AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಹುಕ್ಕಾ ಬಾರ್‌ ನಿಷೇಧಕ್ಕೆ ಕ್ರಮ, ಧೂಮಪಾನದ ವಯಸ್ಸು 21 ವರ್ಷಕ್ಕೆ ಹೆಚ್ಚಿಸಲಾಗುವುದು: ದಿನೇಶ್ ಗುಂಡೂರಾವ್

ಕರ್ನಾಟಕದಲ್ಲಿ ಹುಕ್ಕಾ ಬಾರ್‌ಗಳನ್ನು ನಿಷೇಧಿಸಲಾಗುವುದು. ಇದರ ಜೊತೆಗೆ ತಂಬಾಕು ಉತ್ಪನ್ನಗಳನ್ನು ಖರೀದಿ ಮತ್ತು ಧೂಮಪಾನದ ಕಾನೂನುಬದ್ಧ ವಯಸ್ಸನ್ನು 18 ರಿಂದ 21ಕ್ಕೆ ಏರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ಬಿ ನಾಗೇಂದ್ರ ನೇತೃತ್ವದಲ್ಲಿ ನಡೆದ ಆರೋಗ್ಯ ಇಲಾಖೆ ಹಾಗೂ ಕ್ರೀಡಾ ಮತ್ತು ಯುವಜನ ಇಲಾಖೆ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕರ್ನಾಟಕದಲ್ಲಿ ಹುಕ್ಕಾ ಬಾರ್‌ ನಿಷೇಧಕ್ಕೆ ಕ್ರಮ, ಧೂಮಪಾನದ ವಯಸ್ಸು 21 ವರ್ಷಕ್ಕೆ ಹೆಚ್ಚಿಸಲಾಗುವುದು: ದಿನೇಶ್ ಗುಂಡೂರಾವ್
ಕರ್ನಾಟಕದಲ್ಲಿ ಹುಕ್ಕಾ ಬಾರ್‌ ನಿಷೇಧಿಸಲಾಗುವುದು ಎಂದು ಹೇಳಿದ ಸಚಿವ ದಿನೇಶ್ ಗುಂಡೂರಾವ್ (ಸಾಂದರ್ಭಿಕ ಚಿತ್ರ)
Rakesh Nayak Manchi
|

Updated on: Sep 19, 2023 | 8:02 PM

Share

ಬೆಂಗಳೂರು, ಸೆ.19: ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ಹುಕ್ಕಾ ಬಾರ್‌ಗಳನ್ನು (Hookah Bars) ನಿಷೇಧಿಸಲು ಮತ್ತು ತಂಬಾಕು ಉತ್ಪನ್ನಗಳನ್ನು ಖರೀದಿಸುವ ಮತ್ತು ಧೂಮಪಾನದ ಕಾನೂನುಬದ್ಧ ವಯಸ್ಸನ್ನು 21 ವರ್ಷಕ್ಕೆ ಹೆಚ್ಚಿಸಲು ಯೋಜಿಸಿದೆ. ತಂಬಾಕು ಕಾಯ್ದೆಗೆ ತಿದ್ದುಪಡಿ ತಂದು ಬದಲಾವಣೆ ತರಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ. ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಹಾಗೂ ಕ್ರೀಡಾ ಮತ್ತು ಯುವಜನ ಇಲಾಖೆಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದ ಮುಂಬರುವ ಪೀಳಿಗೆಯನ್ನು ರಕ್ಷಿಸಲು ಹುಕ್ಕಾ ಬಾರ್‌ಗಳನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು. 12 ರಿಂದ 25 ವರ್ಷ ವಯಸ್ಸಿನ ಜನರು ಹುಕ್ಕಾ ಬಾರ್‌ಗಳಿಗೆ ಭೇಟಿ ನೀಡುವುದನ್ನು ನಾವು ನೋಡುತ್ತಿದ್ದೇವೆ. ಅವರು ಹುಕ್ಕಾದಲ್ಲಿ ಯಾವ ಪದಾರ್ಥಗಳನ್ನು ಬಳಸುತ್ತಾರೆ ಎಂಬುದು ನಮಗೆ ಖಚಿತವಿಲ್ಲ. ಆದರೆ ಜನರು ಅದಕ್ಕೆ ವ್ಯಸನಿಯಾಗಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಹರಿಪ್ರಸಾದ್ ಮಾತು ಒಬ್ಬ ಪ್ರಬುದ್ಧ ರಾಜಕಾರಣಿಗೆ ಶೋಭೆ ನೀಡುವುದಿಲ್ಲ: ದಿನೇಶ್ ಗುಂಡೂರಾವ್

ವೈದ್ಯರ ವರದಿ ಪ್ರಕಾರ, 35 ರಿಂದ 40 ನಿಮಿಷಗಳ ಕಾಲ ಹುಕ್ಕಾ ಸೇದುವುದು 100 ರಿಂದ 150 ಸಿಗರೇಟ್ ಸೇದುವುದಕ್ಕೆ ಸಮ ಎಂದು ಕ್ರೀಡಾ ಮತ್ತು ಯುವಜನ ಇಲಾಖೆ ಸಚಿವ ಬಿ ನಾಗೇಂದ್ರ ಹೇಳಿದ್ದಾರೆ.

ತಂಬಾಕು ಉತ್ಪನ್ನಗಳನ್ನು ಖರೀದಿಸಲು ಮತ್ತು ಬಳಸಲು ಕಾನೂನುಬದ್ಧ ವಯಸ್ಸನ್ನು 21 ವರ್ಷಕ್ಕೆ ಹೆಚ್ಚಿಸಲು ತಂಬಾಕು ಕಾಯಿದೆಗೆ ಕಾನೂನು ತಿದ್ದುಪಡಿಗಳನ್ನು ಮಾಡಲಾಗುವುದು ಎಂದು ಆರೋಗ್ಯ ಸಚಿವರು ಹೇಳಿದರು. ನಿಷೇಧದ ನಿರ್ಧಾರವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಪೊಲೀಸರು ತೊಡಗಿಸಿಕೊಳ್ಳುತ್ತಾರೆ ಎಂದು ಸಚಿವರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ