ಶೀಘ್ರವೇ 1500 ವೈದ್ಯರನ್ನು ನೇಮಕಾತಿ ಮಾಡಿಕೊಳ್ಳುತ್ತೇವೆ- ಸಿಎಂ ಬಿಎಸ್​ ಯಡಿಯೂರಪ್ಪ

| Updated By: ಸಾಧು ಶ್ರೀನಾಥ್​

Updated on: Dec 28, 2020 | 6:42 PM

ಇಂಥ ತುರ್ತು ಸಂದರ್ಭದಲ್ಲಿ 950 ಆರೋಗ್ಯ ಕೇಂದ್ರಗಳು 24 ಗಂಟೆಗಳ ಸತತ ಸೇವೆ ನೀಡುತ್ತಿವೆ. ಶೀಘ್ರವೇ ಹೊಸದಾಗಿ 1500 ವೈದ್ಯರನ್ನು ನಾವು ನೇಮಕ ಮಾಡಿಕೊಳ್ಳುತ್ತೇವೆ ಎಂದು ಬಿಎಸ್​ವೈ ಹೇಳಿದರು.

ಶೀಘ್ರವೇ 1500 ವೈದ್ಯರನ್ನು ನೇಮಕಾತಿ ಮಾಡಿಕೊಳ್ಳುತ್ತೇವೆ- ಸಿಎಂ ಬಿಎಸ್​ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us on

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ 1500 ವೈದ್ಯರನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಈ ಮೂಲಕ ಕೊರೊನಾದಂತಹ ತುರ್ತು ಪರಿಸ್ಥಿತಿಯಲ್ಲಿ ವೈದ್ಯಕೀಯ ಕ್ಷೇತ್ರವನ್ನು ಬಲಗೊಳಿಸಲು ಒತ್ತು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಈ ವಿಚಾರದ ಬಗ್ಗೆ ಮಾಹಿತಿ ನೀಡಿದ್ದಾರೆ. ವೈದ್ಯಕೀಯ ತುರ್ತು ಸಂದರ್ಭದಲ್ಲಿ 950 ಆರೋಗ್ಯ ಕೇಂದ್ರಗಳು 24 ಗಂಟೆಗಳ ಸತತ ಸೇವೆ ನೀಡುತ್ತಿವೆ. ಶೀಘ್ರವೇ ಹೊಸದಾಗಿ 1500 ವೈದ್ಯರನ್ನು ನಾವು ನೇಮಕ ಮಾಡಿಕೊಳ್ಳುತ್ತೇವೆ ಎಂದಿರುವ ಬಿಎಸ್​ವೈ, ವೈದ್ಯರು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡಲು ಆದ್ಯತೆ ನೀಡಬೇಕು ಎಂದು ಕರೆ ನೀಡಿದ್ದಾರೆ.

ಆರೋಗ್ಯ ಸಚಿವ ಡಾ. ಕೆ ಸುಧಾಕರ್​ ಅವರನ್ನು ಬಿಎಸ್​ ಯಡಿಯೂರಪ್ಪ ಅವರು ಹಾಡಿ ಹೊಗಳಿದ್ದಾರೆ. ಕೊವಿಡ್ ವೇಳೆ ಸುಧಾಕರ್ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಆರೋಗ್ಯ ಇಲಾಖೆಯ ಎಲ್ಲರೂ ಈ ರೀತಿ ಕೆಲಸ ಮಾಡಬೇಕು. ಆರೋಗ್ಯ ಇಲಾಖೆಯ ಅವಶ್ಯಕತೆಗಳನ್ನು ಸರ್ಕಾರ ನೆರವೇರಿಸಲಿದೆ ಎಂದು ಅವರು ಭರವಸೆ ನೀಡಿದರು.

 

ಶಾಲೆ ಪುನರಾರಂಭ ಜನವರಿ 1ಕ್ಕೆ ಫಿಕ್ಸ್; ಯಾವುದೇ ಬದಲಾವಣೆ ಇಲ್ಲ.. ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ