮೊದಲ ಆಯ್ಕೆಯಾಗಿದ್ದಾರೆ. ಇನ್ನು 2025ರ ಏಪ್ರಿಲ್‌ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ.

ಡಾ.ಪಿ. ರವೀಂದ್ರನಾಥ್‌ ಹಿನ್ನೆಲೆ

ಆಂಧ್ರ ಮೂಲದ ಡಾ.ಪಿ. ರವೀಂದ್ರನಾಥ್‌, 1990ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ. 33 ವರ್ಷಗಳ ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಹಾಲಿ ತರಬೇತಿ ವಿಭಾಗದ ಡಿಜಿಪಿಯಾಗಿದ್ದಾರೆ. ಈ ವರ್ಷ ಸೆಪ್ಟೆಂಬರ್‌ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದು, ಅಲೋಕ್‌ ಮೋಹನ್‌ ನಂತರದ ಸ್ಥಾನದಲ್ಲಿ ಡಿಜಿ-ಐಜಿ ಹುದ್ದೆಯ ರೇಸ್‌ನಲ್ಲಿದ್ದಾರೆ. ಸದ್ಯ ರವೀಂದ್ರನಾಥ್ ಅವರು ಎಡಿಜಿಪಿ ತರಬೇತಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ರೇಸ್​ನಲ್ಲಿ ಕಮಲ್‌ ಪಂಥ್‌

ಇನ್ನು ಈ ಹಿಂದೆ ನಗರ ಪೊಲೀಸ್‌ ಆಯುಕ್ತರಾಗಿದ್ದ ಕಮಲ್‌ ಪಂಥ್‌ ಹಾಗೂ ಹಾಲಿ ನಗರ ಪೊಲೀಸ್‌ ಆಯುಕ್ತ ಸಿ.ಎಚ್‌. ಪ್ರತಾಪ್‌ರೆಡ್ಡಿ ಕೂಡ ಡಿಜಿ-ಐಜಿ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ. 2020ರಲ್ಲಿ ಭಾಸ್ಕರ್‌ ರಾವ್‌ ಅವರನ್ನು ವರ್ಗಾವಣೆ ಮಾಡಿ ಗುಪ್ತಚರ ಇಲಾಖೆ ಎಡಿಜಿಪಿಯಾಗಿದ್ದ 1990ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿಯಾಗಿರುವ ಕಮಲ್​ ಪಂಥ್​ ಅವರನ್ನು ಬೆಂಗಳೂರು ನಗರ ಪೊಲೀಸ್‌ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು. ಸದ್ಯ ಕಮಪ್ ಪಂಥ್ ಎಡಿಜಿಪಿ ಸಿಐಡಿ ನೇಮಕಾತಿ ವಿಭಾಗದಲ್ಲಿದ್ದಾರೆ.

ಒಟ್ಟಿನಲ್ಲಿ ಈ ನಾಲ್ವರಲ್ಲಿ ಯಾರು ಕರ್ನಾಟಕ ಮಹಾ ಪೊಲೀಸ್​ ನಿರ್ದೇಶಕರಾಗಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದ್ದು, ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದ ಬಳಿಕ ಯಾರನ್ನು ನೇಮಕ ಮಾಡಿಕೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ