ಡ್ರಗ್ಸ್​ ಹಾವಳಿ ತಡೆಗಟ್ಟಲು ಟಾಸ್ಕ್​ ಫೋರ್ಸ್​ ರಚನೆ, ಹೊಸ ಕಾನೂನು ಜಾರಿಗೆ ನಿರ್ಧಾರ: ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಡ್ರಗ್ಸ್​ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರು ಮತ್ತು ಪೊಲೀಸ್​ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡ್ರಗ್ಸ್​ ಹಾವಳಿ ತಡೆಯಲು ತೆಗೆದುಕೊಳ್ಳಲಾಗುವ ಕ್ರಮಗಳ ಬಗ್ಗೆ ತಿಳಿಸಿದರು.

ಡ್ರಗ್ಸ್​ ಹಾವಳಿ ತಡೆಗಟ್ಟಲು ಟಾಸ್ಕ್​ ಫೋರ್ಸ್​ ರಚನೆ, ಹೊಸ ಕಾನೂನು ಜಾರಿಗೆ ನಿರ್ಧಾರ: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
Anil Kalkere
| Updated By: ವಿವೇಕ ಬಿರಾದಾರ

Updated on:Sep 18, 2024 | 2:48 PM

ಬೆಂಗಳೂರು, ಸೆಪ್ಟೆಂಬರ್​ 18: ಬೆಂಗಳೂರು (Bengaluru) ನಗರದಲ್ಲಿ ಡ್ರಗ್ಸ್ (Drugs) ಹಾವಳಿ ಹೆಚ್ಚಾಗಿದೆ. ಶೇಕಡಾ 50ರಷ್ಟು ಪ್ರಕರಣಗಳು ಬೆಂಗಳೂರು ನಗರದಲ್ಲಿ ದಾಖಲಾಗಿವೆ. ಮಂಗಳೂರಿನಲ್ಲಿ ಶೇ22 ರಷ್ಟು, ಬೇರೆ ಬೇರೆ ಜಿಲ್ಲೆಗಳಲ್ಲಿ‌ ಶೇ11 ರಷ್ಟು ಕೇಸ್​​ಗಳಿವೆ. ಡ್ರಗ್ಸ್​ ಹಾವಳಿ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚಿಸಲು ತೀರ್ಮಾನಿಸಿದ್ದೇವೆ. ಗೃಹ ಸಚಿವರು, ಆರೋಗ್ಯ, ವೈದ್ಯಕೀಯ, ನಗರಾಭಿವೃದ್ಧಿ, ಐಟಿಬಿಟಿ ಇಲಾಖೆ ಸಚಿವರುಗಳು‌ ಈ ಟಾಸ್ಕ್​ ಫೋರ್ಸ್​​ನ ಸದಸ್ಯರಾಗಿರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡ್ರಗ್ಸ್​ ಹಾವಳಿ ತಡೆಗಟ್ಟಲು ಗೃಹ ಸಚಿವರು, ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು, ಐಟಿಬಿಟಿ ಮತ್ತು ನಗರಾಭಿವೃದ್ಧಿ ಇಲಾಖೆ ಸಚಿವರು ಜೊತೆ‌ ಸಭೆ ನಡೆಸಿದೆ. ಸಭೆಯಲ್ಲಿ ಬೆಂಗಳೂರಿನ ಪೊಲೀಸ್ ಆಯುಕ್ತರು, ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು ಎಂದು ತಿಳಿಸಿದರು.

ಡ್ರಗ್ಸ್​ ತಡೆಗಟ್ಟಲು ಕಾನೂನಿನಲ್ಲಿ ತಿದ್ದುಪಡಿ ಅಥವಾ ಹೊಸ ಕಾನೂನು ಮಾಡುತ್ತೇವೆ. ಡ್ರಗ್ಸ್​ ಕೇಸ್​ನಲ್ಲಿ ಬಂಧನಕ್ಕೊಳಗಾದರೆ ಜಾಮೀನು ಸಿಗದಂತೆ ಮಾಡುತ್ತೇವೆ. ಡ್ರಗ್ಸ್​ ಸೇವನೆ ಮತ್ತು ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು‌ ಶಿಕ್ಷೆ ಆಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ಹುಬ್ಬಳ್ಳಿಯ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಸುಲಭವಾಗಿ ಸಿಗುತ್ತಿದೆ ಡ್ರಗ್ಸ್​, ಗಾಂಜಾ! ಈ ಕುರಿತು ವಿಶೇಷ ವರದಿ ಇಲ್ಲಿದೆ

ಡ್ರಗ್ಸ್​ ಹಾವಳಿ ತಡೆಗಟ್ಟಲು ರಾಜ್ಯ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಮಿಟಿ ಇದೆ. ಇದಕ್ಕೆ ಹೆಚ್​​ ಸಿಜಿ ಆಸ್ಪತ್ರೆ ಕ್ಯಾನರ್​ ತಜ್ಞ, ತಂಬಾಕು ನಿಯಂತ್ರಣ ಸಂಬಂಧಿತ ಉನ್ನತ ಮಟ್ಟದ ಸಮಿತಿ ಸದಸ್ಯ ಡಾ. ವಿಶಾಲ್​ ರಾವ್​ ಸದಸ್ಯರರಾಗಿದ್ದಾರೆ. ಇವರ ಅಭಿಪ್ರಾಯವನ್ನೂ ತೆಗೆಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಬೆಂಗಳೂರು ಪೂರ್ವದಲ್ಲಿ ಅತಿ ಡಗ್ಸ್​ ಪೆಡ್ಲೆರ್ಸ್​ ಇದ್ದಾರೆ. ಹೀಗಾಗಿ ಅಲ್ಲಿಂದ ಅತಿ‌ ಹೆಚ್ಚು ಡ್ರಗ್ಸ್​ ಸರಬರಾಜು ಆಗುತ್ತಿದೆ. ಡ್ರಗ್ಸ್​​​​ನಲ್ಲಿ‌ ಸಿಂಥೆಟಿಕ್ ಬಂದಿದೆ. ಇದೆಲ್ಲ ಪೊಲೀಸ್​ ಠಾಣೆಗಳಿಗೆ ಗೊತ್ತಿಲ್ಲದೆ ನಡೆಯುವುದಿಲ್ಲ. ಇವೆಲ್ಲದರ ಬಗ್ಗೆ ಪೊಲೀಸರಿಗೆ ಮಾಹಿತಿ‌ ಇದ್ದೇ ಇರುತ್ತೆ ಎಂದರು.

ಮೆಡಿಕಲ್‌ ಶಾಪ್​​ಗಳಲ್ಲೂ ಡ್ರಗ್ಸ್ ಸಿಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈಗಾಗಲೇ ಕೆಲ ಮೆಡಿಕಲ್ ಶಾಪ್​​ಗಳ ಲೈಸೆನ್ಸ್ ರದ್ದು ಮಾಡಿದ್ದೇವೆ. ಡ್ರಗ್ಸ್ ಇಲ್ಲ ಅಂತ ಹೇಳಲ್ಲ, ಕಡಿಮೆ ಮಾಡಬೇಕು ನಂತರ ತಡೆಗಟ್ಟಬೇಕು. 2023ರಲ್ಲಿ 123 ಅಂತರಾಷ್ಟ್ರೀಯ ಡ್ರಗ್ಸ್​ ಸರಬರಾಜುದಾರರನ್ನು ಬಂಧಿಸಲಾಗಿದೆ. 2024ರಲ್ಲಿ 8,018 ಡ್ರಗ್ಸ್ ಸೇವನೆ ಮಾಡುವವರನ್ನು ಬಂಧಿಸಲಾಗಿದೆ. ಒಡಿಶಾ ಹಾಗೂ ಆಂಧ್ರ ಪ್ರದೇಶದಿಂದ ಡ್ರಗ್ಸ್ ಪೂರೈಕೆ ಆಗುತ್ತಿದೆ. ಮೊದಲು ಕಡಿಮೆ ಮಾಡಬೇಕು, ನಂತರ ಸಂಪೂರ್ಣ ನಿಲ್ಲಿಸಬೇಕು ಎಂದು ಹೇಳಿದರು.

ಡ್ರಗ್ಸ್ ಹಾವಳಿಯಿಂದ ಅಪರಾಧ ಪ್ರಕರಣ ಹೆಚ್ಚಳ

ಡ್ರಗ್ಸ್​ ಸೇವನೆಯಿಂದ ಯುವ ಸಮೂಹ ಹಾಳಾಗುತ್ತಿದ್ದು, ಇದು ಸಮಾಜಕ್ಕೆ ಕಂಟಕ. ಡ್ರಗ್ಸ್ ತಡೆಗಟ್ಟಲು ಎನ್​ಜಿಒಗಳನ್ನು ಬಳಕೆ ಮಾಡಿಕೊಳ್ಳುತ್ತೇವೆ. ಡ್ರಗ್ಸ್ ತಡೆಗಟ್ಟಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಡ್ರಗ್ಸ್​ ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಡ್ರಗ್ಸ್ ಹಾವಳಿಯಿಂದ ಅಪರಾಧ ಪ್ರಕರಣ ಕೂಡ ಹೆಚ್ಚಾಗುತ್ತಿದೆ. ನಶೆಯಲ್ಲಿ ಚಾಕು ಇರಿತದಿಂದ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಡ್ರಗ್ಸ್ ಹಾವಳಿ ನಿಯಂತ್ರಿಸಲು ಟಾಸ್ಕ್​ಫೋರ್ಸ್​ ರಚನೆ ಮಾಡಲು ನಿರ್ಧರಿಸಿದ್ದೇವೆ. NCC, ಸ್ಕೌಡ್ಸ್ ಆ್ಯಂಡ್​ ಗೈಡ್ಸ್​ ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಜಾಗೃತಿ ಮೂಡಿಸಿ, ಡ್ರಗ್ಸ್​ ತಡೆಗಟ್ಟುವಲ್ಲಿ ಅವರು ಭಾಗಿಯಾಗುವಂತೆ ಮಾಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:19 pm, Wed, 18 September 24

ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ