AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್? ತಮಿಳುನಾಡು ಮಾದರಿ ಶಿಕ್ಷಣ ನೀತಿ ಜಾರಿಗೆ ಒತ್ತಾಯ

ಖಾಸಗಿ ಶಾಲೆಗಳ ಅನಿಯಂತ್ರಿತ ಶುಲ್ಕ ಏರಿಕೆಯಿಂದ ಪೋಷಕರು ಕಂಗಾಲಾಗಿದ್ದು, ಕರ್ನಾಟಕದಲ್ಲಿ ಶಾಲಾ ಶುಲ್ಕ ನಿಯಂತ್ರಣ ಸಮಿತಿ ಜಾರಿಗೆ ಒತ್ತಾಯ ಹೆಚ್ಚಾಗಿದೆ. ನೆರೆಯ ತಮಿಳುನಾಡಿನ ಮಾದರಿಯಲ್ಲಿ ಸರ್ಕಾರವೇ ಶುಲ್ಕ ಮಿತಿಯನ್ನು ನಿಗದಿಪಡಿಸುವ ಕಾಯ್ದೆಯನ್ನು ರಾಜ್ಯದಲ್ಲಿಯೂ ಅಳವಡಿಸಿಕೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ. ಈ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಪೋಷಕರು ಭರವಸೆ ವ್ಯಕ್ತಪಡಿಸಿದ್ದಾರೆ.

ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್? ತಮಿಳುನಾಡು ಮಾದರಿ ಶಿಕ್ಷಣ ನೀತಿ ಜಾರಿಗೆ ಒತ್ತಾಯ
ತಮಿಳುನಾಡು ಮಾದರಿ ಶಿಕ್ಷಣ ನೀತಿ ಜಾರಿಗೆ ಒತ್ತಾಯImage Credit source: tv9
ವಿನಯ್​ ಕಾಶಪ್ಪನವರ್​
| Edited By: |

Updated on:Jan 30, 2026 | 8:55 AM

Share

ಬೆಂಗಳೂರು, ಜನವರಿ 30: ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕಿರುವ ಖಾಸಗಿ ಶಾಲೆಗಳು (Private Schools) ಶುಲ್ಕದ ಹೆಸರಲ್ಲಿ ಪೋಷಕರ ಕನಸುಗಳನ್ನು ನುಚ್ಚುನೂರು ಮಾಡುತ್ತಿವೆ ಎಂಬ ಆರೋಪ ಬಲವಾಗಿ ಕೇಳಿಬಂದಿದ್ದು, ಮನಸ್ಸಿಗೆ ಬಂದಂತೆ ಶುಲ್ಕ ಹೆಚ್ಚಿಸುತ್ತಿರುವ ಖಾಸಗಿ ಶಾಲೆಗಳಿಗೆ ಮೂಗುದಾರ ಹಾಕಲು ಸರ್ಕಾರಕ್ಕೆ ಆಗ್ರಹಿಸಲಾಗಿದೆ. ರಾಜ್ಯದಲ್ಲಿ ಶಾಲಾ ಶುಲ್ಕ ನಿಯಂತ್ರಣ ಕಮಿಟಿ ಜಾರಿ ಮಾಡುವಂತೆ ಪೋಷಕರು ದಶಕಗಳಿಂದ ಒತ್ತಾಯಿಸುತ್ತಿದ್ದಾರೆ. ಶಿಕ್ಷಣ ಇಲಾಖೆಯು ಈ ಖಾಸಗಿ ಶಾಲೆಗಳ ಅನಿಯಂತ್ರಿತ ಶುಲ್ಕಕ್ಕೆ ಬ್ರೇಕ್ ಹಾಕುವಲ್ಲಿ ವಿಫಲವಾಗಿದೆ ಎಂದು ಹೇಳಲಾಗಿದೆ.

ಈ ಮನವಿಗೆ ಪ್ರಸ್ತುತ ಸಚಿವ ಮಧು ಬಂಗಾರಪ್ಪ ಅವರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆಯಿದೆ ಎಂದು ಪೋಷಕರು ತಿಳಿಸಿದ್ದಾರೆ. ತಮಿಳುನಾಡು ಸರ್ಕಾರವು ಇತ್ತೀಚೆಗೆ ಶಾಲೆಗಳ ಶುಲ್ಕ ಸಂಗ್ರಹ ನಿಯಂತ್ರಣ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಿದ್ದು, ಖಾಸಗಿ ಶಾಲೆಗಳ ಅನಿಯಂತ್ರಿತ ಶುಲ್ಕ ಹೆಚ್ಚಳ ತಡೆಯಲು ಮತ್ತು ಪೋಷಕರಿಗೆ ಪರಿಹಾರ ನೀಡಲು ಈ ಕಾಯ್ದೆಯನ್ನು ಜಾರಿಗೊಳಿಸಿದೆ. ಇದೇ ಮಾದರಿಯನ್ನು ಕರ್ನಾಟಕದಲ್ಲಿಯೂ ಜಾರಿಗೆ ತರುವಂತೆ ಕೂಗು ಎದ್ದಿದೆ.

ತಮಿಳುನಾಡಿನ ಕಾಯ್ದೆಯಲ್ಲೇನಿದೆ?

ತಮಿಳುನಾಡಿನ ಕಾಯ್ದೆಯ ಪ್ರಕಾರ, ಸರ್ಕಾರವೇ ಖಾಸಗಿ ಶಾಲೆಗಳ ಶುಲ್ಕ ಮಿತಿಯನ್ನು ನಿಗದಿಪಡಿಸುತ್ತದೆ. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಏಳು ಜನರ ಸಮಿತಿ ರಚನೆಯಾಗಲಿದ್ದು, ಈ ಸಮಿತಿ ನಿಗದಿಪಡಿಸಿದ ಶುಲ್ಕವೇ ಎಲ್ಲಾ ಖಾಸಗಿ ಶಾಲೆಗಳಿಗೂ ಮೂರು ಶೈಕ್ಷಣಿಕ ವರ್ಷಗಳ ಅವಧಿಗೆ ಕಡ್ಡಾಯವಾಗಲಿದೆ.

ಖಾಸಗಿ ಶಾಲೆಗಳ ಒಕ್ಕೂಟದಿಂದ ತೀವ್ರ ವಿರೋಧ

ತಮಿಳುನಾಡು ಮಾದರಿ ಕಾಯ್ದೆಗೆ ಖಾಸಗಿ ಶಾಲೆಗಳ ಒಕ್ಕೂಟದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ರಾಜ್ಯದಲ್ಲೂ ಇದನ್ನು ಜಾರಿಗೆ ತಂದರೆ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡುವುದಾಗಿ ಅವರು ಹೇಳಿಕೊಂಡಿದ್ದಾರೆ. ಕೆಲವು ಖಾಸಗಿ ಶಾಲೆಗಳ ಪ್ರತಿನಿಧಿಗಳ ಪ್ರಕಾರ, ತಮಿಳುನಾಡು ಮಾದರಿ ಎಂದು ಕೆಲವರು ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ. ಈ ಕಾಯ್ದೆಯು ಕಾನೂನು ವಿರುದ್ಧವಾಗಿದ್ದು, ಸಂವಿಧಾನಾತ್ಮಕವಾಗಿಲ್ಲ ಎಂದು ಅವರು ವಾದಿಸಿದ್ದಾರೆ. ತಮಿಳುನಾಡಿನಲ್ಲಿಯೂ ‘ತ್ರೀ ಮ್ಯಾನ್ ಕಮಿಟಿ’ ರಚನೆಯಾಗಿ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಆ ಕಾಯ್ದೆಗೆ ನ್ಯಾಯಾಲಯದಿಂದ ಸ್ಟೇ (ತಡೆಯಾಜ್ಞೆ) ಕೂಡ ಇದ್ದು, ಅದು ಚಾಲ್ತಿಯಲ್ಲಿ ಇಲ್ಲ ಎಂದು ಹೇಳಲಾಗಿದೆ. ಖಾಸಗಿ ಶಾಲೆಗಳ ಒಕ್ಕೂಟವು ಈ ಕಾಯ್ದೆಗೆ ತಮ್ಮ ವಿರೋಧವಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ನೀಟ್ ಯುಜಿ ಪಾಸಾಗದೆಯೂ ನೀವು ವೈದ್ಯರಾಗಬಹುದು; ವಿವಿಧ ಕೋರ್ಸ್‌ಗಳ ವಿವರ ಇಲ್ಲಿದೆ

ಪೋಷಕರ ಹಿತಾಸಕ್ತಿ ಮತ್ತು ಖಾಸಗಿ ಶಾಲೆಗಳ ಹಿತಾಸಕ್ತಿಯ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಸರ್ಕಾರದ ಮುಂದಿರುವ ದೊಡ್ಡ ಸವಾಲಾಗಿದೆ. ನಮ್ಮ ರಾಜ್ಯ ಸರ್ಕಾರ ಈ ಕುರಿತು ಯಾವ ನಿರ್ಧಾರಕ್ಕೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:49 am, Fri, 30 January 26

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ