ಕನ್ನಡವನ್ನು ಕೀಳಾಗಿ ಬಿಂಬಿಸಿದ ಗೂಗಲ್ ವಿರುದ್ಧ ಕಾನೂನು ಕ್ರಮ: ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ

| Updated By: guruganesh bhat

Updated on: Jun 03, 2021 | 4:19 PM

Ugliest Language in India: ಗೂಗಲ್ ಆಗಲಿ ,ಬೇರೆ ಯಾರೇ ಆಗಲಿ ಕನ್ನಡ ಭಾಷೆ ಬಗ್ಗೆ ಗೌರವವಿಲ್ಲದೆ ವರ್ತಿಸಿದರೆ ಅಥವಾ ಕನ್ನಡಕ್ಕೆ ಅಪಮಾನ ಎಸಗಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಕನ್ನಡವನ್ನು ಕೀಳಾಗಿ ಬಿಂಬಿಸಿದ ಗೂಗಲ್ ವಿರುದ್ಧ ಕಾನೂನು ಕ್ರಮ: ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ
ಅರವಿಂದ ಲಿಂಬಾವಳಿ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಕನ್ನಡವನ್ನು ಕೊಳಕು ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಸದ್ಯ ಕನ್ನಡಿಗರ ಆಕ್ರೋಶಕ್ಕೆ ಮಣಿದು ಕರ್ನಾಟಕ ಕೀಳು ಭಾಷೆಯೆಂಬ ( Ugliest Language in India) ಲೇಖನವನ್ನು ಗೂಗಲ್ ಕೈಬಿಟ್ಟಿದೆಯಾದರೂ  ಕರ್ನಾಟಕ ರಾಜ್ಯ ಸರ್ಕಾರ ಗೂಗಲ್ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಅವರು ಮಾಹಿತಿ ನೀಡಿದ್ದಾರೆ.

ಭಾರತದ ಕೊಳಕು ಭಾಷೆ ಯಾವುದು ಎಂದು ನೆಟ್ಟಿಗರು ಗೂಗಲ್ ನಲ್ಲಿ ಪ್ರಶ್ನೆ ಮಾಡಿದರೆ ಕನ್ನಡ ಎಂಬ ಉತ್ತರ ಬರುತ್ತಿತ್ತು. ಈ ವಿಚಾರವನ್ನು ಸಚಿವ ಅರವಿಂದ ಲಿಂಬಾವಳಿ ಅವರ ಗಮನಕ್ಕೆ ತಂದಾಗ, ಅವರು ಇದು ಅತ್ಯಂತ ಖಂಡನೀಯ ಸಂಗತಿ. ಗೂಗಲ್ ಆಗಲಿ ,ಬೇರೆ ಯಾರೇ ಆಗಲಿ ಕನ್ನಡ ಭಾಷೆ ಬಗ್ಗೆ ಗೌರವವಿಲ್ಲದೆ ವರ್ತಿಸಿದರೆ ಅಥವಾ ಕನ್ನಡಕ್ಕೆ ಅಪಮಾನ ಎಸಗಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು. ಕನ್ನಡ ಭಾಷೆ ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿದೆ ಭಾರತದ ಶಾಸ್ತ್ರೀಯ ಭಾಷೆ ಎಂಬ ಹೆಗ್ಗಳಿಕೆ ಪಡೆದಿರುವ ಭಾಷೆಯ ಬಗ್ಗೆ ಕೀಳಾಗಿ ಮಾತಾಡಿದರೂ ಅದನ್ನು ಸಹಿಸಲಾಗುವುದಿಲ್ಲ, ಸದ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅವರಿಗೆ ಈ ಸಂಬಂಧ ಕಾನೂನು ಇಲಾಖೆಯ ಜೊತೆಗೂಡಿ ಚರ್ಚಿಸಿ ಕೂಡಲೇ ಗೂಗಲ್ ಗೆ ನೋಟಿಸ್ ನೀಡಲು ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಅನಾವಶ್ಯಕವಾಗಿ ಕನ್ನಡಿಗರನ್ನು, ಕನ್ನಡ ಭಾಷೆಯನ್ನು ಕೀಳೆಂದು ಬಿಂಬಿಸುವ ಯತ್ನದ ವಿರುದ್ಧ ಧ್ವನಿ ಎತ್ತಲಾಗುತ್ತಿದೆ. ಗೂಗಲ್​ನಂತಹ ದೊಡ್ಡ ಸಂಸ್ಥೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಹಾಗೂ ಈ ಕೂಡಲೇ ಪ್ರಮಾದವನ್ನು ಸರಿಪಡಿಸಬೇಕು ಎಂದು ಕನ್ನಡಿಗರು ಒಕ್ಕೊರಲಿನಿಂದ ಆಗ್ರಹಿಸುತ್ತಿದ್ದಾರೆ. debtconsolidationsquad.com ಎಂಬ ಜಾಲತಾಣದಲ್ಲಿ ಇದು ಮೊದಲು ಕಂಡುಬಂದಿದ್ದು, ಸದ್ಯ ಆ ಲೇಖನವನ್ನು ಹಿಂಪಡೆಯಲಾಗಿದೆ.

ಇದನ್ನೂ ಓದಿ: PU Exams 2021: ಜುಲೈ 7ರಿಂದ ಪಿಯು ಪರೀಕ್ಷೆ ಎಂದು ಡಿಸಿಎಂ ಅಶ್ವತ್ಥ್​ ನಾರಾಯಣ ಹೆಸರಲ್ಲಿ ಮಾಡಲಾದ ಟ್ವೀಟ್ ಸುಳ್ಳು; ನಂಬಬೇಡಿ ಎಂದು ಸಚಿವರ ಮನವಿ

ಜೂನ್ ತಿಂಗಳಲ್ಲಿ ರಾಜ್ಯದ 60 ಲಕ್ಷಕ್ಕೂ ಹೆಚ್ಚು ಜನರಿಗೆ ಕೊವಿಡ್ ಲಸಿಕೆ ವಿತರಿಸಲು ಸಿದ್ಧತೆ: ಸಿಎಂ ಯಡಿಯೂರಪ್ಪ

(Will take action against Google for used Ugliest Language in India as Kannada says Karnataka Culture Minister Arvind Limbavali)

Published On - 4:05 pm, Thu, 3 June 21