AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ: ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಘೋಷಿಸಿದ ಸಿಎಂ

ಬೆಂಗಳೂರು ನಮ್ಮ ಮೆಟ್ರೋಗೆ ಸಿಎಂ ಸಿದ್ದರಾಮಯ್ಯ ಹೊಸ ಹೆಸರು ಶಿಫಾರಸು ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ನಮ್ಮ ಮೆಟ್ರೋಗೆ "ಬಸವ ಮೆಟ್ರೋ" ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇನೆ. ಕೇಂದ್ರ ಸರ್ಕಾರವು ಅನುಮತಿ ನೀಡಿದರೆ ಮುಂದಿನ ದಿನಗಳಲ್ಲಿ ಬಸವ ಮೆಟ್ರೋ ಎಂದಾಗಲಿದೆ ಎಂದಿದ್ದಾರೆ. ಅಲ್ಲದೇ ವರ್ಷ ವಚನ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿಯೂ ಘೋಷಣೆ ಮಾಡಿದ್ದಾರೆ.

ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ: ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಘೋಷಿಸಿದ ಸಿಎಂ
Namma Metro, Siddaramaiah
ರಮೇಶ್ ಬಿ. ಜವಳಗೇರಾ
|

Updated on:Oct 05, 2025 | 4:17 PM

Share

ಬೆಂಗಳೂರು, (ಅಕ್ಟೋಬರ್ 05): ಬೆಂಗಳೂರಿನ ನಮ್ಮ ಮೆಟ್ರೋಗೆ (Bengaluru Namma Metro) “ಬಸವ ಮೆಟ್ರೋ”  (Basava Metro)ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ  (Siddaramaiah)ಘೋಷಿಸಿದ್ದಾರೆ. ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಎಂ, ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಬಣ್ಣಿಸಿದರು. ಬಸವ ತತ್ವಗಳು ಸಂವಿಧಾನದ ಆಶಯಗಳೊಂದಿಗೆ ಹೊಂದಿಕೊಂಡಿವೆ. ಮುಂದಿನ ವರ್ಷ ವಚನ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿಯೂ ಭರವಸೆ ನೀಡಿದರು.

ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿದ್ಯದಲ್ಲಿ ಸಮುದಾಯದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿಯ ಸಮ್ಮುಖದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ ಎಂದರು.

ಇದನ್ನೂ ಓದಿ: ಮೆಟ್ರೋ ನಿಲ್ದಾಣಕ್ಕೆ ‘ಸೈಂಟ್ ಮೇರಿ’ ಹೆಸರು: ಕೇಂದ್ರಕ್ಕೆ‌ ಶಿಫಾರಸ್ಸು ಮಾಡ್ತೀನಿ ಎಂದ ಸಿದ್ದರಾಮಯ್ಯ

ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ.‌ ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು . ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ ನಂಬಿಕೆ-ಬದ್ದತೆ ಇಟ್ಟುಕೊಂಡಿದ್ದೀನಿ. ಅಂದಿಗಲ್ಲ- ಇಂದಿಗಲ್ಲ- ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದು ಹೇಳಿದರು.

ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ ಎಂದು ಹೇಳಿದರು.

ಜಾತಿಯಿಂದ ಯಾರೂ ಶ್ರೇಷ್ಠರಲ್ಲ. ಹಾಗೆಯೇ ಪ್ರತಿಭೆ, ಜ್ಞಾನ ಕೂಡ ಯಾವುದೇ ಒಂದು ಜಾತಿಯ ಸ್ವತ್ತು ಅಲ್ಲ. ನಾನು ಅರ್ಜಿ ಹಾಕಿಕೊಂಡು ಕುರುಬ ಜಾತಿಯಲ್ಲಿ ಹುಟ್ಟಿಲ್ಲ. ನಾನು ಶೂದ್ರ ಎನ್ನುವ ಕಾರಣಕ್ಕೆ ಶಿಕ್ಷಣ ಪಡೆಯುವ ಅರ್ಹತೆ ಇಲ್ಲ ಎನ್ನುವುದು ಪಟ್ಟಭದ್ರರ ಷಡ್ಯಂತ್ರ ಎಂದರು.

ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ. ಜಾತಿ ವ್ಯವಸ್ಥೆ, ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ. ಜಾತಿ-ವರ್ಗ ರಹಿತ ಮಾನವ ಸಮಾಜದ ನಿರ್ಮಾಣ ಬಸವಣ್ಣನವರ ಕನಸಾಗಿತ್ತು. ನಾವೆಲ್ಲರೂ ಮೊದಲು ಮನುಷ್ಯರು, ಬಳಿಕ ಭಾರತೀಯರು. ಹೀಗಾಗಿ ನಾವು ಮನುಷ್ಯ ನಿರ್ಮಿತ ಜಾತಿ, ಧರ್ಮದ, ಅಸಮಾನತೆಯ ತಾರತಮ್ಯಗಳನ್ನು ಸಹಿಸಬಾರದು, ಆಚರಿಸಬಾರದು ಎಂದು ಕರೆ ನೀಡಿದರು.

Published On - 4:14 pm, Sun, 5 October 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್