Hijab Row: ಕೋರ್ಟ್ ಆದೇಶ ನೋಡಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ -ಶಿಕ್ಷಣ ಸಚಿವ ಬಿ ಸಿ ನಾಗೇಶ್

ಪರಿಸ್ಥಿತಿ ನೋಡಿದರೆ ಈ ಘಟನೆಗಳ ಹಿಂದೆ ಕಾಣದ ಕೈಗಳು ಇದೆ ಅನ್ನೋ ಅನುಮಾನ ಮೂಡುತ್ತಿದೆ. ಇಷ್ಟು ಹಠವಾಗಿ ಹೆಣ್ಣುಮಕ್ಕಳು ವಿದ್ಯೆಗಿಂತ ಧರ್ಮವೇ ಮುಖ್ಯ ಎಂದು ಕುಳಿತಿದ್ದಾರೆ. ಇದನ್ನು ನೋಡಿದರೆ ದೇಶ ವಿಭಜನೆ ಮಾಡುವ ದುಷ್ಟ ಶಕ್ತಿಗಳ ಕೆಟ್ಟ ಮನಸುಗಳು ಈ ರೀತಿ ಗೊಂದಲ ಸೃಷ್ಟಿ ಮಾಡುತ್ತಿವೆ ಎನಿಸುತ್ತದೆ- ಶಿಕ್ಷಣ ಸಚಿವ ಬಿ ಸಿ ನಾಗೇಶ್

Hijab Row: ಕೋರ್ಟ್ ಆದೇಶ ನೋಡಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ -ಶಿಕ್ಷಣ ಸಚಿವ ಬಿ ಸಿ ನಾಗೇಶ್
ಶಿಕ್ಷಣ ಸಚಿವ ಬಿ ಸಿ ನಾಗೇಶ್ (ಸಂಗ್ರಹ ಚಿತ್ರ)
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 09, 2022 | 10:03 AM

ಬೆಂಗಳೂರು: ದಿಢೀರನೆ ಭುಗಿಲೆದ್ದ ಹಿಜಾಬ್​ ಬೇಡಿಕೆ (hijab row) ಬಿರುಗಾಳಿಯಂತೆ ಎಲ್ಲೆಡೆ ಚರ್ಚೆಗೆ ಆಸ್ಪದ ಕಲ್ಪಿಸಿದೆ. ಒಂದಷ್ಟು ವೈಮನಸ್ಸಿಗೂ ನೀರೆರೆದಿದೆ. ಈ ಮಧ್ಯೆ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದು, ಇಂದು ಅಥವಾ ನಾಳೆ ಕೋರ್ಟ್ (karnataka high court) ತನ್ನ ಮಹತ್ವದ ದೂರಗಾಮಿ ಆದೇಶ ನೀಡುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಟಿವಿ9 ಜೊತೆ ಮಾತನಾಡಿದ್ದು ಕೋರ್ಟ್ ಯಾವುದೇ ತೀರ್ಪು ಕೊಟ್ಟರು ಸರ್ಕಾರ ಮಾನ್ಯತೆ ಮಾಡುತ್ತದೆ. ಇದೇ ರೀತಿಯ ತೀರ್ಪು ಬರುತ್ತದೆ ಎಂದು ಹೇಳಲು ಆಗಲ್ಲ. ಕೋರ್ಟ್ ತೀರ್ಪು ನೋಡಿಕೊಂಡು ಸರ್ಕಾರ ಮುಂದಿನ ತೀರ್ಮಾನ ಮಾಡುತ್ತದೆ. ಯಾವುದೇ ತರಹದ ತೊಂದರೆ ಆಗದಂತೆ ಗೃಹ ಇಲಾಖೆ ಕ್ರಮ ತೆಗೆದುಕೊಂಡಿದ್ದೆ ಎಂದು (education minister bc nagesh) ಹೇಳಿದ್ದಾರೆ.

ರಾಜ್ಯದ ಕಾಲೇಜುಗಳ ಸ್ಥಿತಿಗತಿ ಬಗ್ಗೆ ಸಿಎಂ ಬಿಮ್ಮಾಯಿಗೆ ಮಾಹಿತಿ ನೀಡಿದ್ದೀವಿ. ಈಗಿನ ಪರಿಸ್ಥಿತಿ ನೋಡಿದರೆ ಈ ಘಟನೆಗಳ ಹಿಂದೆ ಕಾಣದ ಕೈಗಳು ಇದೆ ಅನ್ನೋ ಅನುಮಾನ ಮೂಡುತ್ತಿದೆ. ಇಷ್ಟು ಹಠವಾಗಿ ಹೆಣ್ಣುಮಕ್ಕಳು ವಿದ್ಯೆಗಿಂತ ಧರ್ಮವೇ ಮುಖ್ಯ ಎಂದು ಕುಳಿತಿದ್ದಾರೆ. ಇದನ್ನು ನೋಡಿದರೆ ದೇಶ ವಿಭಜನೆ ಮಾಡುವ ದುಷ್ಟ ಶಕ್ತಿಗಳ ಕೆಟ್ಟ ಮನಸುಗಳು ಈ ರೀತಿ ಗೊಂದಲ ಸೃಷ್ಟಿ ಮಾಡುತ್ತಿವೆ ಎಂದು ಅವರು ಗಂಭೀರವಾಗಿ ಹೇಳಿದರು.

ಈ ಮಧ್ಯೆ, ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಹಿನ್ನೆಲೆ ಸಿಎಂ ಬೊಮ್ಮಾಯಿ ಜತೆ ಎಜಿ ಪ್ರಭುಲಿಂಗ ನಾವದಗಿ ಇದೀಗತಾನೆ 40 ನಿಮಿಷ ಚರ್ಚೆ ನಡೆಸಿದ್ದಾರೆ. ಸರ್ಕಾರದ ವತಿಯಿಂದ ಕಾನೂನು ಹೋರಾಟದ ಬಗ್ಗೆ ಬೆಂಗಳೂರಿನ ಆರ್​.ಟಿ. ನಗರದ ಸಿಎಂ ನಿವಾಸದಲ್ಲಿ ಚರ್ಚೆ ನಡೆಸಿದ್ದಾರೆ. ಅದಕ್ಕೂ ಮುನ್ನ, ಸಿಎಂ ಬೊಮ್ಮಾಯಿ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರಾಥಮಿಕ & ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಉನ್ನತ ಅಧಿಕಾರಿಗಳು ಸಮಾಲೋಚನೆ ನಡೆಸಿದ್ದಾರೆ. ಸಚಿವರು ನಿನ್ನೆ ತಡರಾತ್ರಿಯೂ ಬಂದು ಸಿಎಂ ಜೊತೆ ಚರ್ಚೆ ನಡೆಸಿದ್ದರು.

ಇದನ್ನೂ ಓದಿ: ಮೃತಪಟ್ಟ ಗಂಡನ ನಕಲಿ ದಾಖಲೆ ನೀಡಿ, ಮೂರು ಕೋಟಿ ವಿಮೆ ಕ್ಲೈಮ್! ಪತ್ನಿಗಾಗಿ ಕೋರಮಂಗಲ ಪೊಲೀಸರಿಂದ ಹುಡುಕಾಟ

ಇದನ್ನೂ ಓದಿ: ಪಾಂಡವರ ರಾಜಧಾನಿ ಹಸ್ತಿನಾಪುರದಲ್ಲಿ ಜಯ ಸಾಧಿಸುವವರೇ ಉತ್ತರ ಪ್ರದೇಶದಲ್ಲಿ ಸದಾ ಅಧಿಕಾರಕ್ಕೆ ಬರುವುದು, ಇದು ನಿಜ್ಜಾ!

Published On - 9:50 am, Wed, 9 February 22

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ