AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಒಂಟಿ ಸಲಗ ದಾಳಿಗೆ ಬೈಕ್​ ಪುಡಿ-ಪುಡಿ, ಕೂದಲೆಳೆ ಅಂತರದಲ್ಲಿ ಸವಾರ ಬಚಾವ್

ಹಾಸನದಲ್ಲಿ ಜಿಲ್ಲೆಯ ಕಲೇಶಪುರ ತಾಲ್ಲೂಕಿನಲ್ಲಿ ಕಾಡಾನೆಯೊಂದು ಬೈಕ್​ ಸವಾರನ ಮೇಲೆ ದಾಳಿ ಮಾಡಿದ್ದು, ಅದೃಷ್ಟವಶಾತ್ ಸವಾರ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಆದ್ರೆ, ಆ ಒಂಟಿ ಸಲಗ ಬೈಕ್​ನ್ನು ಎಳದಾಡಿ, ಎತ್ತಿ ಬಿಸಾಕಿ ಹಾನಿ ಮಾಡಿದೆ. ಮತ್ತೊಂದು ಕಡೆ ಚಾಮರಾನಗರದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿದೆ. ಈ ಎರಡು ಪ್ರತ್ಯೇಕ ಘಟನೆಯ ವಿವರ ಇಲ್ಲಿದೆ.

ಹಾಸನ: ಒಂಟಿ ಸಲಗ ದಾಳಿಗೆ ಬೈಕ್​ ಪುಡಿ-ಪುಡಿ, ಕೂದಲೆಳೆ ಅಂತರದಲ್ಲಿ ಸವಾರ ಬಚಾವ್
ಆನೆ ದಾಳಿಗೆ ಬೈಕ್​ ಪುಡಿ-ಪುಡಿ,
ಮಂಜುನಾಥ ಕೆಬಿ
| Edited By: |

Updated on: Aug 14, 2023 | 10:40 AM

Share

ಹಾಸನ, (ಆಗಸ್ಟ್ 14): ಕರ್ನಾಟಕದಲ್ಲಿ ಕಲವೆಡೆ ಚಿರತೆ, ಆನೆ (Wild elephant ), ಕರಡಿ ಹಾವಳಿ ಮಿತಿ ಮೀರಿದೆ. ಮಡಿಕೇರಿ ತಾಲೂಕಿನ ಅರೆಕಾಡು ಗ್ರಾಮದಲ್ಲಿ ನಿನ್ನೆ(ಆಗಸ್ಟ್ 13) ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಬಲಿಯಾಗಿದ್ದರು. ಇದರ ಬೆನ್ನಲ್ಲೇ ಹಾಸನದಲ್ಲಿ(Hassan) ಜಿಲ್ಲೆಯಲ್ಲಿ ಬೈಕ್​ ಸವಾರನ ಮೇಲೆ ಒಂಟಿ ಸಲಗ ದಾಳಿ ಮಾಡಿದೆ. ಭಾನುವಾರ ರಾತ್ರಿ ಸಕಲೇಶಪುರ ತಾಲ್ಲೂಕಿನ, ಕಿರೇಹಳ್ಳಿ ಗ್ರಾಮದ ಬಳಿ ಬೈಕ್​ ಚಲಾಯಿಸಿಕೊಂಡು ಹೋಗುತ್ತಿದ್ದ ಚೇತನ್ ಮೇಲೆ ಕಾಡಾನೆ ದಾಳಿ ಮಾಡಿದೆ. ಅದೃಷ್ಟವಶಾತ್​ ಸವಾರ ಚೇತನ್​ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಆದ್ರೆ, ಆನೆ ಬೈಕ್​ನ್ನು ಪುಡಿ ಪುಡಿ ಮಾಡಿದೆ.

ಕಾಟಳ್ಳಿ ಗ್ರಾಮದ ಚೇತನ್ ಭಾನುವಾರ ರಾತ್ರಿ ಶ್ರೀನಿವಾಸ ಎಸ್ಟೇಟ್ ಸಮೀಪ ಬೈಕ್‌ನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಒಂಟಿ ಸಲಗ ಅಟ್ಯಾಕ್ ಮಾಡಿದೆ. ಆ ವೇಳೆ ಚೇತನ್ ಬೈಕ್​ ಬಿಟ್ಟು ಓಡಿ ಹೋಗಿದ್ದಾನೆ. ಬಳಿಕ ಆನೆ ಬೈಕ್​ನ್ನು ತುಳಿದು ಹಾನಿ ಮಾಡಿ ಸಿಟ್ಟು ತೀರಿಸಿಕೊಂಡಿದೆ.

ಇದನ್ನೂ ಓದಿ: ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಸಾವು, ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಣೆ

ಬೈಕ್​​ನ್ನು ತುಳಿದು ಸೊಂಡೆಯಿಂದ ಎತ್ತಿ ಬಿಸಾಡಿ ಹಾನಿಗೊಳಿಸಿದ ಬಳಿಕ ಅಲ್ಲಿಂದ ಕಾಲ್ಕಿತ್ತಿದೆ. ಆದರೂ ಸವಾರ ಚೇತನ್​ ಭಯದಿಂದ ಬೈಕ್ ಹತ್ತಿರ ಹೋಗಿಲ್ಲ. ಬಳಿಕ ಇಂದು (ಸೋಮವಾರ) ಬೆಳಗ್ಗೆ ಬೈಕ್​ ತರಲೆಂದು ಗ್ರಾಮದವರ ಜೊತೆಗೆ ಸ್ಥಳಕ್ಕೆ ಹೋಗಿದ್ದಾರೆ. ಆದ್ರೆ, ಬೈಕ್ ನಜ್ಜುಗುಜ್ಜಾಗಿತ್ತು. ಇನ್ನು ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಟಳ್ಳಿ, ಕಿರೇಹಳ್ಳಿ, ಮಾಸವಳ್ಳಿ ಮಾರ್ಗವಾಗಿ ಸಂಚರಿಸುವವರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.

ರೈತನ ಮೇಲೆ ಕರಡಿ ದಾಳಿ

ಚಾಮರಾಜನಗರ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ರೈತನ ಮೇಲೆ ಕರಡಿ ದಾಳಿ ಮಾಡಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚ್ಚಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪೊನ್ನಾಚ್ಚಿ ಗ್ರಾಮದ ಬಸವಣ್ಣ ಗಾಯಗೊಂಡಿದ್ದಾರೆ. ಬಸವಣ್ಣ ತನ್ನ ಪಾಡಿಗೆ ತಾನು ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಏಕಏಕಿ ಕರಡಿ ದಾಳಿ ಮಾಡಿ ತೊಡೆ ಭಾಗದಲ್ಲಿ ಗಾಯಗೊಳಿಸಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇತ್ತಿಚ್ಚಿಗೆ ಕಾಡಾನೆ ಹಾವಳಿಯಿಂದಲೂ‌ ಹೈರಣಾಗಿದ್ದ ಗ್ರಾಮಸ್ಥರು ಇದೀಗ ಕರಡಿ ದಾಳಿಯಿಂದ ಆತಂಕಗೊಂಡಿದ್ದಾರೆ.

ಆಳಂದ ತಾಲೂಕಿನ ಕೆಲ ಗ್ರಾಮಗಳಲ್ಲಿ ಚಿರತೆ ಪ್ರತ್ಯಕ್ಷ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕೆಲ ಗ್ರಾಮಗಳಲ್ಲಿ ಚಿರತೆ ಗುರುತು ಪತ್ತೆಯಾಗಿವೆ. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಆಳಂದ ತಾಲೂಕಿನ ಬಂಗರಗಾ, ಸಾಲೆಗಾಂವ್‌ ಗ್ರಾಮಗಳಲ್ಲಿ ಚಿರತೆ ಓಡಾಡುವುದನ್ನ‌ ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಆಳಂದ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಚಿರತೆ ಪ್ರತ್ಯಕ್ಷವಾಗಿದೆ ಎಂದು ಜನರು ಹೇಳುತ್ತಿದ್ದಾರೆ.

ಇನ್ನಷ್ಟು ನಿಮ್ಮ  ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ