AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮಿ ಹಣ ವಿಳಂಬವಾಗುತ್ತಿರುವುದೇಕೆ? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊಟ್ಟರು ಕಾರಣ

ಎರಡು ತಿಂಗಳುಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸರ್ಕಾರ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಿಲ್ಲ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅತ್ತ ಪ್ರತಿಪಕ್ಷಗಳೂ ಬೋಗಸ್ ಗ್ಯಾರಂಟಿ ಎಂದು ಹೀಗಳೆಯುತ್ತಿವೆ. ಆದರೆ, ಹಣ ವರ್ಗಾವಣೆಯಾಗದಿರಲು, ವಿಳಂಬವಾಗಲು ನಿಜವಾದ ಕಾರಣ ಏನೆಂಬುದನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಅದನ್ನು ತಿಳಿಯಲು ಮುಂದೆ ಓದಿ.

ಗೃಹಲಕ್ಷ್ಮಿ ಹಣ ವಿಳಂಬವಾಗುತ್ತಿರುವುದೇಕೆ? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊಟ್ಟರು ಕಾರಣ
ಲಕ್ಷ್ಮೀ ಹೆಬ್ಬಾಳ್ಕರ್
Anil Kalkere
| Updated By: Ganapathi Sharma|

Updated on: Aug 10, 2024 | 12:29 PM

Share

ಬೆಂಗಳೂರು, ಆಗಸ್ಟ್ 10: ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಗಳಿಗೆ ವರ್ಗಾವಣೆಯಾಗದೇ ಇರುವುದು, ಎರಡ್ಮೂರು ತಿಂಗಳುಗಳಿಂದ ಬಾಕಿ ಇರುವ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಹಣ ವರ್ಗಾವಣೆ ಯಾಕೆ ವಿಳಂಬವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

‘ಟಿವಿ9’ಗೆ ಹೇಳಿಕೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮಿ ಯೋಜನೆಗೆ ಪ‌್ರತಿ ತಿಂಗಳಿಗೆ 2,400 ಕೋಟಿ ರೂ. ಖರ್ಚಾಗುತ್ತಿದೆ. ಮಂಡ್ಯದಲ್ಲಿ ಡಿಪಿಟಿಗೆ ಪುಷ್ ಮಾಡಿ ಮೂರು ದಿನಗಳಾದವು. ಇನ್ನೂ ನಾಲ್ಕೈದು ಜಿಲ್ಲೆಗಳಿಗೆ ಯೋಜನೆಯ ಹಣ ದೊರೆಯಬೇಕಿದೆ. ಬ್ಯಾಂಕ್​​​ಗಳಿಗೆ ಹಣ ಕಳುಹಿಸಿರುತ್ತೇವೆ. ಸ್ಥಳೀಯ ಮಟ್ಟವಾಗಿ ಯಜಮಾನಿಯರ ಖಾತೆಗೆ ವರ್ಗಾವಣೆಯಾಗಬೇಕು. ದೊಡ್ಡ ಮೊತ್ತದ ಹಣ ಆಗಿರುವ ಕಾರಣ ವಿಳಂಬ ಆಗುತ್ತಿರುತ್ತದೆ ಎಂದರು.

ಜೂನ್ ತಿಂಗಳ ಹಣ ವರ್ಗಾವಣೆಯಾಗಿದೆ. ಜುಲೈ ತಿಂಗಳ ಹಣ ಇನ್ನೆರಡು ದಿನಗಳಲ್ಲಿ ಖಾತೆಗಳಿಗೆ ವರ್ಗಾವಣೆಯಾಗಲಿದೆ. ಆಗಸ್ಟ್ ತಿಂಗಳ ಹಣ ಕೂಡ ಯಜಮಾನಿಯರ ಖಾತೆಗೆ ವರ್ಗಾವಣೆ ಮಾಡುತ್ತೇವೆ. ವಿಳಂಬ ಆಗಬಾರದು ಎಂಬುದು ನಮ್ಮ ಚಿಂತನೆ. ಒಂದು‌ ದಿನಕ್ಕೆ ನನಗೆ 500 ಕರೆಗಳು ಬರುತ್ತವೆ. ಮಂತ್ರಿಯಾಗಿ ಎಲ್ಲ ಕರೆಗಳಿಗೂ ನಾನು ಉತ್ತರ ನೀಡುತ್ತಿದ್ದೇನೆ. ಹಣ ವರ್ಗಾವಣೆಯಾಗುತ್ತದೆ ಎಂದು ಸಮಾಧಾನ ಮಾಡುತ್ತಾ ಇರುತ್ತೇನೆ ಎಂದು ಅವರು ತಿಳಿಸಿದರು.

ವಿಳಂಬ ಆಗದೇ ಇರುವಂತೆ ನೋಡಿಕೊಳ್ಳಲು ನಮ್ಮ ತಂಡ ಹಗಲು ರಾತ್ರಿ ಕೆಲಸ ಮಾಡುತ್ತಿದೆ. ಈಗ ಹಣ ವರ್ಗಾವಣೆ ಪ್ರಕ್ರಿಯೆ ಶುರು ಮಾಡಿದರೂ 10 ರಿಂದ 12 ದಿನ ಬೇಕಾಗುತ್ತದೆ. ಯಜಮಾನಿಯರ ಹಣ ಎಲ್ಲಾ ಜಿಲ್ಲೆಗಳಿಗೂ ತಲುಪಬೇಕು ಎಂದು ಶ್ರಮಿಸುತ್ತಿದ್ದೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಇದನ್ನೂ ಓದಿ: ರಾಜೀನಾಮೆ ಕೊಡ್ತೇನೆಂದು ಬರೆದುಕೊಟಿದ್ದಾರಾ? ಮೂರೂವರೆ ವರ್ಷ ಸಿದ್ದರಾಮಯ್ಯ ಅವರೇ ಸಿಎಂ; ರಾಯರೆಡ್ಡಿ

ಕೆಲವು ದಿನಗಳ ಹಿಂದೆ ಮಂಡ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಷಣ ಮಾಡುತ್ತಿದ್ದ ವೇಳೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗಿಲ್ಲ ಎಂದು ಮಹಿಳೆಯರು ಕೂಗಾಡಿದ್ದರು. ಇದೆ ವೇಳೆ, ಕೆಲವೇ ದಿನಗಳಲ್ಲಿ ನಿಮ್ಮ ಖಾತೆಗಳಿಗೆ ಹಣ ವರ್ಗಾವಣೆ ಆಗಲಿದೆ ಎಂದು ಉಪಮುಖ್ಯಮಂತ್ರಿ ಭರವಸೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್