ನಾನು ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ: ಸಚಿವ ಮಹದೇವಪ್ಪ ಘೋಷಣೆ!

ಸಚಿವ ಹೆಚ್.ಸಿ ಮಹದೇವಪ್ಪ ಅವರು ಹಿಂದೂ ಧರ್ಮದಲ್ಲಿನ ಜಾತಿಯತೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಧರ್ಮ ಸುಧಾರಣೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲಎಂದು ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಬೌದ್ಧ ಧರ್ಮದ ಬಗ್ಗೆ ಪ್ರಚಾರ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ನಾನು ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ: ಸಚಿವ ಮಹದೇವಪ್ಪ ಘೋಷಣೆ!
ಹೆಚ್​ಸಿ ಮಹದೇವಪ್ಪ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 14, 2024 | 3:12 PM

ಬೆಂಗಳೂರು, (ಅಕ್ಟೋಬರ್ 14): ಸಮಾಜ ಕಲ್ಯಾಣ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ ಅವರು ಬೌದ್ಧ ಧರ್ಮವನ್ನು ಸ್ವೀಕರಿಸುವುದಾಗಿ ಘೋಷಿಸಿದ್ದಾರೆ. ಇಂದು (ಅಕ್ಟೋಬರ್ 14) ಧಮ್ಮ ಚಕ್ರ ಪರಿವರ್ತನಾ ದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಶುಭಾಯಶ ಕೋರಿರುವ ಮಹದೇವಪ್ಪ ಅವರು, ಹಿಂದೂ ಧರ್ಮ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿದೆ. ಹಾಗಾಗಿ ಹಿಂದೂ ಧರ್ಮ ಸುಧಾರಣೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಹೆಚ್.ಸಿ ಮಹದೇವಪ್ಪ, ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಹೆಚ್.ಸಿ ಮಹಾದೇವಪ್ಪ, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ. ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ. ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ Star ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಮತ್ತು ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕೆಂದು ಬಯಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಹಿಂದೂ ಧರ್ಮ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿದೆ. ಹಾಗಾಗಿ ಹಿಂದೂ ಧರ್ಮ ಸುಧಾರಣೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ. ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ. ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ Star ಕಾಣುತ್ತಿಲ್ಲ ಎಂದು ಸಚಿವ ಹೆಚ್​ಸಿ ಮಹಾದೇವಪ್ಪ ಕಿರಿಕಾರಿದ್ದಾರೆ.

ತನ್ನ 3.5 ಲಕ್ಷ ಅನುಯಾಯಿಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದ ಧಮ್ಮ ಚಕ್ರ ಪರಿವರ್ತನಾ ದಿನದಂದು ಎಲ್ಲರಿಗೂ ನನ್ನ ಆತ್ಮೀಯ ಶುಭಾಶಯಗಳು ಎಂದು ಸಾಮಾಜಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮುಡಾ ಆರೋಪಿ ಸಿದ್ದರಾಮಯ್ಯ ಪ್ರಚೋದನಾಕಾರಿ ಭಾಷಣ ಮಾಡುತ್ತಿದ್ದಾರೆ: ಕೃಷ್ಣ
ಮುಡಾ ಆರೋಪಿ ಸಿದ್ದರಾಮಯ್ಯ ಪ್ರಚೋದನಾಕಾರಿ ಭಾಷಣ ಮಾಡುತ್ತಿದ್ದಾರೆ: ಕೃಷ್ಣ
ಮಧ್ಯಾಹ್ನವಾದರೂ ತುಮಕೂರು-ಶಿರಾ ಹೆದ್ದಾರಿಯಲ್ಲಿ ಕ್ಲಿಯರ್​ ಆಗದ ಟ್ರಾಫಿಕ್​​​
ಮಧ್ಯಾಹ್ನವಾದರೂ ತುಮಕೂರು-ಶಿರಾ ಹೆದ್ದಾರಿಯಲ್ಲಿ ಕ್ಲಿಯರ್​ ಆಗದ ಟ್ರಾಫಿಕ್​​​
ಸಂಡೂರು ಅಭ್ಯರ್ಥಿ ಆಯ್ಕೆ ಜಮೀರ್ ಅಹ್ಮದ್ ನೀಡುವ ಸಲಹೆ ಅಂತಿಮವಾಗುವ ಸಾಧ್ಯತೆ
ಸಂಡೂರು ಅಭ್ಯರ್ಥಿ ಆಯ್ಕೆ ಜಮೀರ್ ಅಹ್ಮದ್ ನೀಡುವ ಸಲಹೆ ಅಂತಿಮವಾಗುವ ಸಾಧ್ಯತೆ
ಸಿಎಂರನ್ನೂ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ
ಸಿಎಂರನ್ನೂ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ
ಮಳೆಯಿರಲಿ ಅಥವಾ ಬಿಸಿಲು; ಪ್ರೀ-ವೆಡ್ಡಿಂಗ್ ಶೂಟ್ ಮಾತ್ರ ಆಗಲೇಬೇಕು!
ಮಳೆಯಿರಲಿ ಅಥವಾ ಬಿಸಿಲು; ಪ್ರೀ-ವೆಡ್ಡಿಂಗ್ ಶೂಟ್ ಮಾತ್ರ ಆಗಲೇಬೇಕು!
ಮಳೆಗೆ ಲಕ್ಷದ್ವೀಪದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಕಾರಣವೇ?
ಮಳೆಗೆ ಲಕ್ಷದ್ವೀಪದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಕಾರಣವೇ?
ಮೈಸೂರು: ಮಹಿಳಾ ಪೊಲೀಸ್​ಗೆ ಮಡಿಲು ತುಂಬಿ ಸೀಮಂತ ಮಾಡಿದ ಪೊಲೀಸ್ ಸಿಬ್ಬಂದಿ
ಮೈಸೂರು: ಮಹಿಳಾ ಪೊಲೀಸ್​ಗೆ ಮಡಿಲು ತುಂಬಿ ಸೀಮಂತ ಮಾಡಿದ ಪೊಲೀಸ್ ಸಿಬ್ಬಂದಿ
ಸ್ಪರ್ಧಿಗಳ ವರ್ತನೆಗೆ, ಉಡಾಫೆತನಕ್ಕೆ ಬೇಸತ್ತ ಬಿಗ್ ಬಾಸ್
ಸ್ಪರ್ಧಿಗಳ ವರ್ತನೆಗೆ, ಉಡಾಫೆತನಕ್ಕೆ ಬೇಸತ್ತ ಬಿಗ್ ಬಾಸ್
ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಸೈಕಲ್ ಏರಿ ಹೊರಟ ಕೋಲಾರ ಯುವಕರು
ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಸೈಕಲ್ ಏರಿ ಹೊರಟ ಕೋಲಾರ ಯುವಕರು
ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಪ್ಯಾರಾಗ್ಲೈಡಿಂಗ್ ಆರಂಭ
ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಪ್ಯಾರಾಗ್ಲೈಡಿಂಗ್ ಆರಂಭ