Loading video

ರಾಹುಲ್, ಅಖಿಲೇಶ್ ಮತ್ತು ಕೇಜ್ರಿವಾಲ್ ಅವರನ್ನು ಥ್ರೀ ಈಡಿಯಟ್ಸ್ ಅಂದರೆ ಮುಸಲ್ಮಾನರಿಗ್ಯಾಕೆ ಸಿಟ್ಟು? ಪ್ರತಾಪ್ ಸಿಂಹ

|

Updated on: Feb 11, 2025 | 12:18 PM

ಅಸೆಂಬ್ಲಿ ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಗೆ ವೋಟು ಮಾಡಿದರೆ ತಾಲಿಬಾನಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ಎಚ್ಚರಿಸಿದ್ದು ನಿಜವಾಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಕಾನೂನು ಪರಿಪಾಲಿಸುವ ಮತ್ತು ಜನರಿಗೆ ರಕ್ಷಣೆ ಒದಗಿಸುವ ಪೊಲೀಸರಿಗೆ ಭದ್ರತೆ ಇಲ್ಲದಂತಾಗಿದೆ, ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲೂ ಸರ್ಕಾರೀ ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆದಿದ್ದವು ಎಂದು ಪ್ರತಾಪ್ ಸಿಂಹ ಹೇಳಿದರು.

ಮೈಸೂರು: ನಗರದಲ್ಲಿ ನಿನ್ನೆ ರಾತ್ರಿ ನಡೆದ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟದ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಮಾಧ್ಯಮಗಳ ಜೊತೆ ಮಾತಾಡಿದ ಅವರು ವಾಟ್ಸ್ಯಾಪ್ ನಲ್ಲಿ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಮತ್ತು ಅಖಿಲೇಶ್ ಯಾದವ್ ಅವರ ಫೋಟೋಗಳನ್ನು ಹಾಕಿ 3 ಈಡಿಯಟ್ಸ್ ಎಂದು ಬರೆದಿರುವುದಕ್ಕೆ ರೊಚ್ಚಿಗೆದ್ದ ಕೆಲ ಮುಸಲ್ಮಾನ ಪುಂಡರು ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ ಎಂದು ಪ್ರತಾಪ್ ಹೇಳಿದರು. ಪೋಸ್ಟ್ ಹಾಕಿದವರನ್ನು ಅರೆಸ್ಟ್ ಮಾಡಿದ್ದಾಗಿ ಪೊಲೀಸರು ಹೇಳಿದರೂ ಕಲ್ಲು ತೂರಾಟವನ್ನು ಪುಂಡರು ನಿಲ್ಲಿಸಿಲ್ಲ, ಉದಯಗಿರಿ ಪೊಲೀಸ್ ಠಾಣೆ ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ಮಾಡುವ ಕೆಲಸ ಕಳೆದ 15 ವರ್ಷಗಳಿಂದ ನಡೆಯುತ್ತಿದೆ ಎಂದು ಬಿಜೆಪಿ ನಾಯಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮೈಸೂರಲ್ಲಿ ಸಾಮಾಜಿಕ ಜಾಲತಾಣದ ಪೋಸ್ಟೊಂದರಿಂದ ಉದ್ವಿಗ್ನ ಸ್ಥಿತಿ, ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ