ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚನೆ: ಜಿ ಪರಮೇಶ್ವರ
ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಮೂಲಗಳನ್ನು ಪತ್ತೆ ಹಚ್ಚಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಮಾತನಾಡಿ ಈಗಿರುವ ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚಿಸಲಾಗುವುದು ಎಂದು ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ (Social Media) ಫೇಕ್ ನ್ಯೂಸ್ (Fake News) ಮೂಲಗಳನ್ನು ಪತ್ತೆ ಹಚ್ಚಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ (G Parameshwar) ಮಾತನಾಡಿ ಈಗಿರುವ ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚಿಸಲಾಗುವುದು. ಗೂಗಲ್, ಫೇಸ್ ಬುಕ್, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣದ ಮುಖ್ಯಸ್ಥರ ಸಭೆ ಕರೆಯಲಾಗುತ್ತಿದೆ. ಫೇಕ್ ಸುದ್ದಿ ಹರಿಬಿಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದಕ್ಕೆ ಮೊದಲು ಕಡಿವಾಣ ಹಾಕಲಾಗುವುದು ಎಂದರು.
ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಯಾರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಡುತ್ತಾರೋ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಯಾವುದೇ ಪಕ್ಷ, ಸಂಘಟನೆ ಇರಲಿ ಕ್ರಮ ನಿಶ್ಚಿತ. ಈಗಿರುವ ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚಿಸಲಾಗುವುದು. ಫೇಕ್ ಸುದ್ದಿ ಹರಿಬಿಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದಕ್ಕೆ ಮೊದಲು ಕಡಿವಾಣ ಹಾಕಲಾಗುವುದು. ಯಾರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಡುತ್ತಾರೆ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಖಡಖ್ ಸೂಚನೆ ನೀಡಿದರು.
ಇದನ್ನೂ ಓದಿ: ಭಾರತೀಯರಿಗೆ ಸಂವಿಧಾನವೇ ಭಗವದ್ಗೀತೆ, ಬೈಬಲ್, ಕುರಾನ್: ಬಿಜೆಪಿಗೆ ತಿರುಗೇಟು ನೀಡಿದ ಜಿ ಪರಮೇಶ್ವರ
ಫೇಕ್ ನ್ಯೂಸ್ ಮೂಲ ಪತ್ತೆ ಮಾಡಲು ಸಿಎಂ ಖಡಕ್ ಸೂಚನೆ
ಫೇಕ್‌ನ್ಯೂಸ್ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಂದು (ಜೂನ್ 20) ತಮ್ಮನ್ನು ಭೇಟಿ ಮಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರ ಜತೆಗೂ ಈ ಬಗ್ಗೆ ಸಿಎಂ ವಿವರವಾಗಿ ಚರ್ಚಿಸಿದ್ದರು.
2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್ ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿ ಮೂಲಗಳನ್ನು ಪತ್ತೆ ಮಾಡಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸೂಚಿಸಿದ್ದರು.
ಕಮಿಷನರೇಟ್/ ಪ್ರಧಾನ ಕಚೇರಿಯಲ್ಲಿ ಫ್ಯಾಕ್ಟ್ ಚೆಕ್
ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ, ಫ್ಯಾಕ್ಟ್ ಚೆಕ್ (Fact Check) ಮಾಡಿ ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್ ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು.
ಸೈಬರ್ ಪೊಲೀಸರು ಫೇಕ್ ನ್ಯೂಸ್ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ದವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು ಎಂದು ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಸುದ್ದಿ ಪೋಸ್ಟ್ ಮಾಡುವುದು ಅಥವಾ ಶೇರ್ ಮಾಡುವವರು ಕೊಂಚ ಎಚ್ಚರಿಂದ ಇರುವುದು ಒಳಿತು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ