AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ನಡೆಯಬೇಕಿದ್ದ ಎಲ್ಲ ಚುನಾವಣೆಗಳನ್ನು ಮುಂದೂಡಲು ಮನವಿ; ಸಿಎಂ ಯಡಿಯೂರಪ್ಪ

ನಿನ್ನೆ ರಾತ್ರಿ ಕಂದಾಯ ಸಚಿವ ಆರ್. ಅಶೋಕ್ ಚುನಾವಣೆ ಮುಂದೂಡಲು ಮನವಿ ಸಲ್ಲಿಸುವ ಕುರಿತು ಸುಳಿವು ನೀಡಿದ್ದರು.

ನಾಳೆ ನಡೆಯಬೇಕಿದ್ದ ಎಲ್ಲ ಚುನಾವಣೆಗಳನ್ನು ಮುಂದೂಡಲು ಮನವಿ; ಸಿಎಂ ಯಡಿಯೂರಪ್ಪ
ಬಿ.ಎಸ್​.ಯಡಿಯೂರಪ್ಪ
Follow us
guruganesh bhat
|

Updated on:Apr 26, 2021 | 3:52 PM

ಬೆಂಗಳೂರು: ನಾಳೆ ನಡೆಯಬೇಕಿದ್ದ ಎಲ್ಲ ಚುನಾವಣೆಗಳನ್ನು ಮುಂದೂಡಲು ರಾಜ್ಯ ಸರ್ಕಾರವು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದಲ್ಲಿ ತಿಳಿಸಿದರು. ಕೊರೊನಾ ಸೋಂಕು ಹೆಚ್ಚಳದ ಬೆನ್ನಲ್ಲೇ ಕಟ್ಟುನಿಟ್ಟಿನ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು ಚುನಾವಣೆಗಳನ್ನು ಮುಂದೂಡಲು ಸರ್ಕಾರ ಮನವಿ ಮಾಡಲಿದೆ ಎಂದು ಅವರು ತಿಳಿಸಿದರು.

ಈ ಕುರಿತು ವಿವರಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಈಗಾಗಲೇ ಘೋಷಣೆಯಾಗಿರುವ ಚುನಾವಣೆ ನಡೆಯಲಿದೆ. ಬಳ್ಳಾರಿ, ರಾಮನಗರ ನಗರಸಭೆಗಳ ಚುನಾವಣೆಗಳು ನಡೆಯಲಿವೆ. ನಂತರದ ಚುನಾವಣೆ ಮಾತ್ರ ಮುಂದೂಡಿಕೆಗೆ ಶಿಫಾರಸು ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು.

ಈ ಸಂದರ್ಭದಲ್ಲಿ ಚುನಾವಣೆ ನಡೆಸಲು ಸಾಧ್ಯವಿಲ್ಲ. ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಚುನಾವಣೆಗಳನ್ನು ಮುಂದೂಡಲು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸುತ್ತೇವೆ. ಸರ್ಕಾರ ಹೊರಡಿಸಿದ ಎರಡನೇ ಮಾರ್ಗಸೂಚಿಯೇ ಮುಂದುವರಿಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ನಿನ್ನೆ ತಿಳಿಸಿದ್ದರು.

ಈಗಿನ ಕರ್ಫ್ಯೂ ಫಲಿತಾಂಶ 14 ದಿನದ ಬಳಿಕ ತಿಳಿಯಲಿದೆ. ಆನಂತರ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಮೇ 4ರಿಂದ8ರವರೆಗೆ ಕೊರೊನಾ ಸೋಂಕು ಹೆಚ್ಚಾಗಲಿದೆ  ಎಂದು ತಜ್ಞರು ತಿಳಿಸಿದ್ದಾರೆ. ಇದರ ಅನ್ವಯ ನಾವು ಮಾನದಂಡ ರೂಪಿಸಲಿದ್ದೇವೆ. ಆದರೆ ನಾಳೆ ಬೆಂಗಳೂರಿನ ಮಾರುಕಟ್ಟೆಗಳನ್ನು ಸ್ಥಳಾಂತರ ಮಾಡಲಾಗುವುದು. ಈ ನಿರ್ಧಾರಕ್ಕೆ ಸಂಪುಟ ಸಭೆಯ ಒಪ್ಪಿಗೆ ದೊರೆತಿದೆ ಎಂದು ಅವರು ತಿಳಿಸಿದ್ದರು.

ನಾಳೆಯಿಂದಲೇ ಕಟ್ಟುನಿಟ್ಟಿನ ಕ್ರಮ

ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಹೀಗಾಗಿ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್​ಡೌನ್ ಮಾಡಲು ನಿರ್ಧರಿಸಿದ್ದು, ನಾಳೆ ಸಂಜೆಯಿಂದ ಲಾಕ್​ಡೌನ್ ಜಾರಿಯಾಗಲಿದೆ. 15 ದಿನಗಳ ಕಾಲ ಈ ಕಠಿಣ ನಿಯಮ ಮುಂದುವರೆಯಲಿದೆ ಎಂದು ಸರ್ಕಾರ ತಿಳಿಸಿದೆ.

ಬೆಳಗ್ಗೆ 6-10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಉತ್ಪಾದನಾ ವಲಯ ಎಂದಿನಂತೆ ಮುಂದುವರಿಯುತ್ತದೆ. ಕೃಷಿ ಚಟುವಟಿಕೆಗಳಿಗೂ ಯಾವುದೇ ತೊಂದರೆ ಇಲ್ಲ. ರಾಜ್ಯದಲ್ಲಿ ಎಂದಿನಂತೆ ಕರ್ಫ್ಯೂ ಮುಂದುವರಿಯುತ್ತದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಇನ್ನುಮುಂದೆ ಆಕ್ಸಿಜನ್​ ಕೊರತೆಯಾಗುವುದಿಲ್ಲ. ರಾಜ್ಯಕ್ಕೆ 800 ಮೆಟ್ರಿಕ್ ಟನ್ ಆಕ್ಸಿಜನ್ ಕೊಡಲು ಕೇಂದ್ರ ಸರ್ಕಾರ ಕೊಡಲು ಒಪ್ಪಿಕೊಂಡಿದೆ. ಎಂದು ತಿಳಿಸಿದ್ದಾರೆ. ಅಲ್ಲದೇ ರೆಮ್​ಡೆಸಿವಿರ್​ ಇಂಜೆಕ್ಷನ್​ ಕೊರತೆಯೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎರಡು ವಾರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದಿದ್ದರೆ ಮತ್ತೆ ಕಠಿಣ ಕ್ರಮ ಮುಂದುವರೆಸಬೇಕಾದ ಅನಿವಾರ್ಯತೆ ಬರಬಹುದು. ಹಾಗಾಗಿ ಜನರು ಸಹಕಾರ ನೀಡಿ ಕೊರೊನಾ ನಿಯಂತ್ರಿಸಬೇಕು ಎಂದಿದ್ದಾರೆ. ಜನರ ಓಡಾಟಕ್ಕೆ ಸಾರಿಗೆ ಸಂಚಾರ ಇರುವುದಿಲ್ಲ. ಆದರೆ, ಸರಕು ಸಾಗಣೆ  ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

Published On - 3:11 pm, Mon, 26 April 21

ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ