ಕುಂಟು ನೆಪ ಒಡ್ಡಿ ಮನೆಯಿಂದ ಹೊರಬಂದರೆ ಬಂಧಿಸುತ್ತೇವೆ; ಬೆಂಗಳೂರು ಪೊಲೀಸ್ ಆಯುಕ್ತ ಕಮಲ್‌ ಪಂತ್

|

Updated on: Apr 23, 2021 | 6:01 PM

ಸ್ವಿಗ್ಗಿ, ಜೊಮ್ಯಾಟೊ ಟಿ ಶರ್ಟ್​ಗಳು ದುರ್ಬಳಕೆಯಾಗುತ್ತಿವೆ. ಸ್ವಿಗ್ಗಿ, ಜೊಮ್ಯಾಟೊಗೆ ಸಂಬಂಧಿಸದವರು ಟಿ ಶರ್ಟ್‌ ಬಳಸಿ ಹೊರಗೆ ಬಂದರೆ ಕೂಡಲೇ ಬಂಧಿಸಲಾಗುವುದು; ಪೊಲೀಸ್ ಆಯುಕ್ತ ಕಮಲ್ ಪಂಥ್

ಕುಂಟು ನೆಪ ಒಡ್ಡಿ ಮನೆಯಿಂದ ಹೊರಬಂದರೆ ಬಂಧಿಸುತ್ತೇವೆ; ಬೆಂಗಳೂರು ಪೊಲೀಸ್ ಆಯುಕ್ತ ಕಮಲ್‌ ಪಂತ್
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
Follow us on

ಬೆಂಗಳೂರು: ಇಂದು ರಾತ್ರಿಯಿಂದ ಕರ್ಫ್ಯೂ ಇರುವ ಕಾರಣ ಕುಂಟು ನೆಪ ಹೇಳಿಕೊಂಡು ಹೊರಬಂದರೆ ಬಂಧಿಸುತ್ತೇವೆ. ಅನಗತ್ಯವಾಗಿ ವಾಹನ ರಸ್ತೆಗಿಳಿಸಿದರೆ ಪ್ರಕರಣ ದಾಖಲಿಸುತ್ತೇವೆ. ವಾರಾಂತ್ಯದ ಕರ್ಫ್ಯೂಗೆ ಬೆಂಗಳೂರಿನ ಜನತೆ ಸಹಕರಿಸಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್‌ ಪಂತ್​ ಮನವಿಪೂರ್ವಕ ಎಚ್ಚರಿಕೆ ನೀಡಿದ್ದಾರೆ. ರಾತ್ರಿ 9ರಿಂದ ಯಾರೂ ಮನೆಯಿಂದ ಹೊರಗೆ ಬರುವಂತಿಲ್ಲ. ಸ್ವಿಗ್ಗಿ, ಜೊಮ್ಯಾಟೊ ಟಿ ಶರ್ಟ್​ಗಳು ದುರ್ಬಳಕೆಯಾಗುತ್ತಿವೆ. ಸ್ವಿಗ್ಗಿ, ಜೊಮ್ಯಾಟೊಗೆ ಸಂಬಂಧಿಸದವರು ಟಿ ಶರ್ಟ್‌ ಬಳಸಿ ಹೊರಗೆ ಬಂದರೆ ಕೂಡಲೇ ಬಂಧಿಸಲಾಗುವುದು. ಅನುಮತಿ ಪಡೆದಿರುವವರು ಕೂಡ ಅನಗತ್ಯವಾಗಿ ಓಡಾಡದಿರಿ ಎಂದು ಅವರು ಮಾಧ್ಯಮಗಳ ಮೂಲಕ ನಾಗರಿಕರಿಗೆ ತಿಳಿಸಿದರು. 

ಮದುವೆಗೆ ಅನುಮತಿ ಪಡೆದವರು ರಾತ್ರಿ 9ರ ಒಳಗೆ ಕಲ್ಯಾಣ ಮಂಟಪ ಸೇರಿಕೊಳ್ಳಬೇಕು. ವೈದ್ಯಕೀಯ ತುರ್ತು ಸೇವೆಗಾಗಿ ಸಂಖ್ಯೆ 100ಕ್ಕೆ ಕರೆ ಮಾಡಬಹುದು. ತೊಂದರೆಗೀಡಾದವರಿಗೆ ಪೊಲೀಸರಿಂದ ಅವಶ್ಯವಾಗಿ ಸಹಕಾರ ಸಿಗುತ್ತದೆ. ಸಹಾಯಕ್ಕಾಗಿ ಸ್ವಯಂ ಸೇವಕರನ್ನು ನೇಮಿಸಿಕೊಳ್ಳಲಾಗಿದೆ. ಎಂದು ಅವರು ತಿಳಿಸಿದರು.

ವಾರಾಂತ್ಯದ ಕರ್ಫ್ಯೂ ಇಂದಿನಿಂದ ಆರಂಭವಾಗುವ ಕಾರಣ ತಮ್ಮ ಸ್ವಂತ ಊರುಗಳತ್ತ ಬೆಂಗಳೂರಿನಿಂದ ನೂರಾರು ಜನರು ತೆರಳುತ್ತಿದ್ದಾರೆ. ಹೀಗಾಗಿ ತುಮಕೂರು ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ತೆರಳುವ ನೆಲಮಂಗಲ ಬಳಿಯ ನವಯುಗ ಟೋಲ್​​ ಬಳಿ ವಾಹನ ದಟ್ಟಣೆ ಉಂಟಾಗಿದೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(Will arrest one who came outside without any reason in night curfew warns Bangalore Police Commissioner Kamal Pant)