AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂಗಳ ಜೊತೆಗೆ ನರೇಂದ್ರ ಮೋದಿ ಸಭೆ: ಲಸಿಕೆಗೆ ವಯೋಮಿತಿ ಇಳಿಸಲು ಸಭೆಯಲ್ಲಿ ಒತ್ತಾಯ

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸರ್ಕಾರ ಮತ್ತು ಅಧಿಕಾರಿಗಳು ಮನೆಯಲ್ಲಿ ಕುಳಿತು ಶೇಕಡಾ 8ರಷ್ಟು ವೇತನ ಹೆಚ್ಚಳದ ಕುರಿತು ಮಾತನಾಡುತ್ತಾರೆ. ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಳ್ಳಬೇಕು ಎಂದರು.

ಸಿಎಂಗಳ ಜೊತೆಗೆ ನರೇಂದ್ರ ಮೋದಿ ಸಭೆ: ಲಸಿಕೆಗೆ ವಯೋಮಿತಿ ಇಳಿಸಲು ಸಭೆಯಲ್ಲಿ ಒತ್ತಾಯ
ಪ್ರಧಾನ ಮಂತ್ರಿ ನರೇಂದ್ರ ಮೋದಿ
Digi Tech Desk
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Apr 08, 2021 | 7:36 PM

Share

ದೆಹಲಿ: ದೇಶದಲ್ಲಿ ದಿನೇದಿನೆ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದ ಎಲ್ಲಾ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸುತ್ತಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ವಿವಿಧ ರಾಜ್ಯಗಳ ಪರಿಸ್ಥಿತಿ ಅವಲೋಕಿಸಿ, ಮುಖ್ಯಮಂತ್ರಿಗಳ ಅಭಿಪ್ರಾಯ ತಿಳಿದುಕೊಳ್ಳುತ್ತಿದ್ದಾರೆ. ಸಭೆಯ ನಂತರ, ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಸೋಂಕು ನಿಯಂತ್ರಣಕ್ಕೆ ಹೊಸ ಕ್ರಮಗಳನ್ನು ಘೋಷಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಮುಖ್ಯಮಂತ್ರಿಗಳ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಮಾತನಾಡುತ್ತಿದ್ದಾರೆ. ಕೋವಿಡ್ 2ನೇ ಅಲೆಯನ್ನು ನಿಯಂತ್ರಣಕ್ಕೆ ತರುವ ಬಗ್ಗೆ ಅಮಿತ್ ಶಾ ವಿಷಯ ಮಂಡನೆ ಆರಂಭಿಸಿದರು. ಸಭೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಇಲಾಖೆಯ ಸಚಿವ ಡಾ.ಕೆ.ಸುಧಾಕರ್ ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದಾರೆ. ಸ್ವಲ್ಪ ಯಾಮಾರಿದ್ರೂ ಪರಿಸ್ಥಿತಿ ಕೈಮೀರಲಿದೆ ಎಂದು ಎಚ್ಚರಿಸಿದರು. ಸಭೆಯಲ್ಲಿ ಮಾತನಾಡಿದ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಲಸಿಕೆ ನೀಡಲು ನಿಗದಿಪಡಿಸಿರುವ ವಯೋಮಿತಿಯನ್ನು 45 ವರ್ಷಕ್ಕಿಂತಲೂ ಕಡಿಮೆ ಮಾಡುವಂತೆ ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳ‌ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಹಲವು ರಾಜ್ಯಗಳಲ್ಲಿ ನಿರ್ಬಂಧ ಜಾರಿ ಮಹಾರಾಷ್ಟ್ರ, ಒಡಿಶಾ, ಛತ್ತೀಸಗಡ, ಮಧ್ಯ ಪ್ರದೇಶ ಸೇರಿದಂತೆ ಭಾರತದ ವಿವಿಧೆಡೆ ಕೊರೊನಾ ಸೋಂಕು ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿವೆ. ಕೊರೊನಾ ಸೋಂಕು ಹರಡುವ ವೇಗಕ್ಕೆ ತಡೆಯೊಡ್ಡುವ ಉದ್ದೇಶದಿಂದ ದೇಶದ ಹಲವು ರಾಜ್ಯಗಳಲ್ಲಿ ನಿರ್ಬಂಧ ಜಾರಿಗೊಳಿಸಿ ರಾಜ್ಯ ಸರ್ಕಾರಗಳು ಆದೇಶ ಹೊರಡಿಸಿವೆ. ದೇಶದ ಕೊರೊನಾ ಹಾಟ್​ಸ್ಪಾಟ್ ಆಗಿ ಹೊರಹೊಮ್ಮಿರುವ ಛತ್ತೀಸಗಡದ ರಾಜಧಾನಿ ರಾಯಪುರದಲ್ಲಿ ಏಪ್ರಿಲ್ 9ರಿಂದ 19ರವರೆಗೆ 10 ದಿನಗಳ ಅವಧಿಗೆ ಸಂಪೂರ್ಣ ಲಾಕ್​ಡೌನ್ ಮಾಡಲು ಅಲ್ಲಿನ ರಾಜ್ಯ ಸರ್ಕಾರ ನಿರ್ಧರಿಸಿದೆ.

ಒಡಿಶಾದ ಸುಂದರಗಡ, ಬಾರಾಗಡ, ಝುರ್ಸುಗಡ, ಸಾಂಬಾಲ್​ಪುರ, ಬಾಲಂಗೀರ್, ನುಪಾದ, ಕಾಳಹಂದಿ, ಮಲ್ಕಾನ್​ಗಿರಿ, ಕೊರಾಪುಟ್ ಮತ್ತು ನಬರಂಗ್​ಪುರ ಜಿಲ್ಲೆಗಳಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಮಧ್ಯಪ್ರದೇಶದ ನಗರಗಳಲ್ಲಿ ಭಾನುವಾರ ನೈಟ್​ಕರ್ಫ್ಯೂ ಮತ್ತು ಲಾಕ್​ಡೌನ್ ಘೋಷಿಸಲಾಗಿದೆ. ಛತ್ತೀಸಗಡಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಏಪ್ರಿಲ್ 30ರವರೆಗೆ ರಾಜ್ಯದಲ್ಲಿ ರಾಜಕೀಯ ಸಮಾವೇಶಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಇಡೀ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಸಲು ಪಂಜಾಬ್ ನಿರ್ಧರಿಸಿದೆ.

Published On - 6:24 pm, Thu, 8 April 21

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು