ಯಾವುದೇ ಕಾರಣಕ್ಕೂ ಹೆಚ್ಚುವರಿ ಕಾವೇರಿ ನೀರು ಪಡೆಯಲು ತಮಿಳುನಾಡಿಗೆ ಅವಕಾಶ ನೀಡಲ್ಲ- ಮುಖ್ಯಮಂತ್ರಿ ಯಡಿಯೂರಪ್ಪ

ಯಾವುದೇ ಕಾರಣಕ್ಕೂ ಹೆಚ್ಚುವರಿ ಕಾವೇರಿ ನೀರು ಪಡೆಯಲು ತಮಿಳುನಾಡಿಗೆ ಅವಕಾಶ ನೀಡಲ್ಲ- ಮುಖ್ಯಮಂತ್ರಿ ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ

ಹೆಚ್ಚುವರಿ ಕಾವೇರಿ ನೀರು ಪಡೆಯಲು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಅವಕಾಶ ನೀಡಲ್ಲ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅವರು ಇಂತಹ ಹೇಳಿಕೆಗಳನ್ನು ಕೊಡುವುದರಿಂದ ಉಪಯೋಗವಿಲ್ಲ ಎಂದರು.

Ayesha Banu

| Edited By: sadhu srinath

Feb 22, 2021 | 12:49 PM


ಬೆಂಗಳೂರು: ಹೆಚ್ಚುವರಿ ಕಾವೇರಿ ನೀರನ್ನು ಪಡೆಯಲು ತಮಿಳುನಾಡು ಕಣ್ಣು ಹಾಕಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಕಾವೇರಿ ನೀರು ಪಡೆಯಲು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಅವಕಾಶ ನೀಡಲ್ಲ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅವರು ಇಂತಹ ಹೇಳಿಕೆಗಳನ್ನು ಕೊಡುವುದರಿಂದ ಉಪಯೋಗವಿಲ್ಲ. ಯಾವ ಕಾರಣಕ್ಕೂ ಮತ್ತೊಮ್ಮೆ ತಗೊಳ್ಳೋದು, ಕೊಡೋದಕ್ಕೆ ಅವಕಾಶ ಇಲ್ಲ. ನಾವು ಕೂಡ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತೇವೆ. ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಯೋಚನೆ ಮಾಡಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಕಾವೇರಿ ನದಿ ಜೋಡಣೆಗೆ ಶಂಕುಸ್ಥಾಪನೆ
ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರು ಫೆಬ್ರವರಿ 21ರಂದು ಕಾವೇರಿ ನದಿಗಳ ಜೋಡಣೆ ಮೊದಲ ಹಂತದ ಬೃಹತ್​ ಯೋಜನೆಗೆ ಚಾಲನೆ ನೀಡಿದ್ದಾರೆ. ಇದು 6,941 ಕೋಟಿ ರೂ. ವೆಚ್ಚದ ಯೋಜನೆಯಾಗಿದ್ದು, ಮೊದಲ ಹಂತದಲ್ಲಿ ವೆಲ್ಲಾರು, ವೈಗೈ, ಗುಂಡಾರು ಜೋಡಣೆಗಳನ್ನು ಮಾಡಲಾಗುವುದು. ಈ ಯೋಜನೆಗಿಂದು ವಿರಾಳಿಮಲೈ- ಕುಣ್ಣತ್ತೂರು ಬಳಿ ಸಿಎಂ ಪಳಿನಿಸ್ವಾಮಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಮಾರ್ಚ್​ 1ರಂದು ಪ್ರಧಾನಿ ನರೇಂದ್ರ ಮೋದಿ ಇನ್ನೊಮ್ಮೆ ಚಾಲನೆ ನೀಡಲಿದ್ದಾರೆ. ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿರುವ ಬೆನ್ನಲ್ಲೇ ಅಲ್ಲಿನ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಕಾವೇರಿ ನದಿ ನೀರಿನ ಬಗ್ಗೆ ಮತ್ತಷ್ಟು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಇನ್ನು ಮೊದಲಿನಿಂದಲೂ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಕಾವೇರಿ ವಿವಾದ ಇದ್ದು, ಸದ್ಯ ತಮಿಳುನಾಡು ಕೈಗೆತ್ತಿಕೊಂಡಿರುವ ನದಿ ಜೋಡಣೆಯಿಂದಲೂ ರಾಜ್ಯಕ್ಕೆ ಅನನುಕೂಲವಾಗಲಿದೆ ಎಂದು ಜಲತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಮೇಶ್​ ಜಾರಕಿಹೊಳಿ ನೇತೃತ್ವದಲ್ಲಿ ಸಭೆ
ಅತ್ತ ತಮಿಳುನಾಡು ಸಿಎಂ ಕಾವೇರಿ ನದಿ ಜೋಡಣೆಗಳ ಯೋಜನೆಗೆ ಶಂಕುಸ್ಥಾಪನೆ ಮಾಡುತ್ತಿದ್ದರೆ, ಅದರಿಂದ ರಾಜ್ಯಕ್ಕೆ ಆಗುವ ಅನಾನುಕೂಲದ ಬಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಜಲಸಂಪನ್ಮೂಲ ಇಲಾಖೆ ಸಚಿವ ರಮೇಶ್​ ಜಾರಕಿಹೊಳಿ ಸಭೆ ನಡೆಸಿದ್ದಾರೆ. ರಾಜ್ಯದ ವಕೀಲರ ತಂಡ, ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ. ಮುಂದೆ ಯಾವ ರೀತಿಯಲ್ಲಿ ಕಾನೂನು ಹೋರಾಟ ನಡೆಸಬೇಕು ಎಂಬ ಬಗ್ಗೆಯೂ ಚರ್ಚೆ ನಡೆಸಿದ್ದಾರೆ. ಹಾಗೇ, ಸೋಮವಾರ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್​ರನ್ನು ರಮೇಶ್​ ಜಾರಕಿಹೊಳಿ ಭೇಟಿಯಾಗಲಿದ್ದಾರೆ.

ಇದನ್ನೂ ಓದಿ: ಗೋದಾವರಿ-ಕಾವೇರಿ ನದಿ ಜೋಡಣೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಿ: ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ಪಳನಿಸ್ವಾಮಿ ಮನವಿ


Follow us on

Related Stories

Most Read Stories

Click on your DTH Provider to Add TV9 Kannada