ಸಂಸತ್ ಭವನ ಉದ್ಘಾಟನೆಗೆ ಹೋಗುವೆ, ಹೋಗದೆ ಇರುವುದಕ್ಕೆ ಅದೇನು ಬಿಜೆಪಿ, ಆರೆಸ್ಸೆಸ್ ಕಚೇರಿಯೇ?: ಹೆಚ್.ಡಿ.ದೇವೇಗೌಡ

ಬಿಜೆಪಿಯನ್ನು ರಾಜಕೀಯವಾಗಿ ವಿರೋಧ ಮಾಡಲಿಕ್ಕೆ ನನ್ನಲ್ಲಿ ಅನೇಕ ಕಾರಣಗಳಿವೆ. ಆದರೆ, ಸಂಸತ್ ಭವನ ಉದ್ಘಾಟನೆ ವಿಷಯದಲ್ಲಿ ರಾಜಕೀಯ ತರುವುದು ನನಗೆ ಇಷ್ಟವಿಲ್ಲ. ನಾನು ಸಂಸತ್ತಿನ ಎರಡು ಸದನಗಳಿಗೆ ಆಯ್ಕೆಯಾಗಿದ್ದೇನೆ. ಅಲ್ಲಿ ಸಾಂವಿಧಾನಿಕ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ, ಈಗಲೂ ಸದಸ್ಯನಾಗಿದ್ದೇನೆ ಎಂದ ದೇವೇಗೌಡ

ಸಂಸತ್ ಭವನ ಉದ್ಘಾಟನೆಗೆ ಹೋಗುವೆ, ಹೋಗದೆ ಇರುವುದಕ್ಕೆ ಅದೇನು ಬಿಜೆಪಿ, ಆರೆಸ್ಸೆಸ್ ಕಚೇರಿಯೇ?: ಹೆಚ್.ಡಿ.ದೇವೇಗೌಡ
ದೇವೇಗೌಡ
Follow us
ರಶ್ಮಿ ಕಲ್ಲಕಟ್ಟ
|

Updated on:May 25, 2023 | 7:54 PM

ಬೆಂಗಳೂರು: ಸಂಸತ್ ಭವನದ (New Parliament Building) ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹಾಜರಾಗುತ್ತಿದ್ದೇನೆ. ಅದು ದೇಶದ ಆಸ್ತಿ. ಯಾರೊಬ್ಬರ ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದ್ದು ಅದಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (HD Deve Gowda)ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ದೇವೇಗೌಡರು ಅದು ಯಾರ ವೈಯಕ್ತಿಕ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ ಎಂದಿದ್ದಾರೆ.ಆ ಭವ್ಯ ಕಟ್ಟಡ ದೇಶದ ಜನರ ತೆರಿಗೆ ಹಣದಿಂದ ನಿರ್ಮಾಣವಾಗಿದೆ. ಅದು ದೇಶಕ್ಕೆ ಸೇರಿದ್ದು. ಅದು ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ. ಸಂಸತ್ ಭವನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಓರ್ವ ಮಾಜಿ ಪ್ರಧಾನಮಂತ್ರಿಯಾಗಿ, ದೇಶದ ಪ್ರಜೆಯಾಗಿ ಭಾಗಿಯಾಗುತ್ತಿದ್ದೇನೆ.

ಬಿಜೆಪಿಯನ್ನು ರಾಜಕೀಯವಾಗಿ ವಿರೋಧ ಮಾಡಲಿಕ್ಕೆ ನನ್ನಲ್ಲಿ ಅನೇಕ ಕಾರಣಗಳಿವೆ. ಆದರೆ, ಸಂಸತ್ ಭವನ ಉದ್ಘಾಟನೆ ವಿಷಯದಲ್ಲಿ ರಾಜಕೀಯ ತರುವುದು ನನಗೆ ಇಷ್ಟವಿಲ್ಲ. ನಾನು ಸಂಸತ್ತಿನ ಎರಡು ಸದನಗಳಿಗೆ ಆಯ್ಕೆಯಾಗಿದ್ದೇನೆ. ಅಲ್ಲಿ ಸಾಂವಿಧಾನಿಕ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ, ಈಗಲೂ ಸದಸ್ಯನಾಗಿದ್ದೇನೆ. ಸಂವಿಧಾನದ ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಿದ್ದೇನೆ. ಹೀಗಾಗಿ ಸಂವಿಧಾನದ ವಿಷಯದಲ್ಲಿ ನಾನು ರಾಜಕೀಯ ತರಲಾರೆ.

ಅನೇಕ ಪಕ್ಷಗಳು ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ. ಓರ್ವ ಮಾಜಿ ಪ್ರಧಾನಿಯಾಗಿ ನೀವು ಹೋಗುತ್ತೀರಾ? ಇಲ್ಲವಾ? ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಹೌದು, ನಾನು ಸಂವಿಧಾನಕ್ಕೆ ಬದ್ಧನಾಗಿದ್ದೇನೆ. ಅದಕ್ಕಾಗಿ ಸಂಸತ್ ಭವನ ಉದ್ಘಾಟನೆಗೆ ಹೋಗುತ್ತೇನೆ ಎಂದು ಅವರಿಗೆ ಹೇಳಲು ಬಯಸುತ್ತೇನೆ ಎಂದಿದ್ದಾರೆ ದೇವೇಗೌಡ.

ನಾನು ಬದುಕಿರುವಷ್ಟು ಕಾಲವೂ ಪಕ್ಷಕ್ಕಾಗಿಯೇ ಬದುಕುತ್ತೇನೆ

ಪಕ್ಷಕ್ಕಾಗಿ ನನ್ನ ಜೀವ ಸವೆಸಿದ್ದೇನೆ. ನಾನು ಬದುಕಿರುವಷ್ಟು ಕಾಲವೂ ಪಕ್ಷಕ್ಕಾಗಿಯೇ ಬದುಕುತ್ತೇನೆ. ನನ್ನ ಕೊನೆ ಉಸಿರು ಇರುವ ತನಕ ನಾನು ಪಕ್ಷಕ್ಕೇ ಮೀಸಲು ಎಂದು ಹೆಚ್.ಡಿ.ದೇವೇಗೌಡ ಅವರು ಭಾವುಕರಾಗಿ ನುಡಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಸೋತಿದೆ ಎಂಬುದಕ್ಕೆ ನನಗೆ ಬಹಳ ನೋವಿದೆ. ಅದೇ ನೋವಿನಿಂದ ಕಾಲ ದೂಡಲು ಸಾಧ್ಯವೇ? ಪುಟಿದೆದ್ದು ಪಕ್ಷ ಕಟ್ಟಬೇಕು, ಅಧಿಕಾರಕ್ಕೆ ಬರಲು ಶ್ರಮಿಸಬೇಕು.

ಸೋತಿದ್ದಕ್ಕೆ ಪ್ರಾಮಾಣಿಕವಾಗಿ ಕಾರಣಗಳನ್ನು ಹುಡುಕೋಣ. ಅವುಗಳಿಗೆ ಪರಿಹಾರಗಳನ್ನು ಕಂಡು ಹಿಡಿಯೋಣ. 1989ರಲ್ಲಿ ನಮ್ಮ ಪಕ್ಷ ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿತ್ತು. ಅದಾದ ಮೇಲೆ ಐದು ವರ್ಷಗಳ ನಂತರ ನಮ್ಮ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂತು. ನಾನೇ ಮುಖ್ಯಮಂತ್ರಿ ಆದೆ. ಆಮೇಲೆ ಪ್ರಧಾನಿಯೂ ಆದೆ. ಜನರ ಆಶೀರ್ವಾದದಿಂದ ಅದು ಸಾಧ್ಯವಾಯಿತು.

ಸೋತಾಗ ನಿರಾಶೆ, ನೋವು ಸಹಜ. ನಾನು ಈ ಎಲ್ಲಾ ಹಂತಗಳನ್ನು ದಾಟಿಕೊಂಡು ಮುಂದೆ ಬಂದಿದ್ದೇನೆ. ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ಈ ಪಕ್ಷವನ್ನು ಉಳಿಸುವ ಕೆಲಸ ನಾನು ಮಾಡಿಯೇ ಮಾಡುತ್ತೇನೆ ಎಂದು ಅವರು ಹೇಳಿದರು.ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ತಾಲೂಕು, ಜಿಲ್ಲಾ ಘಟಕಗಳ ಅಧ್ಯಕ್ಷರು ಸಭೆಯಲ್ಲಿ ಹಾಜರಿದ್ದರು.

ಇದನ್ನೂ ಓದಿ: ಚುನಾವಣೆಯಲ್ಲಿ ಗೆಲ್ಲುವುದು ಹೇಗೆ? ಹೆಚ್​ಡಿ ಕುಮಾರಸ್ವಾಮಿಗೆ ಗುಟ್ಟು ಹೇಳಿದ ಹೆಚ್​​ಡಿ ದೇವೇಗೌಡ

ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಭಾಗಿಯಾಗುವ ಪಕ್ಷಗಳು

1. ಬಿಜೆಪಿ

2. ಶಿವಸೇನಾ (ಶಿಂಧೆ ಬಣ)

3. ನ್ಯಾಷನಲ್ ಪೀಪಲ್ಸ್ ಪಾರ್ಟಿ, ಮೇಘಾಲಯ

4. ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ

5. ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ

6. ಜನ್-ನಾಯಕ್ ಪಕ್ಷ

7. ಎಐಡಿಎಂಕೆ

8.ಐಎಂಕೆಎಂಕೆ

9. ಎಜೆಎಸ್​​ಯು

10. ಆರ್​ಪಿಐ

11. ಮಿಜೋ ನ್ಯಾಷನಲ್ ಫ್ರಂಟ್

12. ತಮಿಳು ಮಾನಿಲ ಕಾಂಗ್ರೆಸ್

13. ಐಟಿಎಫ್​ಟಿ (ತ್ರಿಪುರ)

14. ಬೋಡೋ ಪೀಪಲ್ಸ್ ಪಾರ್ಟಿ

15. ಪಾಟ್ಟಾಲಿ ಮಕ್ಕಳ್ ಕಚ್ಚಿ

16. ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ

17. ಅಪ್ನಾ ದಳ

18. ಅಸ್ಸಾಂ ಗನ್ ಪರಿಷತ್

ಎನ್‌ಡಿಎ ಭಾಗವಲ್ಲದ ಪಕ್ಷಗಳು

1. ಲೋಕ ಜನಶಕ್ತಿ ಪಕ್ಷ (ಪಾಸ್ವಾನ್)

2. ಬಿಜೆಡಿ

3.ಬಿಎಸ್​​ಪಿ

4. ಟಿಡಿಪಿ

5. ವೈಎಸ್​​ಆರ್​​ಸಿಪಿ

6. ಅಕಾಲಿದಳ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:34 pm, Thu, 25 May 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ