ಬೆಳಗಾವಿಯ ಕಾಡಂಚಿನ ಗ್ರಾಮದಲ್ಲಿ ಅರ್ಧಕ್ಕರ್ಧ ಜನರಿಗೆ ಕೊರೊನಾ ಪಾಸಿಟಿವ್: ಇಡೀ ಊರನ್ನೇ ಸೀಲ್​ಡೌನ್ ಮಾಡಿದ ಅಧಿಕಾರಿಗಳು

ಆರೋಗ್ಯಾಧಿಕಾರಿಗಳು ಏಪ್ರಿಲ್ 10 ಮತ್ತು 11ರಂದು ಅಬನಾಳಿ ಗ್ರಾಮದ 350 ಜನರ ಪೈಕಿ 249 ಜನರ ತಪಾಸಣೆ ನಡೆಸಿ ಮೂಗು ಹಾಗೂ ಗಂಟಲು ದ್ರವದ ಮಾದರಿಯನ್ನು ತೆಗೆದು RT-PCR ಪರೀಕ್ಷೆಗೆ ಕಳುಹಿಸಿದ್ದಾರೆ. ನಿನ್ನೆ (ಏಪ್ರಿಲ್ 20) ವರದಿ ಲಭ್ಯವಾಗಿದ್ದು, ಸಂಗ್ರಹಿಸಿದ್ದ 249 ಮಾದರಿಗಳ ಪೈಕಿ 146 ಮಾದರಿಗಳು ಕೊವಿಡ್ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ.

ಬೆಳಗಾವಿಯ ಕಾಡಂಚಿನ ಗ್ರಾಮದಲ್ಲಿ ಅರ್ಧಕ್ಕರ್ಧ ಜನರಿಗೆ ಕೊರೊನಾ ಪಾಸಿಟಿವ್: ಇಡೀ ಊರನ್ನೇ ಸೀಲ್​ಡೌನ್ ಮಾಡಿದ ಅಧಿಕಾರಿಗಳು
ಪ್ರಾತಿನಿಧಿಕ ಚಿತ್ರ
Follow us
Skanda
| Updated By: preethi shettigar

Updated on: Apr 21, 2021 | 7:34 AM

ಬೆಳಗಾವಿ: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಹೆಚ್ಚಾಗಿದ್ದು, ಇಂದಿನಿಂದ ಮೇ.4ರ ತನಕ ಕೆಲ ಕಠಿಣ ನಿಯಮಗಳನ್ನು ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ನಡುವೆ ಕೆಲವೆಡೆ ಕಾರ್ಮಿಕರ ವಲಸೆ ಆರಂಭವಾಗಿದ್ದು, ಬೆಳಗಾವಿ ಜಿಲ್ಲೆಗೆ ಇದು ಮಾರಕವಾಗಿ ಪರಿಣಮಿಸುತ್ತಿದೆ. ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಾಡಂಚಿನಲ್ಲಿರುವ ಪುಟ್ಟ ಗ್ರಾಮವಾದ ಅಬನಾಳಿ ಎಂಬಲ್ಲಿ ಬರೋಬ್ಬರಿ 146 ಜನರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಇಡೀ ಗ್ರಾಮವನ್ನೇ ಸೀಲ್​ಡೌನ್ ಮಾಡಿದ್ದಾರೆ. ಮಹಾರಾಷ್ಟ್ರದಿಂದ ಸ್ವಗ್ರಾಮಕ್ಕೆ ಬರುತ್ತಿರುವ ಕಾರ್ಮಿಕರಿಂದಲೇ ಕೊರೊನಾ ವೇಗವಾಗಿ ಹಬ್ಬುತ್ತಿದೆ ಎನ್ನಲಾಗುತ್ತಿರುವುದರಿಂದ ಸೋಂಕು ನಿಯಂತ್ರಿಸಲು ಕಠಿಣ ಕ್ರಮಗಳ ಮೊರೆ ಹೋಗಿದ್ದಾರೆ.

ಅಬನಾಳಿ ಗ್ರಾಮದಲ್ಲಿ ಏಪ್ರಿಲ್ 6 ರಂದು ಹೋಳಿ ಹುಣ್ಣಿಮೆ ನಿಮಿತ್ತ ಸಾತೇರಿ ದೇವಿ ಜಾತ್ರೆ ನಡೆದಿತ್ತು. ಜಾತ್ರೆಯ ಅಂಗವಾಗಿ ನಾಟಕ ಪ್ರದರ್ಶನವನ್ನೂ ಹಮ್ಮಿಕೊಳ್ಳಲಾಗಿತ್ತು. ಊರ ಜಾತ್ರೆಯಾದ್ದರಿಂದ ಬೇರೆಡೆಗೆ ವಲಸೆ ಹೋಗಿದ್ದ ಕಾರ್ಮಿಕರು ಮರಳಿ ಊರಿಗೆ ಬಂದಿದ್ದಾರೆ. ಅದಾಗಿ ಮೂರು ದಿನಗಳ ಅಂತರದಲ್ಲಿ ಅಂದರೆ ಏಪ್ರಿಲ್ 9ರ ಸುಮಾರಿಗೆ ಅಬನಾಳಿ ಗ್ರಾಮದ ಕೆಲವರಲ್ಲಿ ಕೊರೊನಾ ಸೋಂಕಿನ ಗುಣಲಕ್ಷಣಗಳು ಕಾಣಿಸಿಕೊಂಡಿವೆ. ಇದಾದ ನಂತರ ಎಚ್ಚೆತ್ತ ಆರೋಗ್ಯಾಧಿಕಾರಿಗಳು ಏಪ್ರಿಲ್ 10 ಮತ್ತು 11 ರಂದು ಅಬನಾಳಿ ಗ್ರಾಮದ 350 ಜನರ ಪೈಕಿ 249 ಜನರ ತಪಾಸಣೆ ನಡೆಸಿ ಮೂಗು ಹಾಗೂ ಗಂಟಲು ದ್ರವದ ಮಾದರಿಯನ್ನು ತೆಗೆದು RT-PCR ಪರೀಕ್ಷೆಗೆ ಕಳುಹಿಸಿದ್ದಾರೆ.

ಕೊರೊನಾ ಪರೀಕ್ಷೆಗೆ ಸಂಬಂಧಿಸಿದಂತೆ ನಿನ್ನೆ (ಏಪ್ರಿಲ್ 20) ವರದಿ ಲಭ್ಯವಾಗಿದ್ದು, ಸಂಗ್ರಹಿಸಿದ್ದ 249 ಮಾದರಿಗಳ ಪೈಕಿ 146 ಮಾದರಿಗಳು ಕೊವಿಡ್ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಮೊದಲೇ ಪುಟ್ಟ ಗ್ರಾಮವಾಗಿರುವ ಅಬನಾಳಿಯೊಂದರಲ್ಲೇ ಹೀಗೆ ಸಾಲು ಸಾಲು ಪಾಸಿಟಿವ್ ಕಾಣಿಸಿಕೊಂಡಿದ್ದರಿಂದ ಕಂಗಾಲಾದ ಅಧಿಕಾರಿಗಳು ತಕ್ಷಣ ಗ್ರಾಮಕ್ಕೆ ಧಾವಿಸಿದ್ದಾರೆ. ಖಾನಾಪುರ ತಹಶಿಲ್ದಾರ್ ರೇಷ್ಮಾ ತಾಳಿಕೋಟಿ, ಟಿಹೆಚ್‌ಒ ಡಾ.ಸಂಜೀವ್ ನಾಂದ್ರೆ ಹಾಗೂ ಇನ್ನಿತರರು ಭೇಟಿ ನೀಡಿ ಸೋಂಕಿತರನ್ನು ಊರ ಹೊರಗೆ ಕರೆದು ಕೂರಿಸಿ ಮುಂಜಾಗ್ರತಾ ಕ್ರಮದ ಪಾಠ ಮಾಡಿದ್ದಾರೆ. ಬಳಿಕ ಗ್ರಾಮದ ಹೊರವಲಯದಲ್ಲಿ ಮರದ ಕೊಂಬೆಗಳನ್ನು ಹಾಕಿ ಇಡೀ ಗ್ರಾಮವನ್ನೇ ಸೀಲ್‌ಡೌನ್ ಮಾಡಿದ್ದಾರೆ.

(Whole Village Sealed Down as Half of the villagers tested positive for coronavirus in Belagavi)

ಇದನ್ನೂ ಓದಿ: Karnataka Weekend Curfew: ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ವೀಕೆಂಡ್​ ಕರ್ಫ್ಯೂ ಘೋಷಿಸಿದ ಸರ್ಕಾರ, ಶಾಲಾ-ಕಾಲೇಜುಗಳು ಕ್ಲೋಸ್​ 

ಕೊರೊನಾ ಮೂರನೇ ಬಾರಿಗೆ ರೂಪಾಂತರ; ಅಕ್ಟೋಬರ್​ನಲ್ಲೇ ಸುಳಿವಿದ್ದರೂ ಮೈಮರೆತುಬಿಟ್ಟಿತಾ ಭಾರತ?

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ