ಐಎಂಎ ವಂಚನೆ‌ ಪ್ರಕರಣ; ಸರ್ಕಾರಿ ವಕೀಲರ ವಾದ ಒಪ್ಪದ ಹೈಕೋರ್ಟ್​

ರಾಜ್ಯ ಸರ್ಕಾರದ ವಾದವನ್ನು ಒಪ್ಪದ ಸಿಜೆ ಎ.ಎಸ್.ಒಕಾ, ‘ಹಣಕಾಸಿನ ಲಾಭ ಪಡೆದಿದ್ದರೆ ಜಪ್ತಿ ಮಾಡಬಹುದು. ವೈಯಕ್ತಿಕ ಆಸ್ತಿ ಜಪ್ತಿ ಮಾಡಲು ಅಧಿಕಾರವಿದೆ. ಸರ್ಕಾರಿ ಶಾಲೆಗೆ ಐಎಂಎ 10 ಕೋಟಿ ರೂ. ದೇಣಿಗೆ ನೀಡಲಾಗಿದ್ದು, ದೇಣಿಗೆ ಹಣ ಠೇವಣಿದಾರರಿಗೆ ಸರ್ಕಾರ ಹಿಂದಿರುಗಿಸಬೇಕು.’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಐಎಂಎ ವಂಚನೆ‌ ಪ್ರಕರಣ; ಸರ್ಕಾರಿ ವಕೀಲರ ವಾದ ಒಪ್ಪದ ಹೈಕೋರ್ಟ್​
ರೋಷನ್ ​ಬೇಗ್
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 16, 2021 | 7:38 PM

ಬೆಂಗಳೂರು: ಐಎಂಎ ಸಂಸ್ಥೆಯಿಂದ ಹೂಡಿಕೆದಾರರಿಗೆ ವಂಚನೆ‌ ಪ್ರಕರಣದಡಿ ಮಾಜಿ ಸಚಿವ ರೋಷನ್ ಬೇಗ್ ಆಸ್ತಿ ಜಪ್ತಿ ಮಾಡದ ಬಗ್ಗೆ ಹೈಕೋರ್ಟ್ ಪ್ರಶ್ನಿಸಿದೆ. ರೋಷನ್ ಬೇಗ್ ವಿರುದ್ಧದ ಸಿಬಿಐ ತನಿಖೆ ಪೂರ್ಣವಾಗಿಲ್ಲ. ಈ ಹಂತದಲ್ಲಿ ಜಪ್ತಿ ಆದೇಶ ಸಾಧ್ಯವಿಲ್ಲ ಎಂದು ಸರ್ಕಾರಿ ವಕೀಲ ವಿಜಯ್ ಕುಮಾರ್ ಪಾಟೀಲ್ ವಾದ ಮಂಡಿಸಿದ್ದಾರೆ.

ರಾಜ್ಯ ಸರ್ಕಾರದ ವಾದವನ್ನು ಒಪ್ಪದ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎ.ಎಸ್.ಒಕಾ, ‘ಹಣಕಾಸಿನ ಲಾಭ ಪಡೆದಿದ್ದರೆ ಜಪ್ತಿ ಮಾಡಬಹುದು. ವೈಯಕ್ತಿಕ ಆಸ್ತಿ ಜಪ್ತಿ ಮಾಡಲು ಅಧಿಕಾರವಿದೆ. ಸರ್ಕಾರಿ ಶಾಲೆಗೆ ಐಎಂಎ ₹ 10 ಕೋಟಿ ದೇಣಿಗೆ ನೀಡಿದೆ. ಈ ದೇಣಿಗೆ ಹಣವನ್ನು ಠೇವಣಿದಾರರಿಗೆ ಸರ್ಕಾರ ಹಿಂದಿರುಗಿಸಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಪ್ರಕರಣದ ವಿಚಾರಣೆಯನ್ನು ಆದೇಶಕ್ಕಾಗಿ ನಾಳೆಗೆ ಮುಂದೂಡಲಾಗಿದೆ.

ಐಎಂಎ ಸಂಸ್ಥೆಯ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದ ಆರೋಪಿ ಶಾಸಕ ಆರ್.ರೋಷನ್​ಬೇಗ್ ಆಸ್ತಿ ಜಪ್ತಿ ಸಾಧ್ಯತೆಯ ಬಗ್ಗೆ ಸಕ್ಷಮ ಪ್ರಾಧಿಕಾರ ಚಿಂತನೆ ನಡೆಸಿದೆ. ಈ ಕುರಿತು ಹೈಕೋರ್ಟ್​ಗೆ ಬುಧವಾರ ಪ್ರಾಧಿಕಾರದ ವಿಶೇಷಾಧಿಕಾರಿ ಹರ್ಷಗುಪ್ತ ಮಾಹಿತಿ ನೀಡಿದ್ದರು.

ಪ್ರಕರಣದ ಹಿನ್ನೆಲೆ ಹಗರಣದಲ್ಲಿ ರೋಷನ್​ ಬೇಗ್​ ಪಾತ್ರದ ಬಗ್ಗೆ ಸರ್ಕಾರ ಮತ್ತು ಸಿಬಿಐನಿಂದ ಸಾಕ್ಷ್ಯಾಧಾರ ಕೇಳಲಾಗಿತ್ತು. ಮಾಹಿತಿ ಬಂದ ತಕ್ಷಣವೇ ರೋಷನ್ ​ಬೇಗ್ ಆಸ್ತಿಗೆ ಕ್ರಮ ಕೈಗೊಳ್ಳಲಾಗುವುದು. ಪ್ರಕರಣದಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳ ಆಸ್ತಿ ಜಪ್ತಿಗೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿತ್ತು.  ಅಲ್ಲದೇ ಈವರೆಗೂ ಜಪ್ತಿಯಾದ ಆಸ್ತಿಗಳ ವಿವರವನ್ನು ಹರ್ಷ ಗುಪ್ತ ಹೈಕೋರ್ಟ್​ಗೆ ಸಲ್ಲಿಸಿದ್ದರು.

ಸಕ್ಷಮ ಪ್ರಾಧಿಕಾರಕ್ಕೆ ಕೆಲ ಕಳಂಕಿತ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಹರ್ಷಗುಪ್ತ ಆಕ್ಷೆಪಿಸಿದ್ದರು. ಸಕ್ಷಮ ಪ್ರಾಧಿಕಾರಕ್ಕೆ ಲೋಕಾಯುಕ್ತ, ಎಸಿಬಿ ಪ್ರಕರಣ ಎದುರಿಸುತ್ತಿದ್ದ ಕೆಲ ಕಳಂಕಿತ ಅಧಿಕಾರಿಗಳನ್ನು ನೇಮಿಸಲಾಗಿತ್ತು. ಅವರ ಸೇವೆ ಹಿಂಪಡೆಯಲು ಮನವಿ ಮಾಡಲಾಗಿದೆ ಎಂಬ ಮಾಹಿತಿಯನ್ನು ಹರ್ಷ ಗುಪ್ತ ಹೈಕೋರ್ಟ್​ಗೆ ನೀಡಿದ್ದರು.

ಐಎಂಎ ಬಹುಕೋಟಿ ಅವ್ಯವಹಾರ ಕೇಸ್​ಗೆ ಸಂಬಂಧಿಸಿದಂತೆ ಬೆಂಗಳೂರಿನ ಸಿಬಿಐ ವಿಶೇಷ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿತ್ತು. ಐಎಂಎ ಸಂಸ್ಥಾಪಕ ಮನ್ಸೂರ್ ಅಲಿಖಾನ್ ಸೇರಿದಂತೆ 7 ಆರೋಪಿಗಳ ವಿರುದ್ಧ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿತ್ತು. ಬಿಡಿಎ ಇಇ ಪಿ.ಡಿ.ಕುಮಾರ್ ವಿರುದ್ಧವೂ ಚಾರ್ಜ್‌ಶೀಟ್ ಸಲ್ಲಿಕೆಯಾಗಿತ್ತು.

ಹಿರಿಯ ಐಎಎಸ್​ ಆಫೀಸರ್ ವಿಜಯ್ ಶಂಕರ್ ಐಎಂಎ ಜ್ಯುವೆಲ್ಲರ್ ಪ್ರಕರಣದಲ್ಲಿ ₹ 1.5 ಕೋಟಿ ಕಿಕ್​​ಬ್ಯಾಕ್​ ಆರೋಪ ಹೊತ್ತು ಜೈಲು ಸೇರಿದ್ದರು.  ಐಎಂಎ ಪ್ರಕರಣ ಇನ್ನೂ ವಿಚಾರಣೆ ಹಂತದಲ್ಲಿರೋವಾಗಲೇ ಬಿ.ಎಂ.ವಿಜಯ್ ಶಂಕರ್ ಬೆಂಗಳೂರಿನ ಜಯನಗರದ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಸ್ವಂತ ಮನೆಯ ಮೇಲ್ಮಹಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಅಷ್ಟೇ ಅಲ್ಲದೇ, ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್‌ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಆದರೆ ಸಿಬಿಐ ಚಾರ್ಜ್​ಶೀಟ್ ರದ್ದಾಗಿತ್ತು. ನ್ಯಾಯಮೂರ್ತಿ ಜಾನ್‌ ಮೈಕೆಲ್ ಕುನ್ಹಾ ಅವರಿದ್ದ ಹೈಕೋರ್ಟ್ ಪೀಠ ಚಾರ್ಜ್​ಶೀಟ್ ರದ್ದು ಆದೇಶ ನೀಡಿತ್ತು.

ಇದನ್ನೂ ಓದಿ: IMA ಬಹುಕೋಟಿ ಅವ್ಯವಹಾರ ಕೇಸ್‌: ಮನ್ಸೂರ್ ಅಲಿಖಾನ್ ಸೇರಿದಂತೆ 7 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

(why dont you seize former minister Roshan Baig property questions Karnataka High Court )

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ