ಮಹಾರಾಷ್ಟ್ರ, ಕರ್ನಾಟಕ ಗಡಿ ವಿವಾದ ಗಲಾಟೆ ಮಧ್ಯೆ ಗಡಿಭಾಗದ ಕನ್ನಡ ಶಾಲೆಗಳ ಪರಿಸ್ಥಿತಿ ಕೇಳುವವರ‍್ಯಾರು?

Kannada Schools: ನೆರೆಯ ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದಲ್ಲಿ ಕನ್ನಡ ಉಳಿಸಿ ಬೆಳೆಸಲು ಅಲ್ಲಿನ ಕನ್ನಡ ಮಾಧ್ಯಮ ಶಾಲೆಗಳು ಪ್ರಮುಖ ಪಾತ್ರ ವಹಿಸಿದೆ. ಇಂತಹ ಕನ್ನಡ ಶಾಲೆಗಳನ್ನು ಮುಚ್ಚಲು ಮಹಾರಾಷ್ಟ್ರ ಸರ್ಕಾರ ಇಲ್ಲದ ಕಿರುಕುಳವನ್ನು ಕನ್ನಡ ಮಾಧ್ಯಮ ಶಾಲೆಗಳಿಗೆ ನೀಡುತ್ತಲೇ ಬಂದಿವೆ.

ಮಹಾರಾಷ್ಟ್ರ, ಕರ್ನಾಟಕ ಗಡಿ ವಿವಾದ ಗಲಾಟೆ ಮಧ್ಯೆ ಗಡಿಭಾಗದ ಕನ್ನಡ ಶಾಲೆಗಳ ಪರಿಸ್ಥಿತಿ ಕೇಳುವವರ‍್ಯಾರು?
ಗಡಿಭಾಗದ ಕನ್ನಡ ಶಾಲೆ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 07, 2022 | 9:35 AM

ವಿಜಯಪುರ: ಮಹಾರಾಷ್ಟ್ರದಲ್ಲಿ ಕನ್ನಡಿಗರು ಹೆಚ್ಚಿರುವ ಪ್ರದೇಶದಲ್ಲಿ ಕನ್ನಡ ಉಳಿಸಿ ಬೆಳೆಸಲು ಅಲ್ಲಿನ ಕನ್ನಡ ಶಾಲೆಗಳು ಕಾರಣವಾಗಿದೆ. ಇಂತಹ ಕನ್ನಡ ಶಾಲೆಗಳನ್ನು ತನ್ನಿಂದ ತಾನೇ ಮುಚ್ಚಲು ಮಹಾರಾಷ್ಟ್ರದ ಸರ್ಕಾರ ದಶಕಗಳಿಂದಲೂ ಹುನ್ನಾರ ನಡೆಸಿಕೊಂಡು ಬಂದಿದೆ. ಹಲವಾರು ಹುನ್ನಾರಗಳ ಮಧ್ಯೆ ಕನ್ನಡ ಮಾಧ್ಯಮ ಶಾಲೆಗಳು ಗಡಿನಾಡ ಕನ್ನಡಿಗರ ಮಕ್ಕಳಿಗೆ ಕನ್ನಡ ಕಲಿಸುತ್ತಲೇ ಬಂದಿವೆ. ಅಂಕಿ ಅಂಶಗಳ ಪ್ರಕಾರ ಮಹಾರಾಷ್ಟ್ರದ ಸಾಂಗ್ಲಿ, ದಕ್ಷಿಣ ಸೋಲ್ಲಾಪುರ, ಸೋಲ್ಲಾಪುರ ಜಿಲ್ಲೆಗಳಲ್ಲಿ ಹೆಚ್ಚಿನ ಕನ್ನಡ ಶಾಲೆಗಳಿವೆ.

ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಗಳ ಹಾಗೂ ವಿದ್ಯಾರ್ಥಿಗಳ ಅಂಕಿ ಅಂಶ

ಮಹಾರಾಷ್ಟ್ರದ ಕಿರುಕುಳದ ಮಧ್ಯೆಯೇ ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯವರೆಗೆ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನಲ್ಲಿ 132 ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಿವೆ. 8,000 ವಿದ್ಯಾರ್ಥಿಗಳಿದ್ದಾರೆ. ಖಾಸಗಿ ಕನ್ನಡ ಮಾಧ್ಯಮ ಶಾಲೆಗಳು 37 ಇದ್ದು, 5000 ವಿದ್ಯಾರ್ಥಿಗಳಿದ್ದಾರೆ. ಸಾಂಗ್ಲಿ ಜಿಲ್ಲೆಯ ಮಿರಜ್ ತಾಲೂಕಿನಲ್ಲಿ 3 ಸರ್ಕಾರಿ ಕನ್ನಡ ಮಾದ್ಯಮ ಶಾಲೆಗಳಿದ್ದು 1200 ವಿದ್ಯಾರ್ಥಿಗಳಿದ್ಧಾರೆ. 2 ಖಾಸಗಿ ಕನ್ನಡ ಮಾದ್ಯಮ ಶಾಲೆಗಳಲ್ಲಿ 60 ವಿದ್ಯಾರ್ಥಿಗಳಿದ್ದಾರೆ. ಇನ್ನು ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟೆ ತಾಲೂಕಿನಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಸಂಖ್ಯೆ 37 ಇದ್ದು 6800 ವಿದ್ಯಾರ್ಥಿಗಳಿದ್ದಾರೆ. ಇನ್ನು ಖಾಸಗಿ ಕನ್ನಡ ಮಾಧ್ಯಮ ಶಾಲೆಗಳು 30 ಇದ್ದು 4500 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದಕ್ಷಿಣ ಸೋಲ್ಲಾಪುರ ಜಿಲ್ಲೆಯ ತಾಲೂಕಿನಲ್ಲಿ 11 ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಿದ್ದು 500 ವಿದ್ಯಾರ್ಥಿಗಳಿದ್ದಾರೆ. 6 ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿದ್ದು 1500 ವಿದ್ಯಾರ್ಥಿಗಳಿದ್ದಾರೆ. ಸೋಲ್ಲಾಪುರ ನಗರದಲ್ಲಿ 3 ಸರ್ಕಾರಿ ಕನ್ನಡ ಮಾದ್ಯಮ ಶಾಲೆಗಳಲ್ಲಿ 200 ವಿದ್ಯಾರ್ಥಿಗಳಿದ್ದಾರೆ. 8 ಖಾಸಗಿ ಕನ್ನಡ ಮಾದ್ಯಮ ಶಾಲೆಗಳಿದ್ದು ಅವುಗಳಲ್ಲಿ 1500 ವಿದ್ಯಾರ್ಥಿಗಳಿದ್ಧಾರೆ. 5 ಕನ್ನಡ ಮಾಧ್ಯಮ ಪ್ರೌಢ ಶಾಲೆಗಳಿದ್ದು 900 ವಿದ್ಯಾರ್ಥಿಗಳು ಅಡ್ಮಿಷನ್ ಆಗಿದ್ದಾರೆ.

ಗಡಿನಾಡ ಕನ್ನಡ ಶಾಲೆಗಳಿಗಿಲ್ಲ ಮೂಲಸೌರ್ಕಗಳು

ಗಡಿನಾಡ ಕನ್ನಡ ಶಾಲೆಗಳಿಗೆ ಮಹಾರಾಷ್ಟ್ರ ಸರ್ಕಾರ ಸೂಕ್ತ ಅನುದಾನ, ಮೂಲಭೂತ ಸೌಕರ್ಯ, ಶಿಕ್ಷಕರ ನೇಮಕ ಮಾಡುವುದಿಲ್ಲ. ಇತ್ತ ಕರ್ನಾಟಕ ಸರ್ಕಾರ ಗಡಿನಾಡ ಪ್ರಾಧಿಕಾರದಿಂದ ನೀಡುವ ಅಲ್ಪ ಅನುದಾನ ಕನ್ನಡ ಶಾಲೆಗಳನ್ನು ನಡೆಸಲು ಸಾಕಾಗುವುದಿಲ್ಲ. ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡುತ್ತಿಲ್ಲ. ಕರ್ನಾಟಕದಲ್ಲಿ ಉದ್ಯೋಗಕ್ಕಾಗಿ ನಾವು ಹೋರಾಟ ಮಾಡಬೇಕಿದೆ. ಕಾರಣ ಗಡಿನಾಡ ಕನ್ನಡಿಗರಿಗೆ ಕರ್ನಾಟಕ ಸರ್ಕಾರ ಶೇಕಡಾ 5 ರಷ್ಟು ಉದ್ಯೋಗ ಮೀಸಲಾತಿ ನೀಡಿದರೆ ಅನುಕೂಲವೆಂದು ಗಡಿನಾಡ ಕನ್ನಡಿಗರ ಮನವಿಯಾಗಿದೆ.

ಮಹಾರಾಷ್ಟ್ರದ ಗಡಿ ಭಾಗದ ಕನ್ನಡ ಶಾಲೆಗಳು ದುಸ್ಥಿತಿಯಲ್ಲಿವೆ. ಶಾಲಾ ಮೇಲ್ಛಾವಣಿ ಇಲ್ಲ. ಮೂಲಸೌರ್ಕಗಳ ಕೊರತೆಯಿಂದ ಶಾಲಾ ಆವರಣದ ಹೊರಗಡೆ ಕುಳಿತು ಪಾಠ ಕೇಳಬೇಕಾದ ಅನಿವಾರ್ಯತೆ ಗಡಿನಾಡಲ್ಲಿದೆ. ಇದರ ಹಿಂದೆ ಮಹಾರಾಷ್ಟ್ರ ಸರ್ಕಾರದ ಅಜೆಂಡಾ ಕೆಲಸ ಮಾಡುತ್ತಿದೆ. ಇಂತಹ ಉದಾಸೀನತೆಯ ಕಾರಣದಿಂದಲೇ ಅಲ್ಲಿಯ ಕನ್ನಡಿಗರು ಕರ್ನಾಟಕಕ್ಕೆ ಸೇರುವ ನಿರ್ಧಾರ ಮಾಡಿದ್ದಾರೆ. ಈ ನಿರ್ಧಾರದ ಬಿಸಿ ಮಹಾರಾಷ್ಟ್ರ ಸರ್ಕಾರಕ್ಕೆ ತಟ್ಟಿದ್ದು ಇದೀಗಾ ಗಡಿನಾಡ ಕನ್ನಡಿಗರ ಮನವೋಲಿಕೆಗೆ ಮುಂದಾಗಿ ಗಡನಾಡ ಕನ್ನಡಿಗರ ಬಳಿ ಸಚಿವರನ್ನು ಆಧಿಕಾರಿಗಳನ್ನು ಕಳುಹಿಸಿದೆ. ಆದರೆ ಗಡಿನಾಡ ಕನ್ನಡಿಗರು ಮಾತ್ರ ಬೇಡಿಕೆಗಳಪಟ್ಟಿಯಿಟ್ಟು ಎಲ್ಲಾ ಬೇಡಿಕೆ ಈಡೇರಿಸಿ ಇಲ್ಲವೇ ಕರ್ನಾಟಕಕ್ಕೆ ನಮ್ಮನ್ನು ಸೇರಿಸಿ ಎಂದು ಖಡಕ್ ಆಗಿ ಹೇಳಿದ್ದಾರೆ.

ಎನಿದು ಮಹಾಜನ್ ಆಯೋಗ?

ಮಹಾರಾಷ್ಟ್ರದ ಸಾಂಗ್ಲಿ, ದಕ್ಷಿಣ ಸೊಲ್ಲಾಪೂರ ಹಾಗೂ ಸೊಲ್ಲಾಪೂರ ಜಿಲ್ಲೆಗಳಲ್ಲಿ ಕನ್ನಡಿಗರ ಸಂಖ್ಯೆ ಹೆಚ್ಚಿದೆ. ಇಂದಿಗೂ ಅವರೆಲ್ಲರ ಮಾತೃಭಾಷೆ ಕನ್ನಡವೇ ಆಗಿದೆ. ಕಾರಣ ಈ ಭಾಷೆ ಗಡಿ ಜಲದ ಸಮಸ್ಯೆ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರದ ಒತ್ತಾಯದ ಮೇರೆಗೆ ಕೇಂದ್ರ ಸರ್ಕಾರ 1966 ಅಕ್ಟೋಬರ್ 15 ರಂದು ನಿವೃತ್ತ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಮೆಹರ್ ಚಂದ್ ಮಹಾಜನ್ ನೇತೃತ್ವದ ಆಯೋಗ ರಚನೆ ಮಾಡಿದರು. ಮಹಾಜನ್ ಆಯೋಗ ಕರ್ನಾಟಕ ಕೇರಳ ಮಹಾರಾಷ್ಟ್ರ ಗಡಿ ಭಾಗದ ಸಮಸ್ಯೆಯ ಕುರಿತು 1967 ರ ಅಗಷ್ಟ 25 ರಂದು ವರದಿ ಸಲ್ಲಿಸಿತ್ತು. ಆದರೆ ಕರ್ನಾಟಕ ಮಹಾರಾಷ್ಟ್ರದ ಗಡಿ ಭಾಗದ ಹಳ್ಳಿಗಳ ಕೊಡು ಕೊಳ್ಳುವಿಕೆಯಿದ್ದ ಮಹಾಜನ್ ಆಯೋಗದ ವರದಿ ಇನ್ನು ಜಾರಿಗೆ ಬಂದಿಲ್ಲಾ.

ಇದನ್ನೂ ಓದಿ:ಕರ್ನಾಟಕಕ್ಕೆ ಸೇರುತ್ತೇವೆ ಎಂದಿದ್ದ ಉಡುಗಿ ಗ್ರಾಮದ 17 ಕನ್ನಡಿಗರಿಗೆ ನೋಟಿಸ್ ನೀಡಿದ ಮಹಾರಾಷ್ಟ್ರ ಸರ್ಕಾರ! ಬೆಳಗಾವಿ ಗಡಿಯಲ್ಲಿ ಅಲರ್ಟ್

ಕನ್ನಡ ಪರ ಸಂಘಟನೆಗಳ ಹಾಗೂ ಗಡಿನಾಡ ಕನ್ನಡಿಗರ ಬೇಡಿಕೆಗಳು

ಇಂತಹ ಸಂಕಷ್ಟದಲ್ಲಿ ಗಡಿನಾಡಿನಲ್ಲಿ ಕನ್ನಡ ಮಾದ್ಯಮ ಶಾಲೆಗಳನ್ನು ನಡೆಸಲು ಹರಸಾಹಸ ಪಡಬೇಕಾದ ಅನಿವಾರ್ಯತೆ ಅಲ್ಲಿಯ ಕನ್ನಡಿಗರಿಗೆ ಇದೆ. ಗಡಿನಾಡ ಕನ್ನಡ ಶಾಲೆಗಳನ್ನು ಉಳಿಸಲು ಕರ್ನಾಟಕ ಸರ್ಕಾರ ಅನುದಾನ ಹೆಚ್ಚಳ ಮಾಡುವುದರ ಜೊತೆಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕೆಂಬ ಬೇಡಿಕೆ ಸಹಜವಾಗಿದೆ. ಇದರ ಜೊತೆಗೆ ಮಹಾರಾಷ್ಟ್ರ ಸರ್ಕಾರವೂ ಸಹ ಗಡಿನಾಡ ಕನ್ನಡ ಮಾಧ್ಯಮ ಶಾಲೆಗಳಿಗೆ ಸರಿಯಾದ ಅನುದಾನ. ಶಿಕ್ಷಕರ ನೇಮಕ, ಮೂಲಸೌಲಭ್ಯ ನೀಡುವುದರ ಜೊತೆಗೆ ಗಡಿನಾಡ ಕನ್ನಡಿಗರಿಗೆ ಉದ್ಯೋಗದಲ್ಲಿ 25 ಪ್ರತಿಶತದಷ್ಟೂ ಮೀಸಲಾತಿಯನ್ನು ನೀಡಬೇಕೆಂಬ ಒತ್ತಾಯ ಕರ್ನಾಟಕದ ಕನ್ನಡ ಪರ ಸಂಘಟನೆಗಳ ಹಾಗೂ ಗಡಿನಾಡ ಕನ್ನಡಿಗರ ಒತ್ತಯವಾಗಿದೆ.

ವರದಿ: ಅಶೋಕ ಯಡಳ್ಳಿ ಟಿವಿ9 ವಿಜಯಪುರ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ