ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಇಲ್ಲ; ಸಮಸ್ಯೆ ಪರಿಹರಿಸುವ ಭರವಸೆ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್
ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಬಸ್ ವ್ಯವಸ್ಥೆ ಇಲ್ಲ ಎಂಬ ವಿಚಾರದ ಬಗ್ಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಸಾರಿಗೆ ಇಲಾಖೆ ಜತೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾರೆ.
ನೆಲಮಂಗಲ: ರಾಜ್ಯಾದ್ಯಂತ ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಬಸ್ ಇಲ್ಲದಿರುವ ಸಮಸ್ಯೆ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಸಾರಿಗೆ ಇಲಾಖೆ ಅಗತ್ಯಕ್ಕೆ ತಕ್ಕಂತೆ ಬಸ್ ವ್ಯವಸ್ಥೆ ಮಾಡಿದ್ದು ಇಲಾಖೆ ಜತೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ.
ಖಾಸಗಿ ಶಾಲೆಗಳ ಶುಲ್ಕ ನಿಗದಿ ವಿಚಾರದ ಬಗ್ಗೆ ಮಾತನಾಡಿದ ಸಚಿವರು ಆಯುಕ್ತರು ಸಭೆ ಮಾಡಿದ್ದಾರೆ. ಈ ಬಗ್ಗೆ ಅವರು ವಿವರ ಸಲ್ಲಿಸಲಿದ್ದಾರೆ. ಪೋಷಕರಿಗೆ ಹೊರೆ ಆಗದಂತೆ, ಖಾಸಗಿ ಶಾಲಾ ಶಿಕ್ಷಕರಿಗೆ ವೇತನ ಸಿಗುವಂತೆ ವಿವರ ಕೊಡುತ್ತಾರೆ ಎಂದಿದ್ದಾರೆ.
ಓಡಾಡಲು ಬಸ್ ಇಲ್ಲ.. ಕೆಲಸಗಳು ಆಗ್ತಿಲ್ಲ: ಗ್ರಾಮೀಣ ಪ್ರದೇಶದವರ ಗೋಳು ಕೇಳೋರು ಯಾರು?