AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​​, ಸೆಪ್ಟೆಂಬರ್​​ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿವಾದ ಉಲ್ಬಣಗೊಳ್ಳುವುದೇಕೆ? ಇಲ್ಲಿವೆ ಕೆಲವು ಕಾರಣ

Cauvery river water sharing dispute; ಈ ವರ್ಷ ಕೂಡ ಆಗಸ್ಟ್ 14 ರಂದು, ತಮಿಳುನಾಡು ಸರ್ಕಾರವು ಕರ್ನಾಟಕವು ತನ್ನ ಜಲಾಶಯಗಳಿಂದ 24,000 ಘನ ಅಡಿಗಳಷ್ಟು (ಕ್ಯೂಸೆಕ್ಸ್) ನೀರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಮತ್ತು ಅಂತರರಾಜ್ಯ ಗಡಿಯಲ್ಲಿರುವ ಬಿಳಿಗುಂಡ್ಲುವಿನಲ್ಲಿ ನಿಗದಿತ ಪ್ರಮಾಣದ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯನ್ನು ಕೋರಿತು. ಅಲ್ಲಿಂದ ವಿವಾದ ಮತ್ತೆ ಮುನ್ನೆಲೆಗೆ ಬಂತು.

ಆಗಸ್ಟ್​​, ಸೆಪ್ಟೆಂಬರ್​​ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿವಾದ ಉಲ್ಬಣಗೊಳ್ಳುವುದೇಕೆ? ಇಲ್ಲಿವೆ ಕೆಲವು ಕಾರಣ
ಕೆಆರ್​ಎಸ್​ ಡ್ಯಾಂ (ಸಂಗ್ರಹ ಚಿತ್ರ)
Ganapathi Sharma
|

Updated on: Sep 23, 2023 | 11:23 AM

Share

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮತ್ತೆ ವಿವಾದ ಭುಗಿಲೆದ್ದಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಆಗಸ್ಟ್, ಸೆಪ್ಟೆಂಬರ್​ ಅವಧಿಯಲ್ಲಿ ಕಾವೇರಿ ವಿವಾದ (Cauvery river water sharing dispute) ಮುನ್ನೆಲೆಗೆ ಬರುತ್ತದೆ. ಈ ವರ್ಷ ರಾಜ್ಯದಲ್ಲಿ ಬರ ಪರಿಸ್ಥಿತಿ ಉದ್ಭವಿಸಿರುವುದರಿಂದ ಹಾಗೂ ತಮಿಳುನಾಡಿಗೆ ನೀರು ಬಿಡಬೇಕಾದ ಅನಿವಾರ್ಯತೆಗೆ ಸರ್ಕಾರ ಸಿಲುಕಿರುವುದರಿಂದ ಮತ್ತೆ ಪ್ರತಿಭಟನೆಗಳು ‘ಕಾವೇರಿ’ವೆ. 2016ರಲ್ಲಿ ಕೂಡ ಪ್ರತಿಭಟನೆಗಳು ತಾರಕಕ್ಕೇರಿದ್ದವು. ಆಗಲೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವೇ ರಾಜ್ಯದಲ್ಲಿ ಅಸ್ತಿತ್ವದಲ್ಲಿತ್ತು! ಇದೀಗ ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಈ ಮಧ್ಯೆ, ಕಾವೇರಿ ಜಲಾನಯನ ಪ್ರದೇಶಗಳಲ್ಲೂ ಮಳೆ ಕೊರತೆ ಇದೆ. ಕೆಆರ್​ಎಸ್ ಜಲಾಶಯದ ಒಳ ಹರಿವು ಕಡಿಮೆಯಾಗಿದ್ದು, ಹೊರ ಹರಿವು ಹೆಚ್ಚಾಗಿರುವುದು ಮಂಡ್ಯ, ಮದ್ದೂರು, ಮೈಸೂರು ಭಾಗದ ರೈತರಲ್ಲಿ, ಈ ಪ್ರದೇಶಗಳ ಹಾಗೂ ಬೆಂಗಳೂರಿನ ನಿವಾಸಿಗಳಲ್ಲಿ ಆತಂಕ್ಕೆ ಕಾರಣವಾಗಿದೆ. ಹಾಗಾದರೆ ಆಗಸ್ಟ್​​, ಸೆಪ್ಟೆಂಬರ್​​ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿವಾದ ಉಲ್ಬಣಗೊಳ್ಳುವುದೇಕೆ? ಇದಕ್ಕೆ ಕೆಲವು ಕಾರಣಗಳಿವೆ.

ಈ ವರ್ಷ ಕೂಡ ಆಗಸ್ಟ್ 14 ರಂದು, ತಮಿಳುನಾಡು ಸರ್ಕಾರವು ಕರ್ನಾಟಕವು ತನ್ನ ಜಲಾಶಯಗಳಿಂದ 24,000 ಘನ ಅಡಿಗಳಷ್ಟು (ಕ್ಯೂಸೆಕ್ಸ್) ನೀರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಮತ್ತು ಅಂತರರಾಜ್ಯ ಗಡಿಯಲ್ಲಿರುವ ಬಿಳಿಗುಂಡ್ಲುವಿನಲ್ಲಿ ನಿಗದಿತ ಪ್ರಮಾಣದ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯನ್ನು ಕೋರಿತು. ಕಾವೇರಿ ಜಲ ವಿವಾದ ನ್ಯಾಯಮಂಡಳಿ (ಸಿಡಬ್ಲ್ಯೂಡಿಟಿ) 2007 ರ ಫೆಬ್ರವರಿಯ ಅಂತಿಮ ತೀರ್ಪಿನ ಪ್ರಕಾರ ಸೆಪ್ಟೆಂಬರ್ 2023 ಕ್ಕೆ ನಿಗದಿಪಡಿಸಿದ 36.76 ಟಿಎಂಸಿ (ಸಾವಿರ ಮಿಲಿಯನ್ ಕ್ಯೂಬಿಕ್ ಅಡಿ) ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಒತ್ತಾಯಿಸಿತು.

ತಮಿಳುನಾಡಿಗೆ ನೀರು ಬಿಡಲು ಕಾವೇರಿ ಜಲಾನಯನ ಪ್ರದೇಶದ ಮೇಲಿನ ರಾಜ್ಯವಾದ ಕರ್ನಾಟಕಕ್ಕೆ ಮಾಸಿಕ ವೇಳಾಪಟ್ಟಿ ಜಾರಿಯಲ್ಲಿದೆ. ವೇಳಾಪಟ್ಟಿಯ ಪ್ರಕಾರ, ಕರ್ನಾಟಕವು ಬಿಳಿಗುಂಡ್ಲುವಿನಲ್ಲಿ ತಮಿಳುನಾಡಿಗೆ ಜೂನ್​​ನಿಂದ ಮುಂದಿನ ವರ್ಷ ಮೇ ವರೆಗೆ ಒಟ್ಟು 177.25 ಟಿಎಂಸಿಯನ್ನು ಲಭ್ಯವಾಗುವಂತೆ ಮಾಡಬೇಕು. ಈ ಪ್ರಮಾಣದಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಅವಧಿಯಲ್ಲಿ 123.14 ಟಿಎಂಸಿ ನೀಡಬೇಕಾಗಿದೆ. ಯಾವಾಗಲೂ ಈ ಅವಧಿಯಲ್ಲಿ ಕಾವೇರಿ ಸಮಸ್ಯೆಯು ಉಲ್ಬಣಗೊಳ್ಳುತ್ತದೆ. ಮುಂಗಾರು ಅವಧಿಯಲ್ಲಿ ನಿರೀಕ್ಷೆಗಿಂತ ಕಡಿಮೆ ಮಳೆಯಾದಾಗ ಸಮಸ್ಯೆ ಹೆಚ್ಚಾಗುತ್ತದೆ. ಕಾವೇರಿ ಜಲ ವಿವಾದ ನ್ಯಾಯಮಂಡಳಿಯ 2007 ರ ಆದೇಶಕ್ಕೆ ಸಂಬಂಧಿಸಿ 2018 ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್​ ತೀರ್ಪು ನೀಡಿದ ನಂತರ, ತೀರ್ಪಿನ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸ್ಥಾಪಿಸಲಾಯಿತು. ಅದಾಗಿ ನಾಲ್ಕು ತಿಂಗಳ ನಂತರ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಅನ್ನು ಸ್ಥಾಪಿಸಲಾಯಿತು. ಅಂದಿನಿಂದ, ಪರಿಸ್ಥಿತಿಯನ್ನು ಅವಲೋಕಿಸಲು ಎರಡು ಸಂಸ್ಥೆಗಳು ಸಭೆಗಳನ್ನು ನಡೆಸುತ್ತಿವೆ.

ಇದನ್ನೂ ಓದಿ: Explainer; ಕಾವೇರಿ ವಿವಾದದ ಕಿಡಿ ಹೊತ್ತಿಕೊಂಡಿದ್ದು ಯಾವಾಗ? ಇಲ್ಲಿದೆ ನದಿ ನೀರು ಹಂಚಿಕೆ ಕಲಹದ ಸುದೀರ್ಘ ಇತಿಹಾಸ

ಆಗಸ್ಟ್ 11 ರಂದು ನಡೆದ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಆಗಸ್ಟ್ 12 ರಿಂದ ಪ್ರಾರಂಭವಾಗುವಂತೆ ಮುಂದಿನ 15 ದಿನಗಳವರೆಗೆ ಬಿಳಿಗುಂಡ್ಲುವಿನಲ್ಲಿ 10,000 ಕ್ಯೂಸೆಕ್ ನೀರು ಇರುವಂತೆ ಮಾಡಲು ಕರ್ನಾಟಕವು ಜಲಾಶಯದಿಂದ ನೀರು ಬಿಡಬೇಕು ಎಂದು ಸೂಚಿಸಿತು. ಆದರೆ, ಹಿಂದಿನ ದಿನ ನಡೆದ ಸಿಡಬ್ಲ್ಯುಆರ್‌ಸಿ ಸಭೆಯಲ್ಲಿ ಸೂಚಿಸಲಾದ 15 ದಿನಗಳಿಗೆ 15,000 ಕ್ಯೂಸೆಕ್‌ನಷ್ಟು ಪ್ರಮಾಣದ ನೀರು ಬಿಡುಗಡೆ ಮಾಡಲು ಕರ್ನಾಟಕ ನಿರಾಕರಿಸಿರುವುದು ತಮಿಳುನಾಡಿಗೆ ತೀವ್ರ ಅಸಮಾಧಾನ ಉಂಟುಮಾಡಿತು. ಕರ್ನಾಟಕ ಕೇವಲ 8,000 ಕ್ಯೂಸೆಕ್‌ಗಳನ್ನು ಮಾತ್ರ ಬಿಡುಗಡೆ ಮಾಡುವುದಾಗಿ ಹೇಳಿತ್ತು. ಅದೂ ಸಹ ಆಗಸ್ಟ್ 22 ರವರೆಗೆ ಮಾತ್ರ.

ಕರ್ನಾಟಕದ ವಾದವೇನು?

ಕೇರಳ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕಡಿಮೆ ಮಳೆಯಾಗಿರುವುದರಿಂದ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗಿದೆ ಎಂಬುದು ಕರ್ನಾಟಕದ ವಾದವಾಗಿದೆ. ಇದು ವಾಸ್ತವವೂ ಹೌದು. ‘ಹೆಚ್ಚುವರಿ ನೀರು ಹರಿದು ಬಂದಾಗಲೆಲ್ಲಾ ಕರ್ನಾಟಕ ತಮಿಳುನಾಡಿಗೆ ನೀರು ಬಿಡುತ್ತಿದೆ. ಆದರೆ, ಈ ವರ್ಷ ಕರ್ನಾಟಕ ಅಂತಹ ಸ್ಥಿತಿಯಲ್ಲಿಲ್ಲ ಎಂದು’ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ