PFI ಬ್ಯಾನ್ ಕುರಿತು ಗೃಹ ಇಲಾಖೆ ಜೊತೆ ಚರ್ಚೆ -ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ

ಪ್ರವೀಣ್ ಹತ್ಯೆಯಿಂದಾಗಿ ರಾಜ್ಯದಲ್ಲಿ ಜನಾಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಪಿ.ಎಫ್.ಐ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಗೃಹ ಇಲಾಖೆ ಜೊತೆ ಚರ್ಚೆ ನಡೆಸುವ ಬಗ್ಗೆ ಜೋಶಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

PFI ಬ್ಯಾನ್ ಕುರಿತು ಗೃಹ ಇಲಾಖೆ ಜೊತೆ ಚರ್ಚೆ -ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ
PFI ಬ್ಯಾನ್ ಕುರಿತು ಗೃಹ ಇಲಾಖೆ ಜೊತೆ ಚರ್ಚೆ -ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 28, 2022 | 3:45 PM

ಪಿಎಫ್ ಐ ಸಂಘಟನೆ (People’s Front Of India -PFI)ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಸಿಎಂ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತಂತೆ ಸಿಎಂ ಬಸವರಾಜ್ ಬೊಮ್ಮಾಯಿ ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರ್ ( Praveen Nettar) ಅವರ ಹತ್ಯೆ ಹಿಂದೆ ಪಿ.ಎಫ್.ಐ ಸಂಘಟನೆಗಳ ಕೈವಾಡ ಇರುವ ಬಗ್ಗೆ ಸಿಎಂ ಬೊಮ್ಮಾಯಿ ಶಂಕೆ ವ್ಯಕ್ತಪಡಿಸಿದ್ದಾರೆ.

ಪಿಎಫ್ ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂಥಹ ಸಂಘಟನೆಗಳನ್ನ ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಸಿಎಂ ಬಸವರಾಜ ಬೊಮ್ಮಾಯಿ ಅವರದ್ದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆಯ ಜೊತೆ ಚರ್ಚೆ ನಡೆಸುವುದಾಗಿ ನನ್ನ ಜೊತೆ ಮಾತನಾಡುವಾಗ ತಿಳಿಸಿದ್ದಾರೆ ಎಂದರು.

ಪ್ರವೀಣ್ ನೆಟ್ಟಾರ್ ಹತ್ಯೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪಿ.ಎಫ್.ಐ, ಎಸ್.ಡಿ.ಪಿ.ಐ ಸಂಘಟನೆಯವರು ಇಂಥ ಕೃತ್ಯದ ಹಿಂದಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದ್ದರು. ಈ ಸಂಘಟನೆಗಳ ಕೈವಾಡ ಇರುವ ಬಗ್ಗೆ ಹಲವು ಪ್ರಾಥಮಿಕ ಮಾಹಿತಿಗಳು ಮತ್ತು ಮಾಧ್ಯಮ ವರದಿಗಳು ಇವೆ. ಇಂಥ ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ ನೀಡಲಾಗ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದರು.

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್