AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಕೃತಕ ಪನ್ನೀರ್ ಬ್ಯಾನ್ ಯಾಕೆ? ಏನಿದು ಅನಲಾಗ್ ಪನ್ನೀರ್? ಯಾವುದರಿಂದ ತಯಾರು ಮಾಡ್ತಾರೆ?

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ‘ಪನ್ನೀರ್’ ಹೆಸರಿನಲ್ಲಿ ಮಾರಾಟವಾಗುತ್ತಿರುವ ಅನಲಾಗ್ ಪನ್ನೀರ್ (Analogue Paneer) ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಹಾಗೂ ಮಾರಾಟಕ್ಕೆ ಒಂದು ವರ್ಷದ ಅವಧಿಗೆ ನಿಷೇಧ ಹೇರಿದೆ. ಹಾಗಾದ್ರೆ, ಈ ಅನಲಾಗ್ ಪನ್ನೀರ್ ಅಥವಾ ಕೃತಕ ಪನ್ನೀರ್ ಬ್ಯಾನ್ ಮಾಡಿದ್ಯಾಕೆ? ಕೃತಕ ಪನ್ನೀರ್ ಅನ್ನು ಯಾವುದರಿಂದ ಮಾಡುತ್ತಾರೆ ಎನ್ನುವ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ಕೃತಕ ಪನ್ನೀರ್ ಬ್ಯಾನ್ ಯಾಕೆ? ಏನಿದು ಅನಲಾಗ್ ಪನ್ನೀರ್? ಯಾವುದರಿಂದ ತಯಾರು ಮಾಡ್ತಾರೆ?
Panner
ವಿನಯ್​ ಕಾಶಪ್ಪನವರ್​
| Edited By: |

Updated on:Aug 22, 2026 | 3:36 PM

Share

ಬೆಂಗಳೂರು, (ಆಗಸ್ಟ್ 22): ಹಾಲಿನ ಕೊಬ್ಬಿನ ಬದಲಿಗೆ ಸಸ್ಯಜನ್ಯ ಎಣ್ಣೆ ಬಳಸಿ ತಯಾರಿಸುವ ‘ಅನಲಾಗ್ ಪನ್ನೀರ್’ (ಕೃತಕ ಪನ್ನೀರ್)  (Analogue Paneer)ಅನ್ನು ‘ಪನ್ನೀರ್’ ಹೆಸರಿನಲ್ಲಿ ಮಾರಾಟ ಮಾಡುವುದು ಮತ್ತು ಆಹಾರದಲ್ಲಿ ಬಳಸುವುದನ್ನು ರಾಜ್ಯಾದ್ಯಂತ ಒಂದು ವರ್ಷ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶಿಸಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಹೋಟೆಲ್‌ಗಳು ಹಾಗೂ ವ್ಯಾಪಾರಿಗಳು ಈ ನಕಲಿ ಪನ್ನೀರ್ ಬಳಕೆ ಅಥವಾ ಮಾರಾಟ ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ರಾಜ್ಯದಲ್ಲಿ ಅನಲಾಗ್ ಅಥವಾ ನಾನ್-ಡೈರಿ ಪನ್ನೀರ್ ಅನ್ನು “ಪನ್ನೀರ್” ಎಂಬ ಹೆಸರಿನಲ್ಲಿ ಉತ್ಪಾದಿಸುವುದು, ಸಂಸ್ಕರಿಸುವುದು, ಪ್ಯಾಕ್ ಮಾಡುವುದು, ದಾಸ್ತಾನು ಮಾಡುವುದು, ಸಾಗಾಟ ಮಾಡುವುದು, ಸಗಟು ಹಾಗೂ ಚಿಲ್ಲರೆ ಮಾರಾಟ ಮಾಡುವುದು ಮತ್ತು ಪ್ರದರ್ಶಿಸುವುದನ್ನು 1 ವರ್ಷದವರೆಗೆ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ಆದೇಶವು ಜಾರಿಯಾದ ದಿನದಿಂದಲೇ ರಾಜ್ಯಾದ್ಯಂತ ಅನ್ವಯವಾಗಲಿದೆ.

ಇದನ್ನೂ ಓದಿ: ಪನ್ನೀರ್ ಪ್ರಿಯರಿಗೆ ಶಾಕ್: ರಾಜ್ಯಾದ್ಯಂತ ಕೃತಕ ‘ಅನಲಾಗ್ ಪನ್ನೀರ್’ 1 ವರ್ಷ ಬ್ಯಾನ್ ಮಾಡಿ ಆಹಾರ ಇಲಾಖೆ ಆದೇಶ

ಏನಿದು ಅನಲಾಗ್ (ಕೃತಕ) ಪನ್ನೀರ್?

ಹಾಲಿನ ಕೊಬ್ಬು ಅಥವಾ ಹಾಲಿನ ಘನಾಂಶವನ್ನು ಸಂಪೂರ್ಣವಾಗಿ ಅಥವಾ ಭಾಗಶಃ ಸಸ್ಯಜನ್ಯ ಎಣ್ಣೆ ಸಸ್ಯಜನ್ಮ ಕೊಬ್ಬು ಅಥವಾ ಇತರೆ ನಾನ್-ಡೈರಿ ಪದಾರ್ಥಗಳಿಂದ ಬದಲಾಯಿಸಿ ಪನ್ನೀರ್‌ನಂತೆ ತಯಾರಿಸಲಾದ ಉತ್ಪನ್ನವನ್ನು ‘ಅನಲಾಗ್ / ನಾನ್-ಡೈರಿ ಪನ್ನೀರ್” ಎಂದು ಪರಿಗಣಿಸಲಾಗುತ್ತದೆ. ಇಂತಹ ಉತ್ಪನ್ನವನ್ನು “ಪನ್ನೀರ್” ಎಂದು ಹೆಸರಿಸಿ, ಮಾರಾಟ ಮಾಡಿ ಅಥವಾ ಗ್ರಾಹಕರಿಗೆ ಪನೀರ್ ಎಂದು ಬಿಂಬಿಸುವಂತಿಲ್ಲ. ಈ ನಿಷೇಧವು ನಿರ್ದಿಷ್ಟ ಗುಣಮಟ್ಟದ ಮಾನದಂಡಗಳನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ನಿಗದಿಪಡಿಸದ ಮತ್ತು ಪ್ರಮಾಣೀಕರಿಸದ ಡೈರಿ ಅನಲಾಗ್ ಉತ್ಪನ್ನಗಳಿಗೆ ಮಾತ್ರ ಅನ್ವಯಿಸುತ್ತದೆ. ಈಗಾಗಲೇ ಪ್ರತ್ಯೇಕ ಮಾನದಂಡಗಳನ್ನು ಹೊಂದಿರುವ Frozen Dessert, Processed Cheese ಮತ್ತು Mixed Fat Spread ಮುಂತಾದ ಪ್ರಮಾಣೀಕೃತ ಆಹಾರ ಉತ್ಪನ್ನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಆಹಾರ ಸುರಕ್ಷತಾ ಇಲಾಖೆ ಸ್ಪಷ್ಟಪಡಿಸಿದೆ.

ಅಸಲಿ ಪನ್ನೀರ್-ಅನಲಾಗ್ ಪನ್ನೀರ್ ವ್ಯತ್ಯಾಸ

ಅಸಲಿ ಪನ್ನೀರ್-ಅನಲಾಗ್ ಪನ್ನೀರ್ ನಡುವಿನ ವ್ಯತ್ಯಾಸವೇನು? ಅಸಲಿ ಪನ್ನೀರ್ ಯಾವುದರಿಂದ ತಯಾರಿಸಲಗುತ್ತೆ? ಇನ್ನು ಅನಲಾಗ್ ಪನ್ನೀರ್ ಅಂದ್ರೆ ಕೃತಕ ಪನ್ನೀರ್ ಯಾವುದರಿಂದ ತಯಾರು ಮಾಡಲಾಗುತ್ತದೆ ಎನ್ನುವುದನ್ನು ನೋಡುವುದಾದರೆ, ಆಹಾರ ಸುರಕ್ಷತಾ ನಿಯಮಾವಳಿ ಪ್ರಕಾರ, ಪನ್ನೀರ್ ಎಂಬುದು ಕೇವಲ ಹಾಲಿನಿಂದ ಮಾತ್ರ ತಯಾರಾಗುವ ಶುದ್ಧ ಉತ್ಪನ್ನವಾಗಿದೆ. ಹಾಲಿನ ನೈಸರ್ಗಿಕ ಕೊಬ್ಬು ಇದರ ಪ್ರಮುಖ ಅಂಶವಾಗಿದೆ. ಇನ್ನು ಅನಲಾಗ್ ಪನ್ನೀರ್ (ಕೃತಕ ಪನ್ನೀರ್) ಅಂದರೆ, ಹಾಲಿನ ಅಂಶ ಅಥವಾ ಹಾಲಿನ ಕೊಬ್ಬಿನ ಬದಲಿಗೆ ಸಂಪೂರ್ಣವಾಗಿ ಅಥವಾ ಭಾಗಶಃ ಸಸ್ಯಜನ್ಯ ಎಣ್ಣೆ (ವೆಜಿಟೇಬಲ್ ಆಯಿಲ್), ವನಸ್ಪತಿ ಅಥವಾ ಹಾಲೇತರ ವಸ್ತುಗಳನ್ನು ಬೆರೆಸಿ ತಯಾರಿಸಲಾಗುವ ಕೃತಕ ಉತ್ಪನ್ನವನ್ನು ‘ಅನಲಾಗ್ ಪನ್ನೀರ್’ ಎನ್ನಲಾಗುತ್ತದೆ. ಇದನ್ನು “ಪನ್ನೀರ್” ಎಂದು ಗ್ರಾಹಕರಿಗೆ ಬಿಂಬಿಸಿ ಮಾರಾಟ ಮಾಡುವುದು ಕಾನೂನುಬಾಹಿರ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:36 pm, Sat, 22 August 26

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ