ರಾಮನಗರ ಜಿಲ್ಲೆ ಹೆಸರು ಬದಲಾವಣೆ ಹಿಂದಿನ ತಂತ್ರವೇನು? ಡಿಕೆಶಿ- ಎಚ್‌ಡಿಕೆ ನಡುವೆ ಮತ್ತೊಂದು ಸಮರಕ್ಕೆ ಮುನ್ನುಡಿಯಾಗುತ್ತಾ?

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಾವಣೆಗೆ ಡಿಸಿಎಂ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ. ಇಂದು(ಜುಲೈ 09) ರಾಮನಗರ ಜಿಲ್ಲೆಯ ಶಾಸಕರನ್ನು ಕರೆದುಕೊಂಡು ಹೋಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಪತ್ರ ನೀಡಿದ್ದಾರೆ. ಇದೀಗ ರಾಮನಗರ ಹೆಸರು ಬದಲಾವಣೆಯ ತಂತ್ರ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ನಡುವೆ ಮತ್ತೊಂದು ಸುತ್ತಿನ ರಾಜಕೀಯ ಗುದ್ದಾಟಕ್ಕೆ ಮುನ್ನುಡಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಹಾಗಾದ್ರೆ, ರಾಮನಗರವನ್ನು ಜಿಲ್ಲೆಯಾಗಿ ಘೋಷಣೆ ಮಾಡಿದ್ಯಾರು? ಈಗ ಹೆಸರು ಬದಲಾವಣೆ ಹಿಂದೆ ಡಿಕೆಶಿ ತಂತ್ರವೇನು? ಎನ್ನುವ ವಿವರ ಇಲ್ಲಿದೆ.

ರಾಮನಗರ ಜಿಲ್ಲೆ ಹೆಸರು ಬದಲಾವಣೆ ಹಿಂದಿನ ತಂತ್ರವೇನು? ಡಿಕೆಶಿ- ಎಚ್‌ಡಿಕೆ ನಡುವೆ ಮತ್ತೊಂದು ಸಮರಕ್ಕೆ ಮುನ್ನುಡಿಯಾಗುತ್ತಾ?
ಡಿಕೆ ಶಿವಕುಮಾರ್-ಎಚ್​ಡಿ ಕುಮಾರಸ್ವಾಮಿ
Follow us
ರಮೇಶ್ ಬಿ. ಜವಳಗೇರಾ
|

Updated on: Jul 09, 2024 | 5:16 PM

ಬೆಂಗಳೂರು, (ಜುಲೈ 09): ಮುಂದೊಂದು ದಿನ ಕನಕಪುರ ಬೆಂಗಳೂರು ವ್ಯಾಪ್ತಿಗೆ ಬರುತ್ತದೆ. ʻನಿಮ್ಮ ಜೇಬಿಗೆ ನಾನು ನೇರವಾಗಿ ದುಡ್ಡು ಹಾಕಲು, ಮನೆ ಕಟ್ಟಿಸಿಕೊಡಲು ಆಗುವುದಿಲ್ಲ, ನಿಮ್ಮ ಆಸ್ತಿ ಮೌಲ್ಯಗಳನ್ನು ಹತ್ತು ಪಟ್ಟು ಹೆಚ್ಚು ಮಾಡುವ ಶಕ್ತಿ ದೇವರು ನೀಡಿದ್ದಾನೆ. ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ವಿದ್ಯೆ ನೀಡಬಹುದು ಅಷ್ಟೇ. ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಿʼ ಎಂದು ಡಿಕೆ ಶಿವಕುಮಾರ್ ಈ ಹಿಂದೆಯೇ ಕನಕಪುರದ ಜನತೆಗೆ ಕಿವಿಮಾತು ಹೇಳಿದ್ದರು. ಇದೀಗ ಇದೇ ಮಾತನ್ನು ಉಳಿಸಿಕೊಳ್ಳಲು ಡಿಕೆ ಶಿವಕುಮಾರ್ ಮುಂದಾಗಿದ್ದಾರೆ. ಹೌದು…ರಾಮನಗರ ಎನ್ನುವ ಹೆಸರು ಬದಲಾಯಿಸಿ, ಬೆಂಗಳೂರು ದಕ್ಷಿಣ ಎನ್ನುವ ಹೆಸರು ನಾಮಕರಣ ಮಾಡಲು ಡಿಕೆ ಶಿವಕುಮಾರ್ ಪ್ಲ್ಯಾನ್ ಮಾಡಿದ್ದಾರೆ. ಈ ಸಂಬಂಧ ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯನರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ರಾಮನಗರ ಹೆಸರು ಬದಲಾವಣೆ ಮನವಿ ಪತ್ರದಲ್ಲಿ ಏನಿದೆ?

ಮೊದಲು ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲ್ಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. 1986ರ ಸಾಲಿನಲ್ಲಿ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲ್ಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಲಾಯಿತು. ನಂತರ 2007ರ ಸಾಲಿನಲ್ಲಿ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟಿ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು. ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕುಗಳನ್ನು ಸೇರಿಸಿಕೊಂಡು ಹೊಸದಾಗಿ ರಾಮನಗರ ಜಿಲ್ಲೆಯನ್ನಾಗಿ 2007ರಲ್ಲಿ ಘೋಷಿಸಿ, ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಲಾಯಿತು.

ಇದನ್ನೂ ಓದಿ: ರಾಮನಗರದ ಹೆಸರನ್ನು ಬೆಂಗಳೂರು ದಕ್ಷಿಣ ಅಂತ ಬದಲಾಯಿಸಲು ಸಿಎಂಗೆ ಪ್ರಸ್ತಾವನೆ ಸಲ್ಲಿಸಲಾಗಿದೆ: ಡಿಕೆ ಶಿವಕುಮಾರ್

ಪ್ರಸ್ತುತ, ಬೆಂಗಳೂರು ನಗರದ ಅಂತರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲ್ಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನಮ್ಮ ಚಿಂತನೆಯೂ ಕೂಡ. ಆದ್ದರಿಂದ, ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡಲು ಕೋರುತ್ತೇವೆ ಎಂದು ಮನವಿ ಪತ್ರ ಸಲ್ಲಿಸಲಾಗಿದೆ.

ರಾಮನಗರ ಹೆಸರು ಬದಲಾವಣೆ ಹಿಂದಿನ ಉದ್ದೇಶವೇನು?

2007ರಲ್ಲಿ ಎಚ್​ಡಿ ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆಯನ್ನು ಘೋಷಣೆ ಮಾಡಿದ್ದರು. ಆದ್ರೆ, ಇದೀಗ ಡಿಸಿಎಂ ಡಿಕೆ ಶಿವಕುಮಾರ್ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಓಡಾಡುತ್ತಿದ್ದಾರೆ. ಇನ್ನು ಈ ಹೆಸರು ಬದಲಾವಣೆ ಹಿಂದಿನ ಉದ್ದೇಶವೇನು ಎನ್ನುವುದನ್ನು ನೋಡುವುದಾದರೆ, ಅವರೇ ಹೇಳಿರುವಂತೆ ಯುಎಸ್​ನ ಅಕ್ಕಪಕ್ಕದ ಸ್ಥಳಕ್ಕೆ ಪ್ರವಾಸಕ್ಕೆ ಹೋದರೆ ಅಮೆರಿಕಕ್ಕೆ ಹೋಗಿದ್ದೆ ಎಂದು ಹೇಳುತ್ತಾರೆ. ಹಾಗೇ ವಿಶ್ವವೇ ಬೆಂಗಳೂರನ್ನು ನೋಡುತ್ತಿದೆ. ಹೀಗಾಗಿ ರಾಮನಗರ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಾವಣೆ ಮಾಡಿದರೆ ಈ ಭಾಗದಲ್ಲಿ ಅಭಿವೃದ್ಧಿಯಾಗುತ್ತೆ. ಹೆಚ್ಚೆಚ್ಚು ಕೈಗಾರಿಕೆಗಳು , ಕಂಪನಿಗಳು ಇಲ್ಲಿಗೆ ಬರುತ್ತವೆ. ಇದರಿಂದ ಇಲ್ಲಿನ ಜನರು ಆರ್ಥಿಕವಾಗಿ ಬಲಗೊಳ್ಳುತ್ತಾರೆ. ಅಲ್ಲದೇ ಈ ಭಾಗದ ರೈತರ ಜಮೀನಿಗೆ ಭಾರೀ ಬೇಡಿಕೆ ಬರಲಿದೆ. ಅಲ್ಲದೇ ಈ ಭಾಗದಲ್ಲಿ ಇನ್ನೊಂದು ವಿಮಾನ ನಿಲ್ದಾಣ ಮಾಡಬೇಕೆಂಬ ಪ್ಲ್ಯಾನ್ ಇದೆ. ಹೀಗೆ ಈ ಎಲ್ಲಾ ಅಂಶಗಳಿಂದ ಡಿಕೆ ಶಿವಕುಮಾರ್ ಅವರು ರಾಮನಗರ ಹೆಸರು ಬದಲಾವಣೆ ಮಾಡಿ ಬೆಂಗಳೂರು ದಕ್ಷಿಣ ಮಾಡಲು ಹೊರಟ್ಟಿದ್ದಾರೆ.

ಡಿಕೆ ಶಿವಕುಮಾರ್ ರಾಜಕೀಯ ತಂತ್ರವೇನು?

ಇನ್ನು ಡಿಕೆ ಶಿವಕುಮಾರ್ ಅವರ ಈ ಬದಲಾವಣೆ ತಂತ್ರವನ್ನು ರಾಜಕೀಯವಾಗಿ ಗಮನಿಸಿದರೆ, ಹೆಸರು ಬದಲಾವಣೆಯ ಮೂಲಕ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಗೆ ಮಾಸ್ಟರ್ ಸ್ಟ್ರೋಕ್ ಕೊಡಲು ಪಣ ತೊಟ್ಟಂತಿದೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ, ರಾಮನಗರ ಜಿಲ್ಲೆಯ ಜಮೀನು ಬೆಲೆಯಲ್ಲಿ ಒಂದಕ್ಕೆರಡು ಏರಿಸುವುದರ ಮೂಲಕ ಸ್ಥಳೀಯ ಜನರನ್ನು ಆರ್ಥಿಕವಾಗಿ ಬಲಗೊಳಿಸಿದ ಕ್ರೆಡಿಟ್​ ಪಡೆಯಲು ಡಿಕೆಶಿ ಮುಂದಾಗಿದ್ದಾರೆ. ಹೀಗೆ ಹಲವು ಪ್ಲಾನ್‌ಗಳೊಂದಿಗೆ ಡಿಕೆಶಿ, 2007ರಲ್ಲಿ ರಾಮನಗರ ಜಿಲ್ಲೆಯನ್ನಾಗಿ ಘೋಷಣೆ ಮಾಡಿದ್ದ ಕುಮಾರಸ್ವಾಮಿ ಹಿಡಿತ, ಹವಾ ಕುಗ್ಗಿಸಲು ತಂತ್ರ ರೂಪಿಸಿದಂತಿದೆ.

ʼಬ್ರಾಂಡ್ ಬೆಂಗಳೂರುʼ ಹೆಸರಲ್ಲಿ ರಾಮನಗರ ಜಿಲ್ಲೆಯ ಹೆಸರನ್ನು ʼಬೆಂಗಳೂರು ದಕ್ಷಿಣ ಜಿಲ್ಲೆʼ ಎಂದು ನಾಮಕರಣ ಮಾಡುವುದು ಡಿಕೆಶಿ ಪ್ಲಾನ್.‌ ಜಿಲ್ಲೆಯ ಅಭಿವೃದ್ಧಿಗೆ ಬೆಂಗಳೂರು ಹೆಸರು ಪೂರಕವಾಗಿರಲಿದೆ. ಆ ಮೂಲಕ ರಾಮನಗರಕ್ಕೆ ಬೆಂಗಳೂರು ಮಾನ್ಯತೆ ನೀಡಿ ಕ್ರೆಡಿಟ್ ಪಡೆಯಲು ಡಿಕೆಶಿ ಚಿಂತನೆ ನಡೆಸಿದ್ದಾರೆ. ಆ ಮೂಲಕ ಈ ಪ್ರದೇಶದಲ್ಲಿ ಕುಮಾರಸ್ವಾಮಿಯವರ ಪ್ರಾಬಲ್ಯ ಕಡಿಮೆ ಮಾಡಲು ಡಿಕೆಶಿ ಯತ್ನಿಸುತ್ತಿದ್ದಾರೆ. ಒಕ್ಕಲಿಗ ಮತ ಬ್ಯಾಂಕ್‌ ಅನ್ನು ಸಂಪೂರ್ಣ ತಮ್ಮ ಕೈವಶ ಮಾಡಿಕೊಳ್ಳುವ ಚಿಂತನೆ ಎನ್ನಲಾಗಿದೆ.

ಆದ್ರೆ, ಡಿಕೆ ಶಿವಕುಮಾರ್ ಪ್ಲಾನ್‌ಗೆ ಕುಮಾರಸ್ವಾಮಿ ಹಿಂದಿನಿಂದಲೂ ವಿರೋಧ ವ್ಯಕ್ತಪಡಿಸಿದ್ದಾರೆ. ಗ್ರೇಟರ್ ಬೆಂಗಳೂರು ಮಾಡುತ್ತೇವೆ ಎಂದಿದ್ದ ಡಿಕೆ ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದರು. ಇದು ತಮ್ಮ ಬೇನಾಮಿ ಆಸ್ತಿ ಸಕ್ರಮ ಮಾಡಿಕೊಳ್ಳಲು ಡಿಕೆಶಿ ಪ್ಲಾನ್ ಎಂದು ಆರೋಪಿಸಿದ್ದರು.

ಇದೀಗ ಅಧಿಕೃತವಾಗಿ ರಾಮನಗರ ಹೆಸರು ಬದಲಾವಣೆಗೆ ಡಿಕೆ ಶಿವಕುಮಾರ್ ಹೆಜ್ಜೆ ಇಟ್ಟಿದ್ದು, ಚನ್ನಪಟ್ಟಣ ಉಪ ಚುನಾವಣೆ ಸಂದರ್ಭದಲ್ಲಿ ಹೆಸರು ಬದಲಾವಣೆಯ ಕಿಡಿ ಹೊತ್ತಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್​ ನಡುವೆ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ವೇದಿಕೆಯಾಗುವುದಂತೂ ಸತ್ಯ. ಆದ್ರೆ, ಇದು ಯಾವ ಹಂತಕ್ಕೆ ಹೋಗಿ ನಿಲ್ಲುತ್ತೆ ಎನ್ನುವುದನ್ನು ಕಾದುನೋಡಬೇಕು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್