ಕುಮಾರಸ್ವಾಮಿ ಕೇಂದ್ರ ಸಚಿವರಾಗುತ್ತಾರಾ, ರಾಜ್ಯದಿಂದ ಎಷ್ಟು ಮಂದಿಗೆ ಸಿಗಬಹುದು ಮೋದಿ ಸಂಪುಟದಲ್ಲಿ ಸ್ಥಾನ?

ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲು ದಿನಗಣನೆ ಆರಂಭವಾಗಿದೆ. ಇದೇ ವೇಳೆ, ಕರ್ನಾಟಕದಿಂದ ಯಾರಿಗೆಲ್ಲ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಸಿಗಬಹುದು ಎಂಬ ಚರ್ಚೆಯೂ ಜೋರಾಗಿದೆ. ಹೆಚ್​ಡಿ ಕುಮಾರಸ್ವಾಮಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹಾಗಾದರೆ, ಉಳಿದಂತೆ ರೇಸ್​​ನಲ್ಲಿರುವವರು ಯಾರು? ಇಲ್ಲಿದೆ ವಿವರ.

ಕುಮಾರಸ್ವಾಮಿ ಕೇಂದ್ರ ಸಚಿವರಾಗುತ್ತಾರಾ, ರಾಜ್ಯದಿಂದ ಎಷ್ಟು ಮಂದಿಗೆ ಸಿಗಬಹುದು ಮೋದಿ ಸಂಪುಟದಲ್ಲಿ ಸ್ಥಾನ?
ಕುಮಾರಸ್ವಾಮಿ
Follow us
Ganapathi Sharma
|

Updated on: Jun 06, 2024 | 8:04 AM

ಬೆಂಗಳೂರು, ಜೂನ್ 5: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಸರಳ ಬಹುಮತ ಗಳಿಸಿರುವ ಎನ್​ಡಿಎ (NDA) ಮೈತ್ರಿಕೂಟ ಕೇಂದ್ರದಲ್ಲಿ ಬಿಜೆಪಿ (BJP) ನೇತೃತ್ವದಲ್ಲಿ ಸರ್ಕಾರ ರಚಿಸುವುದು ಖಚಿತವಾಗಿದ್ದು, ನರೇಂದ್ರ ಮೋದಿ (Narendra Modi) ಮೂರನೇ ಬಾರಿಗೆ ಪ್ರಧಾನಿಯಾಗುವುದು ದೃಢಪಟ್ಟಿದೆ. ಇದೇ ವೇಳೆ, ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಯಾರಿಗೆಲ್ಲ ಅವಕಾಶ ಸಿಗಬಹುದು ಎಂಬ ಚರ್ಚೆಯೂ ಜೋರಾಗಿದೆ. ರಾಜ್ಯದಿಂದ ಪರಿಗಣಿಸಬಹುದಾದ ಕೆಲವು ಸಂಸದರಲ್ಲಿ ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಕೂಡ ಒಬ್ಬರಾಗಿರಬಹುದು ಎನ್ನಲಾಗುತ್ತಿದೆ.

ಈ ಮಧ್ಯೆ, ಬುಧವಾರ ಮಂಡ್ಯ ಸಂಸದರಾಗಿ ಆಯ್ಕೆಯಾಗಿರುವ ಕುಮಾರಸ್ವಾಮಿ, ತಮ್ಮ ಪಕ್ಷದ ರೈತ ಪರ ನಿಲುವಿಗೆ ಅನುಗುಣವಾಗಿ ದೇಶದ ಕೃಷಿ ಸಚಿವರಾಗಲು ಇಚ್ಛಿಸುವುದಾಗಿ ಸುಳಿವು ನೀಡಿದ್ದರು.

ಏನು ಹೇಳಿದ್ದರು ಕುಮಾರಸ್ವಾಮಿ?

ನನಗೆ ಕೃಷಿ ಪೋರ್ಟ್‌ಫೋಲಿಯೊದಲ್ಲಿ ಆಸಕ್ತಿ ಇದೆ. ಆದರೆ ಏನಾಗುತ್ತದೆ ಎಂದು ಕಾದು ನೋಡೋಣ. ರಾಷ್ಟ್ರೀಯ ಮಟ್ಟದ ಬಿಜೆಪಿ ನಾಯಕರಿಗೆ ರಾಜ್ಯದ ಹಿತದೃಷ್ಟಿಯಿಂದ ಏನು ಮಾಡಬೇಕೆಂಬುದರ ಬಗ್ಗೆ ಉತ್ತಮ ಆಲೋಚನೆ ಇದೆ ಮತ್ತು ಅದರ ಆಧಾರದ ಮೇಲೆ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದರು.

ಇನ್ನೂ ಕೆಲವು ಹಿರಿಯ ನಾಯಕರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಬಿಜೆಪಿಯಿಂದ ಎರಡನೇ ಮತ್ತು ಮೂರನೇ ಅವಧಿಗೆ ಮರು ಆಯ್ಕೆಯಾದ ಕೆಲವರು ಸಹ ರೇಸ್‌ನಲ್ಲಿದ್ದಾರೆ. ಇದರಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಸೇರಿದ್ದಾರೆ. ಇದಲ್ಲದೇ ಕೇಂದ್ರದ ಮಾಜಿ ಸಚಿವರಾದ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ ಹಾಗೂ ಮರು ಆಯ್ಕೆಯಾಗಿರುವ ಸಂಸದ ಬಿವೈ ರಾಘವೇಂದ್ರ ಅವರನ್ನು ಕೂಡ ಪಕ್ಷ ಕಡೆಗಣಿಸುವಂತಿಲ್ಲ ಎನ್ನಲಾಗಿದೆ.

ರಾಜ್ಯ ಬಿಜೆಪಿ ನಾಯಕರು ಹೇಳುವ ಪ್ರಕಾರ, ಕೇಂದ್ರ ಸಚಿವ ಸಂಪುಟಕ್ಕೆ ಕುಮಾರಸ್ವಾಮಿ ಸೇರಿದಂತೆ ಮೂವರು ಸಂಸದರಿಗೆ ಮಾತ್ರ ಅವಕಾಶವಿದೆ. ಬದಲಾದ ಪರಿಸ್ಥಿತಿಯಲ್ಲಿ ರಾಜ್ಯಕ್ಕೆ 3 ಕ್ಕಿಂತ ಹೆಚ್ಚು ಮಂತ್ರಿ ಸ್ಥಾನ ಸಿಗಬಹುದು ಎಂದು ನಾವು ಭಾವಿಸುವುದಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿರುವುದನ್ನು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ರಾಘವೇಂದ್ರ, ಶೆಟ್ಟರ್ ಮತ್ತು ಬೊಮ್ಮಾಯಿ ಅವರಲ್ಲಿ ಒಬ್ಬರನ್ನು ಲಿಂಗಾಯತ ಪ್ರಾತಿನಿಧ್ಯಕ್ಕೆ ಆಯ್ಕೆ ಮಾಡಬಹುದು ಎಂದು ಕೆಲವು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಒಕ್ಕಲಿಗ ವಿಚಾರಕ್ಕೆ ಬಂದರೆ ಕುಮಾರಸ್ವಾಮಿ ಅವರಿಗೆ ಸ್ಥಾನ ಸಿಗಲಿದೆ. ಒಕ್ಕಲಿಗ ಮಾತ್ರವಲ್ಲ, ಅವರು ಈಗ ಎನ್‌ಡಿಎಯ ಅಧಿಕೃತ ಮೈತ್ರಿಕೂಟದ ಪಾಲುದಾರ ಕೂಡ ಆಗಿದ್ದಾರೆ.

ಇದನ್ನೂ ಓದಿ: ರಾಜಕೀಯ ಬದ್ಧವೈರಿ ಕುಮಾರಸ್ವಾಮಿಗೆ ಅಭಿನಂದನೆ ತಿಳಿಸಿದ ಸುಮಲತಾ, ಕಾಂಗ್ರೆಸ್​ ಗ್ಯಾರಂಟಿಗಳಿಗೆ ಟಾಂಗ್

ಮತ್ತೊಂದೆಡೆ ರಾಜಕಾರಣದಲ್ಲಿ ಅನುಭವಿ ಅಲ್ಲದಿದ್ದರೂ ವೈದ್ಯಕೀಯ ಕ್ಷೇತ್ರದ ಆಡಳಿತ ಅನುಭವ, ಸೇವೆಯನ್ನು ಪರಿಗಣಿಸಿ ಡಾ. ಸಿಎನ್ ಮಂಜುನಾಥ್ ಅವರಿಗೂ ಸ್ಥಾನ ನೀಡುವ ಸಾಧ್ಯತೆ ಇದೆ. ಮಾಜಿ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಕೂಡ ರೇಸ್​ನಲ್ಲಿದ್ದಾರೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟುವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್